Bsc Nursing Scholarship-ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ!ಈಗಲೇ ಅರ್ಜಿ ಸಲ್ಲಿಸಿ!

November 23, 2026 | Siddesh
Bsc Nursing Scholarship-ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ!ಈಗಲೇ ಅರ್ಜಿ ಸಲ್ಲಿಸಿ!
Share Now:

ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ(Bsc Nursing Scholarship Application) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಒದಗಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರವು ಶೈಕ್ಷಣಿಕ ಸೌಲಭ್ಯಗಳನ್ನು ಪಡೆಯಲು ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ವಿಶೇಷವಾಗಿ ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಮಾಡಲು ಈ ವಿದ್ಯಾರ್ಥಿವೇತನವನ್ನು ಜಾರಿಗೆ ತಂದಿದ್ದು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದು.

ಇದನ್ನೂ ಓದಿ: VB-G RAM G Scheme: ಕುರಿ-ಮೇಕೆ ಮತ್ತು ಕೋಳಿ ಶೆಡ್ ನಿರ್ಮಾಣಕ್ಕೆ ₹83,000 ಹಾಗೂ ₹66,000 ನೆರವು! ಇಂದೇ ಅರ್ಜಿ ಸಲ್ಲಿಸಿ!

ಇಂದಿನ ದಿನಗಳಲ್ಲಿ ನರ್ಸಿಂಗ್ ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಬಿ.ಎಸ್ಸಿ ನರ್ಸಿಂಗ್ (B.Sc Nursing) ಮತ್ತು ಜಿಎನ್‌ಎಂ ನರ್ಸಿಂಗ್ (GNM Nursing) ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಖಾಸಗಿ ಕಾಲೇಜುಗಳ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಕಷ್ಟಕರವಾಗಿದ್ದು ಇಂತಹ ಕುಟುಂಬಗಳಿಗೆ ಸಹಾಯವಾಗಲು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಯಾವೆಲ್ಲ ದಾಖಲೆಗಳು ಬೇಕು? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Negila Yogi Scheme-ಕೃಷಿ ಇಲಾಖೆಯಿಂದ ನೇಗಿಲಯೋಗಿ ಯೋಜನೆಯಡಿ ಗರಿಷ್ಥ 4500/- ಪ್ರೋತಾಹಧನ!

Scholarship Application Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಡಿಸಂಬರ್ 2026

Who Can Apply-ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳಾವುವು?

  • ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಯು ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಯೋಜನೆಯಡಿ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು.
  • ವಿದ್ಯಾರ್ಥಿಯು ಬಿ.ಎಸ್ಸಿ ನರ್ಸಿಂಗ್ ಅಥವಾ ಜಿಎನ್‌ಎಂ ನರ್ಸಿಂಗ್ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹2.5 ಲಕ್ಷ ಮೀರಿರಬಾರದು.
  • ಅರ್ಜಿದಾರ ವಿದ್ಯಾರ್ಥಿಯು ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು.
  • 2026-27ನೇ ಸಾಲಿಗೆ ಹೊಸ ಅರ್ಜಿದಾರರು ಹಾಗೂ ನವೀಕರಣ (Renewal) ಅರ್ಜಿದಾರರು ಅರ್ಜಿ ಸಲ್ಲಿಸಲು ಅವಕಾಶವಿದೆ.

ಇದನ್ನೂ ಓದಿ: Scholarship Application-ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Documents-ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳನ್ನು ನೀಡಬೇಕು?

ವಿದ್ಯಾರ್ಥಿಯ ಆಧಾರ್ ಕಾರ್ಡ್.
ಜಾತಿ ಪ್ರಮಾಣಪತ್ರ.
ಕರ್ನಾಟಕ ನಿವಾಸದ ದಾಖಲೆ.
ಆದಾಯ ಪ್ರಮಾಣಪತ್ರ.
ಹಿಂದಿನ ವರ್ಷದ ಅಂಕಪಟ್ಟಿ.
ಪ್ರಸ್ತುತ ವರ್ಷದ ಕಾಲೇಜಿನ ಪ್ರವೇಶ ದಾಖಲಾತಿ.
ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ
ವಿದ್ಯಾರ್ಥಿಯ ಫೋಟೋ
ಮೊಬೈಲ್ ಸಂಖ್ಯೆ.

ಇದನ್ನೂ ಓದಿ: Dairy Farming-ಉಚಿತ ಕುರಿ-ಆಡು ಸಾಕಾಣಿಕೆ ಜೊತೆ ಹೈನುಗಾರಿಕೆಗೆ ತರಬೇತಿ!ಇಂದೇ ಅರ್ಜಿ ಸಲ್ಲಿಸಿ!

Bsc Nursing Scholarship Yojana

ಇದನ್ನೂ ಓದಿ: Beat Forester Job-ಅರಣ್ಯ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ! 355 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳವುವು?

ಹಂತ-1: ಅರ್ಜಿದಾರ ವಿದ್ಯಾರ್ಥಿಯು ಈ ಲಿಂಕ್ Scholarship Application Link ಮೇಲೆ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರದ ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ಹಂತ-2: ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಅಗಿ ಅಲ್ಪಸಂಖ್ಯಾತ ನಿರ್ದೇಶನಾಲಯದ ಪ್ರೋತ್ಸಾಹ ಧನ ಅರ್ಜಿಯ ಮೇಲೆ ಕ್ಲಿಕ್ ಮಾಡಿ.

ಹಂತ-3: ನಂತರ ಅರ್ಜಿಗೆ ಸಂಬಂಧಪಟ್ಟ ಎಲ್ಲಾ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ. ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.

ಹಂತ-4: ಅರ್ಜಿ ಸಲ್ಲಿಸಿದ ನಂತರ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ ಅರ್ಜಿ ಸಂಖ್ಯೆ ಅಥವಾ ಸ್ವೀಕೃತಿ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ವಿದ್ಯಾರ್ಥಿವೇತನ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಗತ್ಯ ವಿವರ ಹೀಗಿದೆ:

ಆನ್‌ಲೈನ್ ಅರ್ಜಿ ಸಲ್ಲಿಸಲು ಅಧಿಕೃತ ಲಿಂಕ್: https://sevaone.karnataka.gov.in/
ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್: https://dom.karnataka.gov.in
ಸಹಾಯವಾಣಿ ಸಂಖ್ಯೆ : 8277799990

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: