Wheel chair application-ಉಚಿತ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆಗೆ ಅರ್ಜಿ ಆಹ್ವಾನ!

January 9, 2025 | Siddesh
Wheel chair application-ಉಚಿತ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆಗೆ ಅರ್ಜಿ ಆಹ್ವಾನ!
Share Now:

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಹ ವಿಕಲಚೇತನರಿಗೆ ಉಚಿತವಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಅನ್ನು(Wheel chair application) ವಿತರಣೆಯನ್ನು ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಒಂದು ಸ್ಥಳ ದಿಂದ ಮತ್ತೊಂದು ಸ್ಥಳಕ್ಕೆ ತೆರಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವ್ಹೀಲ್ ಚೇರ್(Wheel Chair Scheme) ಅನ್ನು ಹೊಂದಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿಕಲಚೇತನರ ಸಬಲೀಕರಣ ಇಲಾಖೆಯಿಂದ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಅನ್ನು ಪಡೆಯಲು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Gruhalakshmi 16th installment-ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ವಿಕಲಚೇತನರ ಸಬಲೀಕರಣ ಇಲಾಖೆಯಿಂದ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಅನ್ನು ಪಡೆಯಲು ಆನ್ಲೈನ್ ಮೂಲಕ ಅಗತ್ಯ ದಾಖಲಾತಿಗಳ ಸಮೇತ ಅರ್ಜಿಯನ್ನು ಸಲ್ಲಿಸಲು 21 ಜನವರಿ 2025 ಕೊನೆಯ ದಿನಾಂಕವಾಗಿರುತ್ತದೆ.

Apply Method-ಅರ್ಜಿ ಸಲ್ಲಿಸಲುವ ವಿಧಾನ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಎರಡು ವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಒಂದು ನಿಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕಂಪ್ಯೂಟರ್ ಸೆಂಟರ್ ಅನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Wheel chair Online application

ಇದನ್ನೂ ಓದಿ: Kashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

Online Application for Wheel Chair Yojana- ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ:

ಇಲ್ಲಿ ಕ್ಲಿಕ್ ಮಾಡಿ ಮೊದಲು ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು ಇದಾದ ಬಳಿಕ ಇಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಭಾಗದ ಮೇಲೆ ಕ್ಲಿಕ್ ಮಾಡಿ "Apply Now" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಅಭ್ಯರ್ಥಿಯ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

Documents For Application-ಅರ್ಜಿ ಸಲ್ಲಿಸಲು ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) ಬ್ಯಾಂಕ್ ಪಾಸ್ ಬುಕ್ ಪ್ರತಿ
3) ಇತ್ತೀಚಿಗಿನ ಪೋಟೋ
4) ರೇಷನ್ ಕಾರ್ಡ ಪ್ರತಿ
5) ವಿಕಲಚೇತನ ಪ್ರಮಾಣ ಪ್ರತ್ರ
6) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
7) ಮೊಬೈಲ್ ನಂಬರ್

ಇದನ್ನೂ ಓದಿ: 2nd PUC Exam 2025- 2nd ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ! ಇಲ್ಲಿದೆ ಡೌನ್ಲೋಡ್ ಲಿಂಕ್!

How Can Apply-ಅರ್ಜಿ ಸಲ್ಲಿಸಲು ಅರ್ಹರು:

1) ಅರ್ಜಿದಾರ ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳು ವಾಸವಾಗಿರಬೇಕು.

2) ಅರ್ಜಿದಾರ ಕುಟುಂಬ ವಾರ್ಷಿಕ ಆದಾಯ ಈ ಯೋಜನೆ ಸೌಲಭ್ಯ ಪಡೆಯಲು ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು.

3) ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ 75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.

ಇದನ್ನೂ ಓದಿ: Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

4) ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

5) ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲ್ಲೂಕಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು.

For More Information-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕೃತ ವೆಬ್ಸೈಟ್- Click here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: