Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

September 16, 2026 | Siddesh
Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!
Share Now:

2026-2027 ನೇ ಸಾಲಿನ ಬಿಬಿಎ, ಬಿಎಫ್‌ಐಎ, ಬಿ.ಕಾಂ (ಎಚ್, ಇ), ಬ್ಯಾಚುಲರ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಬಿಎಂಎಸ್), ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (ಐಪಿಎಂ), ಬಿಎ (ಅರ್ಥಶಾಸ್ತ್ರ), ಮತ್ತು ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್) ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನದ ಅಡಿಯಲ್ಲಿ 40,000 ರಿಂದ 5,50,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30 ಸೆಪ್ಟೆಂಬರ್ 2026

ಇದನ್ನೂ ಓದಿ: B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Scholorship Amount-ಇದರ ಅಡಿಯಲ್ಲಿ ಎಷ್ಟು ಸಹಾಯಧನ ಪಡೆಯಬಹುದು?

ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನ 2026 ನೇ ಸಾಲಿನ ವಿದ್ಯಾರ್ಥಿವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ 40,000 ರಿಂದ 5,50,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯುವ ಅವಕಾಶವಿರುತ್ತದೆ.

Eligibility Crtiria-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.

ಬಿಬಿಎ, ಬಿಎಫ್‌ಐಎ, ಬಿ.ಕಾಂ (ಎಚ್, ಇ), ಬ್ಯಾಚುಲರ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಬಿಎಂಎಸ್), ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (ಐಪಿಎಂ), ಬಿಎ (ಅರ್ಥಶಾಸ್ತ್ರ), ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್), ಅಥವಾ ಯಾವುದೇ ಇತರ ಹಣಕಾಸು-ಸಂಬಂಧಿತ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಅರ್ಜಿದಾರ‍ ವಿದ್ಯಾರ್ಥಿಯು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿಯ ವಾರ್ಷಿಕ ಆದಾಯದ ಮಿತಿಯು 6 ಲಕ್ಷ ಮೀರಿರಬಾರದು.

ಹೀರೋ ಫಿನ್‌ಕಾರ್ಪ್, ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಮತ್ತು ಬಡ್ಡಿ4ಸ್ಟಡಿಯ ಉದ್ಯೋಗಿಗಳು/ಗುತ್ತಿಗೆ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅನರ್ಹರು.

ಇದನ್ನೂ ಓದಿ: kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

Documents Required-ಅರ್ಜಿ ಸಲ್ಲಿಸಲು ಲಗತ್ತಿಸಬೇಕಾದ ದಾಖಲಾತಿಗಳಾವುವು?

ವಿದ್ಯಾರ್ಥಿವೇತನವನ್ನು ಪಡೆಯಲು ಈ ಕೆಳಗೆ ತಿಳಿಸಿರುವ ದಾಖಲಾತಿಗಳನ್ನು ಲಗತ್ತಿಸಬೇಕು:

  • ಆಧಾರ ಕಾರ್ಡ
  • ಪ್ಯಾನ್ ಕಾರ್ಡ
  • ಪ್ರಸ್ತುತ ಶೈಕ್ಷಣಿಕ ವರ್ಷದ ಕಾಲೇಜು ಗುರುತಿನ ಚೀಟಿ
  • 10ನೇ ಮತ್ತು 12ನೇ ತರಗತಿಯ ಅಂಕಪಟ್ಟಿಗಳು
  • ಅರ್ಜಿದಾರರ ಲಿಂಕ್ಡ್‌ಇನ್ ಪ್ರೊಫೈಲ್‌ನ URL
  • ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಪುಸ್ತಕ
  • ಅಫಿಡವಿಟ್

ಇದನ್ನೂ ಓದಿ: SBI Platinum Scholarship-ಪದವಿಪೂರ್ವ ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ವತಿಯಿಂದ 75,000 ವಿದ್ಯಾರ್ಥಿವೇತನ!

b com scholorship

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

Online Application Process-ಅರ್ಜಿ ಸಲ್ಲಿಸುವ ವಿಧಾನ:

Step-1: ಆಸಕ್ತ ಅರ್ಹ ವಿದ್ಯಾರ್ಥಿಗಳು ಮೊದಲು ಈ ಲಿಂಕ್ "Raman Kant Munjal Scholarships" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: JK Tyre Scholarship-JK ಟೈರ್ ಶಿಕ್ಷಾ ಸಾರಥಿ ಯೋಜನೆಯಡಿ 25,000 ವಿದ್ಯಾರ್ಥಿವೇತನ! ಇನ್ನೂ 5 ದಿನ ಬಾಕಿ!

More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: