Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!

July 9, 2024 | Siddesh
Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!
Share Now:

ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ ವಿಮೆ(Health Insurance Yojana) ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು ಇಂತಹವರಿಗೆ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ ವಿಮೆ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, 

ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ.

ಇದನ್ನೂ ಓದಿ: Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

How can apply for this scheme-ಯೋಜನೆಯ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

16 ರಿಂದ 59 ವಯೋಮಾನದವರಾಗಿರಬೇಕು.

ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್‌ನಲ್ಲಿ "News Paper Boy" ಎಂಬ ವರ್ಗದಡಿ ನೋಂದಣಿಯಾಗಿರಬೇಕು.

ಆದಾಯ ತೆರಿಗೆ ಪಾವತಿದಾರರಾಗಿರಬಾರದು.

ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.

ಇದನ್ನೂ ಓದಿ: Gruhalakshmi Yojana-2024: ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯಲು ಗುರುತಿನ ಚೀಟಿ ಪರಿಗಣಿಸಲು ಅನುಮೋದನೆ!

Registration process-ನೋಂದಣಿ ವಿಧಾನ:-

ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಗಳು, ಬಾಪೂಜಿ ಸೇವಾ ಕೇಂದ್ರಗಳು, ಅಂಚೆ ಕಛೇರಿಗಳು ಹಾಗೂ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್‌ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವುದು.

Required Documents for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

1) ಆಧಾರ್‌ಕಾರ್ಡ್.

2) ಆಧಾ‌ರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ.

3) ಬ್ಯಾಂಕ್‌ ಖಾತೆ ವಿವರಗಳು.

ಇದನ್ನೂ ಓದಿ: Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

Health Insurance benifits-ಯೋಜನೆಯಡಿ ಫಲಾನುಭವಿಗಳಿಗೆ ದೊರೆಯುವ ಸೌಲಭ್ಯಗಳ ವಿವರ ಹೀಗಿದೆ:

  • ಅಪಘಾತದಿಂದ ಮರಣ ಹೊಂದಿದಲ್ಲಿ ರೂ. 2.00 ಲಕ್ಷ.
  • ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ (ಶೇಕಡವಾರು ದುರ್ಬಲತೆ ಆಧಾರದ ಮೇಲೆ).
  • ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ.
  • ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು, ಯೋಜನೆಯಡಿ ನಿಗದಿಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಕಾರ್ಮಿಕ ಅಧಿಕಾರಗಳ ಕಛೇರಿ/ ಹಿರಿಯ ಕಾರ್ಮಿಕ/ಕಾರ್ಮಿಕ ನಿರೀಕ್ಷಕರುಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಿ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಕಾರ್ಮಿಕ ಸಹಾಯವಾಣಿ 155214 (24x7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯಕಾರ್ಮಿಕ ನಿರೀಕ್ಷಕರು / ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: