Free Sewing Machine-ವಿಶ್ವಕರ್ಮ ನಿಗಮದಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಮಹಿಳೆಯರಿಗೆ ಸುವರ್ಣಾವಕಾಶ!

November 27, 2026 | Siddesh
Free Sewing Machine-ವಿಶ್ವಕರ್ಮ ನಿಗಮದಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಮಹಿಳೆಯರಿಗೆ ಸುವರ್ಣಾವಕಾಶ!
Share Now:

ಈಗಾಗಲೇ ಟೈಲರಿಂಗ್ ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು(Free Sewing Machine Scheme) ಪಡೆಯಲು ಪ್ರಸ್ತುತ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನುಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಸ್ವಂತ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ ಮಹಿಳೆಯರಿಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ(Vishwakarma Nigama Scheme-2026) ಮಹತ್ವದ ಮಾಹಿತಿ ಹೊರಬಿದ್ದಿದೆ. ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವಂತವಾಗಿ ಹೊಲಿಗೆ ಕೆಲಸ ಆರಂಭಿಸಿ ಆದಾಯ ಗಳಿಸಲು ಬಯಸುವವರಿಗೆ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Scholarship Scheme-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ನಿಗಮದಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಮಾನದಂಡಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು ಯಾವುವು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳ ಮಾಹಿತಿ ಸೇರಿದಂತೆ ಈ ಯೋಜನೆಯ ಕುರಿತು ಅರ್ಜಿ ಸಲ್ಲಿಸಲು ಅವಶ್ಯವಿರುವ ಎಲ್ಲಾ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Who Can Apply For this Scheme-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧಿಕೃತ ಮಾರ್ಗಸೂಚಿಯ ಪ್ರಕಾರ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ನಿಗಮದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಹೀಗಿದೆ:

  • ಅರ್ಜಿದಾರರು ಮಹಿಳೆಯಾಗಿರಬೇಕು ಮತ್ತು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾಗಿರಬೇಕು.
  • ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ₹98,000 ಹಾಗೂ ನಗರ ಪ್ರದೇಶದಲ್ಲಿ ₹1,20,000 ಮೀರಿರಬಾರದು.
  • ಹೊಲಿಗೆ ವೃತ್ತಿಯಲ್ಲಿ ಅನುಭವವನ್ನು ಹೊಂದಿರಬೇಕು.

ಇದನ್ನೂ ಓದಿ: Fertilizer Booking App-ಡಿಸೆಂಬರ್ 1ರಿಂದ ಆ್ಯಪ್ ಮೂಲಕ ಗೊಬ್ಬರ ಖರೀದಿ! ಇಲ್ಲಿದೆ ಸಂಪೂರ್ಣ ವಿವರ!

Laste Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಯೋಜನೆಯಡಿ ಅರ್ಜಿ ಸಲ್ಲಿಸಲು 24-12-2026 ಕೊನೆಯ ದಿನಾಂಕ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಅರ್ಹ ಮಹಿಳೆಯರು ಕೊನೆಯ ದಿನಾಂಕದೊಳಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಶ್ಯವಿರುವ ಅಗತ್ಯ ದಾಖಲೆಗಳ ಪಟ್ಟಿ ಹೀಗಿದೆ:

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್‌ಬುಕ್ ಪ್ರತಿ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ಪಾಸ್‌ಪೋರ್ಟ್ ಅಳತೆಯ ಪೋಟೋ
  • ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ

ಇದನ್ನೂ ಓದಿ: Agriculture Machinery Subsidy-ಪವರ್ ಸ್ಪ್ರ‍ೇಯರ್, ಪಂಪ್ ಸೆಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಸಬ್ಸಿಡಿಯಲ್ಲಿ ಪಡೆಯಲು ಅರ್ಜಿ ಆಹ್ವಾನ!

Scheme Notification-ಯೋಜನೆಯ ಬಗ್ಗೆ ನಿಗಮದ ಅಧಿಕೃತ ಪ್ರಕಟಣೆ ಪ್ರತಿ:

uchitha holige yantra

ಇದನ್ನೂ ಓದಿ: Namma Mane Yojane-ಮುಖ್ಯಮಂತ್ರಿ ನಮ್ಮ ಮನೆ ಯೋಜನೆ: ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ!

Free Sewing Machine Online Application-ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು ಒಂದು ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಸೇವಾ ಸಿಂಧು ಪೋರ್ಟಲ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು:

Step-1: ಮೊದಲಿಗೆ ಇಲ್ಲಿ ಕ್ಲಿಕ್ Online Application ಮಾಡಿ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ.

Step-2: ಇದಾದ ಬಳಿಕ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಿದೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಆಯ್ಕೆಯನ್ನು ಮಾಡಿಕೊಂಡು ಉಚಿತ ಹೊಲಿಗೆ ಯಂತ್ರ ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಬಳಿಕ ಇಲ್ಲಿ "Apply Now" ಆಯ್ಕೆಯ ಮೇಲೆ ಒತ್ತಿ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submint" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Gold Loan-ಬ್ಯಾಂಕ್ ನಲ್ಲಿ ಗೋಲ್ಡ್ ಲೋನ್ ತೆಗೆದುಕೊಂಡವರು ತಪ್ಪದೇ ಈ ಮಾಹಿತಿ ನೋಡಿ!

Karnataka State Government Schemes-ಉಳಿದಂತೆ ಯಾವೆಲ್ಲ ನಿಗಮದಿಂದ ಪ್ರಸ್ತುತ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಪ್ರಸ್ತುತ ನಮ್ಮ ರಾಜ್ಯದಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮಗಳು ಕಾರ್ಯನಿರ್ವಹಿಸುತ್ತಿವೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ,ಕರ್ನಾಟಕ ರಾಜ್ಯ ಕುಂಬಾರ ಸಮುದಾಯಗಳ ಅಭಿವೃದ್ಧಿ ನಿಗಮ,ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ,ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಗಳ ಯೋಜನೆಗಳು ಅವುಗಳ ಮೂಲಕ ಸ್ವಯಂ ಉದ್ಯೋಗ, ಸಾಲ ಸೌಲಭ್ಯ, ಸಹಾಯಧನ ಹಾಗೂ ವೃತ್ತಿ ಆಧಾರಿತ ಯೋಜನೆಗಳ ಪ್ರಯೋಜನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತ ಅರ್ಜಿದಾರರು ಇತರೆ ನಿಗಮದ ಯೋಜನೆಯ ಬಗ್ಗೆ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗೆ ನಿಮ್ಮ ಜಿಲ್ಲೆಯ ದೇವರಾಜ ಅರಸು ನಿಗಮದ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರದ ಮೂಲಕವು ಸಹ ಅರ್ಜಿ ಸಲ್ಲಿಸಬಹುದು.

Website Link-ಎಲ್ಲಾ ನಿಗಮದ ಯೋಜನೆಯ ಬಗ್ಗೆ ಅಧಿಕೃತ ಮಾಹಿತಿ ಪಡೆಯಲು ಮತ್ತು ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: