Agriculture Subsidy Scheme-ಕೃಷಿ ಇಲಾಖೆಯಿಂದ ವಿವಿಧ ಯಂತ್ರಗಳ ಖರೀದಿಗೆ ಶೇ 50% ಸಬ್ಸಿಡಿ!ಇಲ್ಲಿದೆ ಸಂಪೂರ್ಣ ಮಾಹಿತಿ!

November 17, 2026 | Siddesh
Agriculture Subsidy Scheme-ಕೃಷಿ ಇಲಾಖೆಯಿಂದ ವಿವಿಧ ಯಂತ್ರಗಳ ಖರೀದಿಗೆ ಶೇ 50% ಸಬ್ಸಿಡಿ!ಇಲ್ಲಿದೆ ಸಂಪೂರ್ಣ ಮಾಹಿತಿ!
Share Now:

ಕೃಷಿ ಚಟುವಟಿಕೆಗಳನ್ನು ಸುಲಭಗೊಳಿಸಿ ರೈತರ ಕೃಷಿ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರವು ವಿವಿಧ ಕೃಷಿ ಯಾಂತ್ರೀಕರಣ ಯೋಜನೆಗಳ ಮೂಲಕ ಸಹಾಯಧನ ನೀಡಲು ನಿರ್ಧರಿಸಿದ್ದು ಇದೀಗ ಕೃಷಿ ಯಂತ್ರೋಪಕರಣಗಳನ್ನು(Farm Mechanization) ಖರೀದಿಸಲು ಅರ್ಹ ರೈತರಿಗೆ ಶೇ.50ರಷ್ಟು ಸಹಾಯಧನ ನೀಡುವ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್, ಕಲ್ಟಿವೇಟರ್, ಬಿತ್ತನೆ ಯಂತ್ರ, ಸಿಂಪಡಣೆ ಯಂತ್ರ ಸೇರಿದಂತೆ ವಿವಿಧ ಕೃಷಿ ಉಪಕರಣಗಳನ್ನು ಖರೀದಿಸಲು ರೈತರು ಈ ಯೋಜನೆಯ ಪ್ರಯೋಜನ ಪಡೆದು ಉತ್ತಮ ಕೃಷಿ ಚಟುವಟಿಕೆಗಳನ್ನು ನೆಡೆಸಬಹುದು.

ಇದನ್ನೂ ಓದಿ: Janaushadhi Kendra-ಜನೌಷಧಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ! ಸ್ವಂತ ಉದ್ಯಮ ಆರಂಭಿಸಲು ಸುವರ್ಣಾವಕಾಶ!

ಹಾಗಾದರೆ ಈ ಯೋಜನೆಗೆ(Karnataka Agriculture Department) ಯಾರು ಅರ್ಜಿ ಸಲ್ಲಿಸಬಹುದು? ಯಾವೆಲ್ಲ ಯಂತ್ರೋಪಕರಣಗಳಿಗೆ ಸಬ್ಸಿಡಿ ಸಿಗುತ್ತದೆ? ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

Farm Mechanization Scheme-ಕೃಷಿ ಯಾಂತ್ರೀಕರಣ ಯೋಜನೆ:

ಕೃಷಿ ಯಾಂತ್ರೀಕರಣ ಯೋಜನೆಯು ರೈತರಿಗೆ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ಸಹಾಯ ಒದಗಿಸುವ ಸರ್ಕಾರಿ ಯೋಜನೆಯಾಗಿದ್ದು, ಕೃಷಿ ಕೆಲಸಗಳಿಗೆ ಕಾರ್ಮಿಕರ ಕೊರತೆ ಎದುರಾಗುತ್ತಿರುವ ಇಂದಿನ ದಿನಗಳಲ್ಲಿ ಯಂತ್ರೋಪಕರಣಗಳ ಬಳಕೆ ಅತ್ಯಂತ ಮುಖ್ಯವಾಗಿದೆ ರೈತರ ಹಿತಕರ ದೃಷ್ಟಿ ಇಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Anganwadi Worker-ಅಂಗನವಾಡಿಯಲ್ಲಿ ಸರ್ಕಾರಿ ಉದ್ಯೋಗ ಪಡೆಯುವುದು ಹೇಗೆ! ಇಲ್ಲಿದೆ ಸಂಪೂರ್ಣ ಮಾಹಿತಿ!

Krishi Yantrikarana-ಈ ಯೋಜನೆಯ ಪ್ರಮುಖ ಉದ್ದೇಶ:

  • ಕೃಷಿ ಕೆಲಸಗಳಿಗೆ ತಗಲುವ ವೆಚ್ಚ ಕಡಿಮೆ ಮಾಡುವುದು.
  • ರೈತರಿಗೆ ಆಧುನಿಕ ಯಂತ್ರೋಪಕರಣಗಳನ್ನು ಒದಗಿಸುವುದು.
  • ಕೃಷಿಯಲ್ಲಿ ಕೃಷಿಕರ ಉತ್ಪಾದಕತೆಯನ್ನು ಹೆಚ್ಚಿಸುವುದು.
  • ಕಾರ್ಮಿಕರ ಮೇಲಿನ ಅವಲಂಬನೆ ಕಡಿಮೆ ಮಾಡುವುದು.
  • ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಯಂತ್ರೋಪಕರಣಗಳ ಬಳಕೆಗೆ ಪ್ರೋತ್ಸಾಹ ನೀಡುವುದು.

Krishi Yantrikarana Subsidy Amount-ಕೃಷಿ ಯಂತ್ರೋಪಕರಣ ಖರೀದಿಗೆ ಎಷ್ಟು ಸಬ್ಸಿಡಿ ಸಿಗುತ್ತದೆ?

ಕೃಷಿ ಯಾಂತ್ರೀಕರಣ ಯೋಜನೆಯಡಿ ಯಂತ್ರೋಪಕರಣಗಳ ಖರೀದಿಗೆ ರೈತರ ವರ್ಗಕ್ಕೆ ಅನುಗುಣವಾಗಿ ಸಹಾಯಧನ ನೀಡಲಾಗುತ್ತದೆ.

ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಯಂತ್ರೋಪಕರಣಗಳ ಆಧಾರದ ಮೇಲೆ ಶೇ.50% ಸಹಾಯಧನ ಪಡೆಯಲು ಅವಕಾಶವಿರುತ್ತದೆ.
ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ದವರಿಗೆ ಶೇ.90% ಸಹಾಯಧನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Bangalore Krishi Mela-2026: ಇಂದಿನಿಂದ 3 ದಿನ ಜಿ.ಕೆ.ವಿ.ಕೆ.ಯಲ್ಲಿ ಕೃಷಿಮೇಳ!

Machinery Details-ಯಾವೆಲ್ಲ ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ಪಡೆಯಬಹುದು?

ಕೃಷಿ ಯಾಂತ್ರೀಕರಣ ಯೋಜನೆಯಡಿ ಈಕೆಳಗೆ ತಿಳಿಸಿರುವ ವಿವಿಧ ಕೃಷಿ ಉಪಕರಣಗಳನ್ನು ಖರೀದಿಸಲು ಸಹಾಯಧನ ಪಡೆಯಬಹುದು.

ಟ್ರ್ಯಾಕ್ಟರ್,ಪವರ್ ಟಿಲ್ಲರ್, ರೋಟವೇಟರ್, ಕಲ್ಟಿವೇಟರ್, ಉಳುಮೆ ಮಾಡುವ ಯಂತ್ರಗಳು, ಬಿತ್ತನೆ ಯಂತ್ರಗಳು, ಕಳೆ ತೆಗೆಯುವ ಯಂತ್ರಗಳು, ಕೀಟನಾಶಕ ಸಿಂಪಡಣೆ ಯಂತ್ರಗಳು/ಉಪಕರಣಗಳಿಗೆ, ಕೊಯ್ಲು ಯಂತ್ರಗಳು, ಒಕ್ಕಣೆ ಯಂತ್ರಗಳು, ಕೃಷಿ ತ್ಯಾಜ್ಯ ನಿರ್ವಹಣಾ ಉಪಕರಣಗಳು, ಡೀಸೆಲ್ ಪಂಪ್‌ಸೆಟ್‌ಗಳು.

Farm Mechanization Eligibility-ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರರು ರೈತ ವರ್ಗಕ್ಕೆ ಸೇರಿದವರಗಿರಬೇಕು.
ಕೃಷಿ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿರಬೇಕು.
ಇಲಾಖೆಯ ನಿಗದಿತ ಷರತ್ತುಗಳನ್ನು ಪೂರೈಸಿರಬೇಕು.
ಸಣ್ಣ ಮತ್ತು ಅತಿ ಸಣ್ಣ ರೈತರು, ಮಹಿಳಾ ರೈತರು ಹಾಗೂ SC/ST ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Koli Mari Vitarane-ಪಶುಪಾಲನಾ ಇಲಾಖೆಯಿಂದ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ!

Required Documents-ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳಾವುವು?

ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕು:

  • ಆಧಾರ್ ಕಾರ್ಡ್.
  • ಪಹಣಿ (RTC).
  • ಬ್ಯಾಂಕ್ ಪಾಸ್‌ಬುಕ್ ಪ್ರತಿ.
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
  • ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ).
  • ಮೊಬೈಲ್ ಸಂಖ್ಯೆ.
  • ಯಂತ್ರೋಪಕರಣದ ದರಪಟ್ಟಿ (Quotation).
  • ಜಂಟಿ ಜಮೀನಾಗಿದ್ದರೆ ಅಗತ್ಯವಿರುವ ಕುಟುಂಬದ ವಿವರ ಮತ್ತು ಒಪ್ಪಿಗೆ ಪತ್ರ.

Farm Mechanization Application-ಕೃಷಿ ಯಂತ್ರೋಪಕರಣ ಸಬ್ಸಿಡಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ (RSK), ಅಥವಾ ತಾಲ್ಲೂಕು ಕೃಷಿ ಇಲಾಖೆ ಕಚೇರಿಗೆ ನೇರವಾಗಿ ಭೇಟಿ ಮಾಡಿ ಸಂಬಂಧಪಟ್ಟ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಇದಲ್ಲದೇ ರೈತರು ತಮ್ಮ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಈ ಕಚೇರಿಯಿಂದಲು ಸಹ ವಿವಿಧ ಕೃಷಿ ಯಂತ್ರೋಪಕರಣಗಳ ಮೇಲೆ ಸಹಾಯಧನವನ್ನು ಪಡೆಯಲು ಅವಕಾಶವಿರುತ್ತದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: