Arivu Scheme 2026-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ 5 ಲಕ್ಷದವರೆಗೆ ಕಡಿಮೆ ಬಡ್ಡಿ ಸಾಲ!

September 30, 2026 | Siddesh
Arivu Scheme 2026-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ 5 ಲಕ್ಷದವರೆಗೆ ಕಡಿಮೆ ಬಡ್ಡಿ ಸಾಲ!
Share Now:

2026-2027 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ (ನವೀಕರಣ)ಯ ಅಡಿಯಲ್ಲಿ ವೃತ್ತಿಪರ ಕೋರ್ಸ್‌ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ₹50,000 ರಿಂದ ₹5.00 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವಾಗ, ಅರ್ಜಿದಾರರು ಪ್ರಸ್ತುತ ಬಾಕಿ ಇರುವ ಮೂಲಧನ (Principal) ಮೊತ್ತದ 12% ಅನ್ನು ಮರುಪಾವತಿಸಬೇಕು. ಹಾಗೆಯೇ ಕೋರ್ಸ್ ಪೂರ್ಣಗೊಂಡ ನಂತರ ಆರು ತಿಂಗಳ ಬಳಿಕ ಸಾಲ ಮರುಪಾವತಿ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: Aditya Birla Capital Scholarship-ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನ ವತಿಯಿಂದ 60,000 ವಿದ್ಯಾರ್ಥಿವೇತನ!

ಈ ಯೋಜನೆಯ ಅಡಿಯಲ್ಲಿ ಸಾಲವನ್ನು ಪಡೆಯಲು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳನ್ನು ನೀಡಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವೆಲ್ಲಾ ಹಂತಗಳನ್ನು ಅನುಸರಿಸಬೇಕು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date To APply-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 31 ಅಕ್ಟೋಬರ್ 2026

Who Can APply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರರು ಕರ್ನಾಟಕದ ಕ್ರಿಶ್ಚಿಯನ್ ಸಮುದಾಯಕ್ಕೆ (ಅಲ್ಪಸಂಖ್ಯಾತ) ಸೇರಿರಬೇಕು
ಕರ್ನಾಟಕ ರಾಜ್ಯದ ಸ್ಥಾಯಿ ನಿವಾಸಿ ಆಗಿರಬೇಕು.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ರೂ 8.00 ಲಕ್ಷ ಮೀರಿರಬಾರದು. ವಿದ್ಯಾರ್ಥಿಯ ಪೋಷಕರು ಸರ್ಕಾರಿ ಅಧಿಕಾರಿ/ನೌಕರರಾಗಿದ್ದಲ್ಲಿ ತಮ್ಮ ಮೇಲಾಧಿಕಾರಿಗಳಿಂದ ಆದಾಯಕ್ಕೆ ಸಂಬಂಧಿಸಿದಂತೆ ದಾಖಲೆ (ಫಾರ್ಮ್ 16) ನೀಡಬೇಕು.

ಇದನ್ನೂ ಓದಿ: Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!

ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇ. 60% ಅಂಕವನ್ನು ಪಡೆದಿರಬೇಕು.

ತಹಸೀಲ್ದಾರ್ ರಿಂದ ಆದಾಯ ಮತ್ತು ಅಲ್ಪಸಂಖ್ಯಾತರ ಪ್ರಮಾಣ ಪತ್ರವನ್ನು ಅರ್ಜಿ ಜೊತೆಗೆ ಕಡ್ಡಾಯವಾಗಿ ಸಲ್ಲಿಸಬೇಕು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ CET/ JEE/ NEET/ PGCET/ CLAT/ ICAR ಮೂಲಕ ಸರ್ಕಾರಿ, ಖಾಸಗಿ, ಮ್ಯಾನೇಜ್‌ಮೆಂಟ್ ಹಾಗೂ ಇತರೆ ಕೋಟಾಗಳ ಅಡಿಯಲ್ಲಿ M.B.B.S., M.D. ಮತ್ತು M.S. ಕೋರ್ಸ್‌ಗಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಗರಿಷ್ಠ ರೂ. 5,00,000/- ವರೆಗೆ ಶಿಕ್ಷಣ ಸಾಲ ಪಡೆಯಲು ಅರ್ಹರಾಗಿರುತ್ತಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ CET/ JEE/ NEET/ PGCET/ CLAT/ ICAR ಮೂಲಕ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ B.D.S. ಮತ್ತು M.D.S. ಕೋರ್ಸ್‌ಗಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಗರಿಷ್ಠ ರೂ. 1,00,000/- ವರೆಗೆ ಶಿಕ್ಷಣ ಸಾಲ ಪಡೆಯಲು ಅರ್ಹರಾಗಿರುತ್ತಾರೆ. ಹಾಗೆಯೇ, KEA (CET/NEET) ಮೂಲಕ ಸರ್ಕಾರಿ, ಖಾಸಗಿ, ಮ್ಯಾನೇಜ್‌ಮೆಂಟ್ ಹಾಗೂ ಇತರೆ ಕೋಟಾಗಳ ಅಡಿಯಲ್ಲಿ B-AYUSH ಮತ್ತು M. AYUSH ಕೋರ್ಸ್‌ಗಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಗರಿಷ್ಠ ರೂ. 50,000/- ವರೆಗೆ ಶಿಕ್ಷಣ ಸಾಲ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ CET/ JEE/ NEET/ PGCET/ CLAT/ ICAR ಮೂಲಕ ಸರ್ಕಾರಿ, ಖಾಸಗಿ, ಮ್ಯಾನೇಜ್‌ಮೆಂಟ್ ಹಾಗೂ ಇತರೆ ಕೋಟಾಗಳ ಅಡಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ Bachelor of Architecture, Engineering and Technology (B.E./B.Tech., M.Tech., M.E., B.Arch., ಮತ್ತು M.Arch.) ಕೋರ್ಸ್‌ಗಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಗರಿಷ್ಠ ರೂ. 50,000/- ವರೆಗೆ ಶಿಕ್ಷಣ ಸಾಲ ಪಡೆಯಲು ಅರ್ಹರಾಗಿರುತ್ತಾರೆ.

MBA, MCA, LLB ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಠ ರೂ.50,000/- ಗಳು ಸಾಲವಾಗಿ ನೀಡಲಾಗುವುದು.

ವೃತ್ತಿಪರ ಕೋರ್ಸ್‌ಗಳನ್ನು ಅಭ್ಯಾಸ ಮಾಡುತ್ತಿರುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಪ್ರತಿ ವರ್ಷ ₹50,000 ರಿಂದ ₹5.00 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಪಡೆಯಬಹುದು. ಅರಿವು ಶಿಕ್ಷಣ ಸಾಲ ಯೋಜನೆ (ನವೀಕರಣ)ಗೆ ಅರ್ಜಿ ಸಲ್ಲಿಸುವಾಗ, ಅರ್ಜಿದಾರರು ಪ್ರಸ್ತುತ ಬಾಕಿ ಇರುವ ಮೂಲಧನ (Principal) ಮೊತ್ತದ 12% ಅನ್ನು ಮರುಪಾವತಿಸಬೇಕು. ಕೋರ್ಸ್ ಪೂರ್ಣಗೊಂಡ ನಂತರ ಆರು ತಿಂಗಳ ಬಳಿಕ ಸಾಲ ಮರುಪಾವತಿ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Arivu Education Loan

What Are The Documents Required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ವಿದ್ಯಾರ್ಥಿಯ ಪಾಸ್‌ಪೋರ್ಟ್ ಸೈಜ್ ಫೋಟೊ

ಪೋಷಕರ ಪಾಸ್‌ಪೋರ್ಟ್‌ ಅಳತೆಯ ಫೋಟೋ

ಕಾಲೇಜು ಬೋಧನಾ ಶುಲ್ಕದ ರಸೀದಿ

ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ

ಕಾಲೇಜು ದೃಢೀಕರಣ / ವ್ಯಾಸಂಗ ಪ್ರಮಾಣಪತ್ರ

ಪೋಷಕರ ಸ್ವಯಂ-ಘೋಷಣಾ ಪತ್ರ( Click Here)

ವಿದ್ಯಾರ್ಥಿಯ ಸ್ವಯಂ-ಘೋಷಣಾ ಪತ್ರ( Click Here)

ಇದನ್ನೂ ಓದಿ: B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

ವಿದ್ಯಾರ್ಥಿ ಮತ್ತು ಪೋಷಕರಿಂದ ನಷ್ಟಭರ್ತಿ ಬಾಂಡ್ (Indemnity Bond) (Click Here)

ಪಾವತಿಸಿದ ರಸೀದಿ

ಕಾಲೇಜು ಶುಲ್ಕದ ವಿವರಪಟ್ಟಿಯನ್ನು ಅಪ್‌ಲೋಡ್ ಮಾಡಿ (ಬೋಧನಾ ಶುಲ್ಕ + ಪ್ರವೇಶ ಶುಲ್ಕ/ಕಾಲೇಜು ಶುಲ್ಕದ ವಿವರ)

ರೂ. 100ರ ಇ-ಸ್ಟಾಂಪ್ ಪೇಪರ್‌ನಲ್ಲಿ ಮಾಡಲಾದ ಅಫಿಡವಿಟ್ ( Click Here)

ಸಾಲ ಒಪ್ಪಂದ – ರೂ. 500/-ರ ಇ-ಸ್ಟಾಂಪ್ ಪೇಪರ್‌ನಲ್ಲಿ ಮಾಡಲಾದ ಒಪ್ಪಂದ (Click Here)

ರೂ.100 ಮೌಲ್ಯದ ಸ್ಟಾಂಪ್ ಪೇಪರ್‌ನಲ್ಲಿ ಕಾರ್ಯಗತಗೊಳಿಸಲಾದ ಡಿಮಾಂಡ್ ಪ್ರಾಮಿಸರಿ ನೋಟ್ ( Click Here)

ಇದನ್ನೂ ಓದಿ: kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಆಯ್ಕೆಯಾದ ಅರ್ಹ ಮಹಿಳಾ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿದಾರರು ಮೊದಲು ಇಲ್ಲಿ ನೀಡಿರುವ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ "ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ"ದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪುಟದಲ್ಲಿ ಕಾಣುವ "ಅರಿವು ವಿದ್ಯಾಭ್ಯಾಸ ಸಾಲ ಯೋಜನೆ" ಯ ಮುಂದೆ ಕಾಣಿಸುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಅರ್ಜಿದಾರರೇನಾದರು ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿದ್ದರೆ? ಹಾಗದರೆ ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು Password ಅನ್ನು ಸಿದ್ದ ಮಾಡಿಕೊಂಡು Log In ಆಗಬೇಕು.

Step-4: ಲಾಗಿನ್ ಆದ ನಂತರ ಅಧಿಕೃತ ಅರ್ಜಿ ಪ್ರತಿ ಓಪನ್ ಆಗುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

ಈ ಯೋಜನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: CliCk Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: