SHG Subsidy Scheme-ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 2 ಲಕ್ಷ ಸಹಾಯಧನ!

September 27, 2026 | Siddesh
SHG Subsidy Scheme-ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 2 ಲಕ್ಷ ಸಹಾಯಧನ!
Share Now:

ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯ ಅಡಿಯಲ್ಲಿ ಶೇ. 50 ರಷ್ಟು ಅಥವಾ ಗರಿಷ್ಟ 2 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕವೆಚ್ಚದ ಶೇ.50 ಅಥವಾ ಗರಿಷ್ಠ ರೂ.2.00 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು.

ಇದನ್ನೂ ಓದಿ: Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!

ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last date to apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2026

Eligibility Critiriaಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಯೋಜನೆಯಡಿಯಲ್ಲಿ ಸಬ್ಸಿಡಿ ಪಡೆಯುವ ಸ್ವ-ಸಹಾಯ ಗುಂಪುಗಳು ಕ್ರಿಶ್ಚಿಯನ್‌ ಸಮುದಾಯಕ್ಕೆ ಸೇರಿದ ಮಹಿಳೆಯರಾಗಿರಬೇಕು.

ಮಹಿಳಾ ಸ್ವಸಹಾಯ ಸಂಘದ ಸದಸ್ಯರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.

ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರ ಸಂಖ್ಯೆ 10 ರಿಂದ 20ರೊಳಗಿರಬೇಕು.

ಮಹಿಳಾ ಸ್ವಸಹಾಯ ಸಂಘದಲ್ಲಿ ಒಂದು ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶವಿರುತ್ತದೆ.

ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಕುಟುಂಬದ ಆದಾಯ ರೂ.6.00 ಲಕ್ಷ ಮೀರಿರಬಾರದು.

ಸ್ವಸಹಾಯ ಸಂಘದ ಸದಸ್ಯರ ವಯಸ್ಸು 18 ರಿಂದ 55 ವರ್ಷಗಳ ಒಳಗಿರತಕ್ಕದ್ದು.

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

ಮಹಿಳಾ ಸ್ವಸಹಾಯ ಸಂಘವು (SHG) NRLM/NULM ಅಡಿಯಲ್ಲಿ ನೋಂದಾಯಿತವಾಗಿರಬೇಕು.

ಸ್ವಸಹಾಯ ಸದಸ್ಯರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಉದ್ಯೋಗಿಗಳಾಗಿರಬಾರದು.

ಸಂಘದ ಸದಸ್ಯರು ಅಥವಾ ಅವರ ಕುಟುಂಬದ ಸದಸ್ಯರು ಅರಿವು ಮತ್ತು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗಳನ್ನು ಹೊರತುಪಡಿಸಿ ಕಳೆದ 5 ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ/ಸಹಾಯಧನ ಸೌಲಭ್ಯ ಪಡೆದಿರಬಾರದು.

ಸ್ವಸಹಾಯ ಸಂಘದ ಸದಸ್ಯರು ನಿಗಮದ ಸುಸ್ಥಿದಾರರಾಗಿರಬಾರದು
ಮಹಿಳಾ ಸ್ವಸಹಾಯ ಗುಂಪು ನಿಯಮಿತವಾಗಿ ಸಭೆಗಳನ್ನು ನಡೆಸತಕ್ಕದ್ದು (ಕನಿಷ್ಠ ತಿಂಗಳಿಗೆ ಒಂದು ಸಭೆ).

ಸ್ವಸಹಾಯ ಗುಂಪು ನಿಗದಿತವಾಗಿ ಉಳಿತಾಯ ಮಾಡುವುದು ಮತ್ತು ಸ್ವಸಹಾಯ ಗುಂಪಿನ ಉಳಿತಾಯದ ಮೊತ್ತದಿಂದ ಗುಂಪಿನ ಸದಸ್ಯರಿಗೆ ಅವಶ್ಯಕತೆಗೆ ತಕ್ಕಂತೆ ಆಂತರಿಕ ಸಾಲವನ್ನು ನೀಡುವುದು.

ಆಂತರಿಕ ಸಾಲದ ಮರುಪಾವತಿಗೆ ಒತ್ತುನೀಡಿ ಸಾಲದ ಮರುಪಾವತಿ ಉತ್ತಮವಾಗಿರುವ ಸ್ವಸಹಾಯ ಸಂಘಗಳಿಗೆ ನಿಗಮದಿಂದ ಸಹಾಯಧನ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು.

ಸ್ವಸಹಾಯ ಗುಂಪಿನ, ದಾಖಲೆ ಪುಸ್ತಕಗಳನ್ನು ಸಮರ್ಪಕವಾಗಿ ನಿರ್ವಹಿಸುವುದು.

ನಿಗಮದ ಸಹಾಯಧನ ಪಡೆಯಲು ಸ್ವಸಹಾಯ ಗುಂಪು ರಚನೆಯಾಗಿ ಕನಿಷ್ಠ 6 ತಿಂಗಳಾಗಿರಬೇಕು.

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಸ್ವಸಹಾಯ ಗುಂಪಿನ ಸ್ವಯಂ ಉದ್ಯೋಗ ಚಟುವಟಿಕೆಯ ಯೋಜನಾ ವರದಿ.

ಸ್ವಸಹಾಯ ಗುಂಪಿನ ಬ್ಯಾಂಕ್‌ ಪಾಸ್‌ ಪುಸ್ತಕದ ಪ್ರತಿ.

ಸ್ವ-ಸಹಾಯ ಸಂಘದ ಎಲ್ಲಾ ಸದಸ್ಯರ ಸಾಮೂಹಿಕ ಫೋಟೋ.

ಸ್ವಸಹಾಯ ಸಂಘದ ಸಾಮಾನ್ಯ ಸಭೆ ನಡವಳಿ ಪುಸ್ತಕದ ಪ್ರತಿ.

NRLM/NULM ನಿಂದ ಪಡೆದ ಸ್ವಸಹಾಯ ಸಂಘದ (SHG) ನೋಂದಣಿ ಪ್ರಮಾಣಪತ್ರ.

ರೂ. 100ರ ಇ-ಸ್ಟಾಂಪ್ ಪೇಪರ್‌ನಲ್ಲಿ ಮಾಡಲಾದ ಅಫಿಡವಿಟ್

ಇದನ್ನೂ ಓದಿ: B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

shg scheme amount

ಇದನ್ನೂ ಓದಿ: kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

Online Application Proces-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳಾವುವು?

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಆಯ್ಕೆಯಾದ ಅರ್ಹ ಮಹಿಳಾ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿದಾರರು ಮೊದಲು ಇಲ್ಲಿ ನೀಡಿರುವ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ "ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ"ದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪುಟದಲ್ಲಿ ಕಾಣುವ "ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ" ಯ ಮುಂದೆ ಕಾಣಿಸುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಅರ್ಜಿದಾರರೇನಾದರು ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿದ್ದರೆ? ಹಾಗದರೆ ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು Password ಅನ್ನು ಸಿದ್ದ ಮಾಡಿಕೊಂಡು Log In ಆಗಬೇಕು.

Step-4: ಲಾಗಿನ್ ಆದ ನಂತರ ಅಧಿಕೃತ ಅರ್ಜಿ ಪ್ರತಿ ಓಪನ್ ಆಗುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

More Information-ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: