ಜಯದೇವ ಆಸ್ಪತ್ರೆ ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಕಾರ್ಯಗಾರ‍, 8 ಜೂನ್ ನೊಂದಣಿಗೆ ಕಡೆಯ ದಿನ!

May 23, 2023 | Siddesh

ರಾಜ್ಯದ ಪ್ರಖ್ಯಾತ ಹೃದ್ರೋಗ ಚಿಕಿತ್ಸಾ ಕೇಂದ್ರವಾದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ 200 ಬಡ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಶಸ್ತ್ರಚಿಕಿತ್ಸೆ ನೀಡುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮೆಡ್ಟ್ರಾನಿಕ್ಸ್, ಅಮೇರಿಕಾ ಹಾಗೂ ಡಾ. ಗೋವಿಂದರಾಜು ಸಬ್ರಮಣಿ ಹಾರ್ಟ ಫೌಂಡೇಷನ್, ವಿಸ್ಕಿನ್ ಸನ್ , ಅಮೇರಿಕಾರವರ ಸಹಯೋಗದೊಂದಿಗೆ 200 ಬಡ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಕಾರ್ಯಗಾರವನ್ನು 12 ಜೂನ್ 2023 ರಿಂದ 18 ನೂನ್ 2023ರವರೆಗೆ ಆಯೋಜನೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಸ್ಥೆಯ ನಿರ್ದೇಶಕರಾದ ಡಾ ಸಿ. ಎನ್ ಮಂಜುನಾಥರವರ ಮಾಹಿತಿ ಪ್ರಕಾರ ಈ ಕಾರ್ಯಗಾರದಲ್ಲಿ 200 ಜನ ಬಡರೋಗಿಗಳ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರೀಕರಿಗಾಗಿ ಆಯೋಜಿಸಲಾಗಿದ್ದು, ಪ್ರತಿ ರೋಗಿಗೂ ಉನ್ನತ ಗುಣಮಟ್ಟದ ಮೇಡಿಕೇಟೆಡ್ ಸ್ಟಂಟ್ ಗಳನ್ನು ಉಚಿತವಾಗಿ ಅಳವಡಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ತೋಟಗಾರಿಕೆ ಮತ್ತು ಅರಣ್ಯ ಜಾತಿಯ ಸಸಿ ಪಡೆಯಲು ಅರ್ಜಿ ಅಹ್ವಾನ!

ಈ ಸೌಲಭ್ಯವನ್ನು ಈಗಾಗಳೆ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ. ಅವಶ್ಯಕ ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿ ಪಿ ಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಕೋರಲಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ರೋಗಿಗಳು ಮತ್ತು ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೇ ಮಾಡಿಸಿಕೊಳ್ಳಲು ನಿಸ್ಸಹಾಯಕ ರೋಗಿಗಳು ತಮ್ಮ ಹೆಸರನ್ನು 8ನೇ ಜೂನ್ ಒಳಗೆ ನೋಂದಾಯಿಸಿಕೊಳ್ಳಲು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

ಆಸ್ಪತ್ರೆ ವಿಳಾಸ:

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ಬೆಂಗಳೂರು-560 069. ಆಸ್ಪತ್ರೆ ಜಾಲತಾಣ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

  • ಜಯದೇವ ಆಸ್ಪತ್ರೆ, ಬೆಂಗಳೂರು- 9480827888 ಅಥವಾ 080-26944874
  • ಜಯದೇವ ಆಸ್ಪತ್ರೆ, ಕಲಬುರಗಿ-9482114611 ಅಥವಾ 08472-230511
  • ಜಯದೇವ ಆಸ್ಪತ್ರೆ, ಮೈಸೂರು -8660105492 ಅಥವಾ 0821-2263255

ಈ ಮಾಹಿತಿಯನ್ನು ಅದಷ್ಟು ಜನರಿಗೆ ಶೇರ್ ಮಾಡಿ ಅರ್ಹ ಪಲಾನುಭವಿಗಳು ಈ ಯೋಜನೆಯ ಪ್ರಯೋಜನೆ ಪಡೆಯುವಂತಾಗಲಿ.

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ:

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಸರ್ಕಾರಿ ಸ್ವಾಮ್ಯದ ಸ್ವಾಯತ್ತ ಸಂಸ್ಥೆಯಾಗಿದ್ದು, ವಿಶೇಷವಾಗಿ ಹೃದಯ ಆರೈಕೆಗಾಗಿಯೇ ಬೆಂಗಳೂರಿನ ಬನ್ನೇರುಘಟ್ಟರಸ್ತೆ ಯಲ್ಲಿರುವ ಕೇಂದ್ರ ಸ್ಥಾನ, ಬೆಂಗಳೂರಿನ ರಾಜಾಜಿನಗರದ ಇಎಸ್‌ಐ-ಎಂಹೆಚ್‌ ಶಾಖೆ, ಮೈಸೂರು ಹಾಗೂ ಕಲಬುರಗಿ ಶಾಖೆಗನ್ನೊಳಗೊಂಡಂತೆ 1600 ಹಾಸಿಗೆ ಸಾಮರ್ಥ್ಯವನ್ನು ಹೊಂದಿರುತ್ತದೆ ಹಾಗೂ ಇದು ಆಗ್ನೇಯ ಏಷ್ಯಾದ ಅತಿದೊಡ್ಡ ಏಕೈಕ ಹೃದ್ರೋಗ ಚಿಕಿತ್ಸಾ ಕೇಂದ್ರವಾಗಿದೆ. ಇದು ಸಂಪೂರ್ಣವಾಗಿ ಹೃದ್ರೋಗ ಆರೈಕೆ ಮಾಡುವ ಲಾಭರಹಿತ ಸಂಸ್ಥೆಯಾಗಿದ್ದು ಸಮಾಜದ ಎಲ್ಲಾ ವರ್ಗದ ಜನರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಹೃದ್ರೋಗ ಚಿಕಿತ್ಸೆಯನ್ನು ಒದಗಿಸುತ್ತಿದೆ ಮತ್ತು ಅರ್ಹ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿರುತ್ತದೆ.

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು “ಚಿಕಿತ್ಸೆ ಮೊದಲು ಪಾವತಿ ನಂತರ” ಎಂಬ ಪರಿಕಲ್ಪನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದೇವೆ. ಇಲ್ಲಿ ತುರ್ತು ಹೃದ್ರೋಗ ಚಿಕಿತ್ಸೆ ಅಗತ್ಯವಿರುವ ರೋಗಿಗೆ ಯಾವುದೇ ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆ ನೀಡಲಾಗುತ್ತಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: