MBBS Scholorship-ಕಾನ್ಸೆಂಟ್ರಿಕ್ಸ್ ವಿದ್ಯಾರ್ಥಿವೇತನದ ಅಡಿಯಲ್ಲಿ MBBS ವಿದ್ಯಾರ್ಥಿನಿಯರಿಗೆ 65,000 ವಿದ್ಯಾರ್ಥಿವೇತನ!

September 30, 2026 | Siddesh
MBBS Scholorship-ಕಾನ್ಸೆಂಟ್ರಿಕ್ಸ್ ವಿದ್ಯಾರ್ಥಿವೇತನದ ಅಡಿಯಲ್ಲಿ MBBS ವಿದ್ಯಾರ್ಥಿನಿಯರಿಗೆ 65,000 ವಿದ್ಯಾರ್ಥಿವೇತನ!
Share Now:

2026-2027 ನೇ ಸಾಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ MBBS ನ ಮೊದಲ ವರ್ಷಕ್ಕೆ ದಾಖಲಾದ ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮಹಿಳಾ ವಿದ್ಯಾರ್ಥಿಗಳಿಗೆ ಕಾನ್ಸೆಂಟ್ರಿಕ್ಸ್ ವಿದ್ಯಾರ್ಥಿವೇತನದ ಅಡಿಯಲ್ಲಿ 65,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅನೇಕ ವಿದ್ಯಾರ್ಥಿಗಳು ಹಣಕಾಸಿನ ಅಡಚಣೆಗಳಿಂದ ಅವರ ಕನಸನ್ನು ನನಸಾಗಿಸಲು ತಮ್ಮ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ಮಾಡಲು ಕಾನ್ಸೆಂಟ್ರಿಕ್ಸ್ ದಕ್ಷ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Arivu Scheme 2026-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ 5 ಲಕ್ಷದವರೆಗೆ ಕಡಿಮೆ ಬಡ್ಡಿ ಸಾಲ!

ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸುವ ಹಂತಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Scholorship Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು?

ಕಾನ್ಸೆಂಟ್ರಿಕ್ಸ್ ದಕ್ಷ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ಕೋರ್ಸ್‌ನ ಅವಧಿಗೆ ವರ್ಷಕ್ಕೆ 65,000 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Last Date To Apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2026

ಇದನ್ನೂ ಓದಿ: Aditya Birla Capital Scholarship-ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನ ವತಿಯಿಂದ 60,000 ವಿದ್ಯಾರ್ಥಿವೇತನ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • 12 ತರಗತಿ ಅಂಕಪಟ್ಟಿ
  • ಶೈಕ್ಷಣಿಕ ವರ್ಷದ ವೆಚ್ಚಗಳ ವಿವರ
  • ಆದಾಯ ಪ್ರಮಾಣಪತ್ರ
  • ಪ್ರಸ್ತುತ ವರ್ಷದ ಶುಲ್ಕ ರಶೀದಿ
  • ಬ್ಯಾಂಕ್ ಪಾಸ್‌ಬುಕ್
  • ಮೊಬೈಲ್ ನಂಬರ್

ಇದನ್ನೂ ಓದಿ: Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!

Who Can Apply-ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು?

ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ MBBS ಕಾರ್ಯಕ್ರಮದ ಮೊದಲ ವರ್ಷದಲ್ಲಿ ದಾಖಲಾಗಿರುವ ಮಹಿಳಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಿದ್ಯಾರ್ಥಿಯು12 ನೇ ತರಗತಿಯ ಮಂಡಳಿ ಪರೀಕ್ಷೆಯನ್ನು ಪಾಸಾಗಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯದ ಮಿತಿಯು 5 ಲಕ್ಷದ ಒಳಗಿರಬೇಕು.

ಬಡ್ಡಿ4ಸ್ಟಡಿ ಅಥವಾ ಕಾನ್ಸೆಂಟ್ರಿಕ್ಸ್ ಪ್ರೈವೇಟ್ ಲಿಮಿಟೆಡ್ ಉದ್ಯೋಗಿಗಳ ಮಕ್ಕಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

students scholorship

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

How To Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳಾವುವು?

Step-1: ವಿದ್ಯಾರ್ಥಿಗಳು ಮೊದಲು ಈ ಲಿಂಕ್ "Concentrix Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: