Aditya Birla Capital Scholarship-ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನ ವತಿಯಿಂದ 60,000 ವಿದ್ಯಾರ್ಥಿವೇತನ!

September 28, 2026 | Siddesh
Aditya Birla Capital Scholarship-ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನ ವತಿಯಿಂದ 60,000 ವಿದ್ಯಾರ್ಥಿವೇತನ!
Share Now:

ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನ ಕಾರ್ಯಕ್ರಮ 2026-2027 ನೇ ಸಾಲಿನಲ್ಲಿ ಭಾರತದಾದ್ಯಂತ ಮಾನ್ಯತೆ ಪಡೆದ ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಂಸ್ಥೆಗಳಲ್ಲಿ 9 ರಿಂದ 12 ನೇ ತರಗತಿ, ಪಾಲಿಟೆಕ್ನಿಕ್ ಡಿಪ್ಲೊಮಾ, ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಓದುತ್ತಿರುವ ಹುಡುಗಿಯರಿಗೆ ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನ ವತಿಯಿಂದ 60,000 ದ ವರೆಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆರ್ಥಿಕ ಸಹಾಯವನ್ನು ಪಡೆಯಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಇದನ್ನೂ ಓದಿ: Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Last date to apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2026

Scholorship Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು?

ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಆಸಕ್ತ ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ:

9-12 ನೇ ತರಗತಿ ಮತ್ತು ಪಾಲಿಟೆಕ್ನಿಕ್ ಡಿಪ್ಲೊಮಾ ವಿದ್ಯಾರ್ಥಿಗಳು: 25,000 (ಒಂದು ವರ್ಷಕ್ಕೆ)
ಪದವಿಪೂರ್ವ ವಿದ್ಯಾರ್ಥಿಗಳು: 45,000 ವರೆಗೆ (ಒಂದು ವರ್ಷಕ್ಕೆ)
ಸ್ನಾತಕೋತ್ತರ ವಿದ್ಯಾರ್ಥಿಗಳು: 60,000 (ಒಂದು ವರ್ಷಕ್ಕೆ)

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಭಾರತದಾದ್ಯಂತ ಮಾನ್ಯತೆ ಪಡೆದ ಸರ್ಕಾರಿ ಶಾಲೆಗಳು/ಕಾಲೇಜುಗಳು/ಸಂಸ್ಥೆಗಳಲ್ಲಿ ಪ್ರಸ್ತುತ 9 ರಿಂದ 12 ನೇ ತರಗತಿಗಳು, ಪಾಲಿಟೆಕ್ನಿಕ್ ಡಿಪ್ಲೊಮಾ, ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ದಾಖಲಾಗಿರುವ ಪ್ರತಿಭಾನ್ವಿತ ಬಾಲಕಿಯರಿಗೆ ಮಾತ್ರ ಮುಕ್ತವಾಗಿದೆ.

ಅರ್ಜಿದಾರ ವಿದ್ಯಾರ್ಥಿಗಳು ತಮ್ಮ ಇತ್ತೀಚಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ಮೀರಬಾರದು.

ಆದಿತ್ಯ ಬಿರ್ಲಾ ಕ್ಯಾಪಿಟಲ್, ಅದರ ಅಂಗಸಂಸ್ಥೆ/ಜೆವಿ ವ್ಯವಹಾರಗಳು ಮತ್ತು ಬಡ್ಡಿ4ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ಆಧಾರ್ ಕಾರ್ಡ
  • ಹಿಂದಿನ ತರಗತಿ ಅಂಕಪಟ್ಟಿ
  • 10 ಮತ್ತು 12 ನೇ ತರಗತಿಯ ಅಂಕಪಟ್ಟಿ
  • ಪ್ರಸ್ತುತ ವರ್ಷದ ಪ್ರವೇಶ ಪುರಾವೆ
  • ಶೈಕ್ಷಣಿಕ ವೆಚ್ಚಗಳ ರಸೀದಿಗಳು
  • ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ
  • ಮೊಬೈಲ್ ನಂಬರ್

ಇದನ್ನೂ ಓದಿ: B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

ಇದನ್ನೂ ಓದಿ: kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ವಿದ್ಯಾರ್ಥಿಗಳು ಮೊದಲು ಈ ಲಿಂಕ್ "Aditya Birla Capital Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

More Information-ವಿದ್ಯಾರ್ಥಿವೇತನದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: