Scholarship Scheme-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

November 26, 2026 | Siddesh
Scholarship Scheme-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!
Share Now:

2026-2027 ನೇ ಸಾಲಿನ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅಡಿಯಲ್ಲಿ BCWD ಪೋಸ್ಟ್-ಮೆಟ್ರಿಕ್ ಸ್ಕಾಲರ್‌ಶಿಪ್, ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯಧನವನ್ನು ನೀಡಲು ಈ ವಿದ್ಯಾರ್ಥಿವೇತನವನ್ನು ಜಾರಿಗೆ ತಂದಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Fertilizer Booking App-ಡಿಸೆಂಬರ್ 1ರಿಂದ ಆ್ಯಪ್ ಮೂಲಕ ಗೊಬ್ಬರ ಖರೀದಿ! ಇಲ್ಲಿದೆ ಸಂಪೂರ್ಣ ವಿವರ!

ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಹರಿರುತ್ತಾರೆ? ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳನ್ನು ಲಗತ್ತಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವೆಲ್ಲಾ ಹಂತಗಳನ್ನು ಅನುಸರಿಸಬೇಕು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Application Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ನವೆಂಬರ್ 2026

Scholorship Amount-ವಿದ್ಯಾರ್ಥಿವೇತನದ ಮೊತ್ತ:

BCWD ಪೋಸ್ಟ್-ಮೆಟ್ರಿಕ್ ಸ್ಕಾಲರ್‌ಶಿಪ್ ನ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಈ ಕೆಳಗೆ ತಿಳಿಸಿದ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

degree scholarship 2026

ಇದನ್ನೂ ಓದಿ: Agriculture Machinery Subsidy-ಪವರ್ ಸ್ಪ್ರ‍ೇಯರ್, ಪಂಪ್ ಸೆಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಸಬ್ಸಿಡಿಯಲ್ಲಿ ಪಡೆಯಲು ಅರ್ಜಿ ಆಹ್ವಾನ!

Scholarship Eligibility-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರಿರುತ್ತಾರೆ?

ಅರ್ಜಿದಾರ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಕೇಂದ್ರ/ರಾಜ್ಯ ಸರ್ಕಾರ ಸೂಚಿಸಿದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕು.

ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳ ಅಡಿಯಲ್ಲಿ ಸರ್ಕಾರಿ/ಸ್ಥಳೀಯ ಸಂಸ್ಥೆ/ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳನ್ನು ಕಲಿಯುತ್ತಿರಬೇಕು.

ಅರ್ಜಿದಾರ ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು ₹2,50,000 (ವರ್ಗ1) ಅಥವಾ ₹1,00,000 (ವರ್ಗ 2A,3A,3B) ಮೀರಬಾರದು.

ವಿದ್ಯಾರ್ಥಿಯು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 60%(ವರ್ಗ1) ಅಥವಾ 70%(ಇತರರು) ಅಂಕಗಳನ್ನು ಗಳಿಸಿರಬೇಕು.

ಇದನ್ನೂ ಓದಿ: Gold Loan-ಬ್ಯಾಂಕ್ ನಲ್ಲಿ ಗೋಲ್ಡ್ ಲೋನ್ ತೆಗೆದುಕೊಂಡವರು ತಪ್ಪದೇ ಈ ಮಾಹಿತಿ ನೋಡಿ!

Document Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ್/Adhar
  • ಜಾತಿ ಪ್ರಮಾಣಪತ್ರ/Caste Certificate
  • ಆದಾಯ ಪ್ರಮಾಣಪತ್ರ/Income Certificate
  • ನಿವಾಸ ಪುರಾವೆ
  • ಅಂಗವೈಕಲ್ಯ ಪ್ರಮಾಣಪತ್ರ (ಅನ್ವಯಿಸಿದರೆ)
  • ಶಾಲಾ ದಾಖಲಾತಿ ಪ್ರಮಾಣ ಪತ್ರ/Study Certificate

ಇದನ್ನೂ ಓದಿ: Namma Mane Yojane-ಮುಖ್ಯಮಂತ್ರಿ ನಮ್ಮ ಮನೆ ಯೋಜನೆ: ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳಾವುವು?

BCWD ಪೋಸ್ಟ್-ಮೆಟ್ರಿಕ್ ಸ್ಕಾಲರ್‌ಶಿಪ್ ನ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬೇಕು.

Step-1: ಅರ್ಜಿದಾರ ವಿದ್ಯಾರ್ಥಿಗಳು ಮೊದಲಿಗೆ ನೀಡಿರುವ ಲಿಂಕ್ ಮೇಲೆ "Scholorship Application Link" ಕ್ಲಿಕ್ ಮಾಡಿ ವಿದ್ಯಾರ್ಥಿವೇತನದ ಅಧಿಕೃತ www.buddy4study.com ಜಾಲತಾಣವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Bsc Nursing Scholarship-ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ!ಈಗಲೇ ಅರ್ಜಿ ಸಲ್ಲಿಸಿ!

degree scholarship

ಇದನ್ನೂ ಓದಿ: Beat Forester Job-ಅರಣ್ಯ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ! 355 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

Step-2: ತದನಂತರ ಇದೇ ಪೇಜ್ ನಲ್ಲಿ ಕೆಳಗೆ ಸ್ಕ್ರ‍ೋಲ್ ಮಾಡಿ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ. ಮೊದಲ ಬಾರಿಗೆ ಈ ವೆಬ್ಸೈಟ್ ಭೇಟಿ ಮಾಡುತ್ತಿದ್ದರೆ ಅಂತಹ ವಿದ್ಯಾರ್ಥಿಗಳು "Create an Account" ಆಯ್ಕೆ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ನಂತರ "Login" ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿ ಪಾಸ್ವರ್ಡ ಅನ್ನು ಹಾಕಿ ಲಾಗಿನ್ ಅಗಿದೆ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ Submit ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: