Muskaan Scholarship-ಪಿಯುಸಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿವೇತನ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

October 2, 2026 | Siddesh
Muskaan Scholarship-ಪಿಯುಸಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿವೇತನ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!
Share Now:

2026-2027 ನೇ ಸಾಲಿನಲ್ಲಿ 9 ತರಗತಿ ಯಿಂದ 12 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ 12,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದ ಅಡಿಯಲ್ಲಿ 9 ರಿಂದ 12 ನೇ ತರಗತಿಗಳಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಶೈಕ್ಷಣಿಕ ಆರ್ಥಿಕ ಸಹಾಯವನ್ನು ಮಾಡಲು ಮುಂದಾಗಿದ್ದು, ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸವನ್ನು ನೀಡುವ ಮೂಲಕ ಉತ್ತಮ ವಿದ್ಯಾರ್ಥಿಗಳನ್ನಾಗಿ ಮಾಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: MBBS Scholorship-ಕಾನ್ಸೆಂಟ್ರಿಕ್ಸ್ ವಿದ್ಯಾರ್ಥಿವೇತನದ ಅಡಿಯಲ್ಲಿ MBBS ವಿದ್ಯಾರ್ಥಿನಿಯರಿಗೆ 65,000 ವಿದ್ಯಾರ್ಥಿವೇತನ!

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲಾ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವೆಲ್ಲಾ ಹಂತಗಳನ್ನು ಅನುಸರಿಸಬೇಕು? ಅರ್ಜಿಗೆ ಸಂಬದಿಸಿದ ಅಗತ್ಯ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Scholorship Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ವೇತನವನ್ನು ಪಡೆಯಬಹುದು?

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು 12,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಬಹುದು.

Last Date To APply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2026

ಇದನ್ನೂ ಓದಿ: Arivu Scheme 2026-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ 5 ಲಕ್ಷದವರೆಗೆ ಕಡಿಮೆ ಬಡ್ಡಿ ಸಾಲ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಈ ಕೆಳಕಂಡ ದಾಖಲಾತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು:

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
  • ಪ್ರಸ್ತುತ ವರ್ಷದ ಪ್ರವೇಶ ಪುರಾವೆ/entrance Certificate
  • ಹಿಂದಿನ ತರಗತಿ ಅಂಕಪಟ್ಟಿ/Marks Card
  • ಆದಾಯ ಪ್ರಮಾಣ ಪತ್ರ/Income Certificate
  • ಬ್ಯಾಂಕ ಪಾಸ್ ಪುಸ್ತಕ/Bank Passbook
  • ಮೊಬೈಲ್ ನಂಬರ್/Mobile number
  • ಫೋಟೋ/Photocopy

ಇದನ್ನೂ ಓದಿ: Aditya Birla Capital Scholarship-ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನ ವತಿಯಿಂದ 60,000 ವಿದ್ಯಾರ್ಥಿವೇತನ!

Eligibility critiria-ಅರ್ಜಿ ಸಲ್ಲಿಸಲು ಯಾರು ಅರ್ಹರು?

ಅರ್ಜಿದಾರ ವಿದ್ಯಾರ್ಥಿಯು 9 ರಿಂದ 12 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ವಿದ್ಯಾರ್ಥಿಯು ಭಾರತದ ಖಾಯಂ ಪ್ರಜೆಯಾಗಿರಬೇಕು.

ವಾಣಿಜ್ಯ ಚಾಲಕರ ಮಕ್ಕಳು , LMV/HMV ಚಾಲಕರು , ಮೆಕ್ಯಾನಿಕ್‌ಗಳ ಮಕ್ಕಳು ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗಗಳ (EWS) ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ 60% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 8 ಲಕ್ಷದ ಒಳಗಿರಬೇಕು.

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ಮತ್ತು ಬಡ್ಡಿ4ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಹರಲ್ಲ.

ಇದನ್ನೂ ಓದಿ: Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!

muskan scholorship

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

How To APply-ಅರ್ಜಿಯನ್ನು ಸಲ್ಲಿಸುವ ವಿಧಾನಗಳಾವುವು?

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತಿ ಇರುವ ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗೆ ಅರ್ಜಿ ಸಲ್ಲಿಸಬೇಕು.

Step-1: ವಿದ್ಯಾರ್ಥಿಗಳು ಮೊದಲಿಗೆ ಇಲ್ಲಿ ನೀಡಿರುವ ಈ ಲಿಂಕ್ "Muskaan Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

More Information-ವಿದ್ಯಾರ್ಥಿವೇತನದ ಬಗ್ಗೆ ಇನ್ನೂ ಹೆಚ್ಚಿನ ವಿವರವನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: