Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

September 21, 2026 | Siddesh
Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!
Share Now:

2026-2027 ನೇ ಸಾಲಿನಲ್ಲಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಬಡ ವರ್ಗದ ಕುಟುಂಬದ ಮಹಿಳೆಯರಿಗೆ ಉಚಿತ ಟೈಲರಿಂಗ್ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಈ ಯೋಜನೆಯಲ್ಲಿ ಹೊಲಿಗೆ ಯಂತ್ರದ ನೆರವಿನಿಂದ ಮನೆಯಲ್ಲಿಯೇ ಕುಳಿತು ಸ್ವಯಂ ಉದ್ಯೋಗ ಆರಂಭಿಸುವಿದಲ್ಲದೆ, ಇದರಿಂದ ಮಹಿಳೆಯರು ತಮ್ಮ ಆದಾಯವನ್ನು ಹೆಚ್ಚಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಯಾಗಲು ಸಹಾಯವಾಗಲಿದೆ ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗೆ ಸಹಯಕಾರಿಯಾಗಿದೆ.

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ವಿಧಾನಗಳಾವುವು? ಇನ್ನಿತರ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30 ಸೆಪ್ಟೆಂಬರ್ 2026

Free Sewing Machine Purpose-ಯೋಜನೆಯ ಮುಖ್ಯ ಉದ್ದೇಶ:

ಇಂದಿನ ದಿನಗಳಲ್ಲಿ ಸಿದ್ಧ ಉಡುಪುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಅನೇಕರು ಟೈಲರಿಂಗ್ ಕಲಿತಿದ್ದರೂ, ಆಧುನಿಕ ವಿದ್ಯುತ್ ಚಾಲಿತ ಯಂತ್ರಗಳನ್ನು ಕೊಳ್ಳಲು ಹಣಕಾಸಿನ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹವರಿಗೆ ನೆರವಾಗಲು ಈ ಸೌಲಭ್ಯವನ್ನು ಜಾರಿಗೆ ತರಲಾಗಿದ್ದು, ಇದರಿಂದ ಕುಶಲಕರ್ಮಿಗಳು ತಮ್ಮ ಮನೆಯಲ್ಲಿಯೇ ಸ್ವಂತ ಉದ್ಯೋಗ ಆರಂಭಿಸಿ, ಗೌರವಯುತ ಜೀವನ ನಡೆಸಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ ಅಭ್ಯರ್ಥಿಯ ವಯಸ್ಸು 18 ರಿಂದ 50 ವರ್ಷದ ಒಳಗಿರಬೇಕು.

ಹಿಂದುಳಿದ ವರ್ಗಗಳ ಪ್ರವರ್ಗ-೧, 2A, 3A, 3B, ಗೆ ಸೇರಿದವರಾಗಿರಬೇಕು.

ಅರ್ಜಿದಾರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.

ಅರ್ಜಿದಾರರು ಟೈಲರಿಂಗ್ (ಹೊಲಿಗೆ) ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು.

ಯಾವುದೇ ಸರ್ಕಾರಿ ನೌಕರರು ಅಥವಾ ಅವರ ಮೇಲೆ ಅವಲಂಬಿತರಾದ ಕುಟುಂಬದ ಸದಸ್ಯರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಈ ಯೋಜನೆಯು ಮುಖ್ಯವಾಗಿ ಬಡತನ ರೇಖೆಗಿಂತ ಕೆಳಗಿರುವ ಮತ್ತು ವೃತ್ತಿ ಕೌಶಲ ಹೊಂದಿರುವ ಕುಶಲಕರ್ಮಿಗಳಿಗಾಗಿ ಮೀಸಲಾಗಿದೆ.

ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

free sewing machine application

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

Required Documents Free Sewing Machine-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

  • ಪಾಸ್ಪೋರ್ಟ್ ಗಾತ್ರದ ಭಾವಚಿತ್ರ.
  • ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣಪತ್ರ / ಎಸ್.ಎಸ್.ಎಲ್.ಸಿ ಅಂಕಪಟ್ಟಿ / ಇನ್ನಿತರ ಪ್ರಮಾಣಪತ್ರ) (in PDF file),
  • ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣಪತ್ರ / ಅಂಕಪಟ್ಟಿ)
  • ಜಾತಿ ಪ್ರಮಾಣ ಪತ್ರ (ಪ.ಜಾ , ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್ರ)
  • ಪಡಿತರ ಚೀಟಿ ,
  • ಮತದಾರರ ಗುರುತಿನ ಚೀಟಿ ,
  • ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೈಲರಿಂಗ್) ವೃತ್ತಿ ಮಾಡುತ್ತಿರುವ ಬಗ್ಗೆ ಧೃಢೀಕರಣ ಪ್ರಮಾಣಪತ್ರ.

ಇದನ್ನೂ ಓದಿ: SBI Platinum Scholarship-ಪದವಿಪೂರ್ವ ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ವತಿಯಿಂದ 75,000 ವಿದ್ಯಾರ್ಥಿವೇತನ!

How To APply-ಅರ್ಜಿ ಸಲ್ಲಿಸುವ ವಿಧಾನ:

ಈ ಮೇಲೆ ತಿಳಿಸಿರುವ ಸೌಲಭ್ಯವನ್ನು ಪಡೆಯಲು ಆಸಕ್ತಿ ಇರುವ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ವೆಬ್ಸೈಟ್ ಅನ್ನು ಭೇಟಿ ಮಾಡಿ ಕೆಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

ಅಥವಾ ಅಭ್ಯರ್ಥಿಯು ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: JK Tyre Scholarship-JK ಟೈರ್ ಶಿಕ್ಷಾ ಸಾರಥಿ ಯೋಜನೆಯಡಿ 25,000 ವಿದ್ಯಾರ್ಥಿವೇತನ! ಇನ್ನೂ 5 ದಿನ ಬಾಕಿ!

More Information:

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Click Here
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಲಿಂಕ್: Read More
ಸಹಾಯವಾಣಿ ಸಂಖ್ಯೆ: 080-22374832, 8050770004, 8050770005

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: