Annabhagya status- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ!

March 3, 2025 | Siddesh
Annabhagya status- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ!
Share Now:

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಯೋಜನೆಯ(Annabhagya amount) ಹಣವನ್ನು ನೇರ ನಗದು ವರ್ಗಾವಣೆಯ ಮೂಲಕ ಜಮಾ ಮಾಡಲಾಗಿದೆ.

ಅನ್ನಭಾಗ್ಯ(Annabhagya) ಯೋಜನೆಯಡಿ ರೇಶನ್ ಕಾರ್ಡ(Ration Card) ಹೊಂದಿರುವ ಗ್ರಾಹಕರಿಗೆ 10 ಕೆಜಿ ಅಕ್ಕಿ ವಿತರಣೆಯನ್ನು ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಸರಕಾರದಿಂದ ಆಶ್ವಾಸನೆಯನ್ನು ನೀಡಿ ಇದನ್ನು ಜಾರಿಗೆ ತರಲಾಗಿತ್ತು, ಇದರನ್ವಯ 5 ಕೆಜಿ ಅಕ್ಕಿಯನ್ನು(Annabhagya DBT Status) ನೀಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ಹಣವನ್ನು ನೀಡಲಾಗುತ್ತಿದ್ದು, ಪ್ರಸ್ತುತ ಫೆಬ್ರವರಿ ತಿಂಗಳ ಆರ್ಥಿಕ ನೆರವನ್ನು ಅರ್ಹ ಗ್ರಾಹಕರಿಗೆ ಜಮಾ ಮಾಡಲಾಗಿರುತ್ತದೆ.

ಕೇಂದ್ರ ಸರಕಾರದಿಂದ ಈ ಮೊದಲು ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಮಾತ್ರ ನೀಡಲಾಗುತ್ತಿತ್ತು ಅದರೆ ಮಾರ್ಚ-2025 ರಿಂದ ಹೆಚ್ಚುವರಿ ಅಕ್ಕಿಯನ್ನು ನೀಡಲು ಸಹ ಕೇಂದ್ರ ಒಪ್ಪಿಗೆಯನ್ನು ಸೂಚಿಸಿದ್ದು ಫೆಬ್ರವರಿ ತಿಂಗಳವರೆಗೆ ಮಾತ್ರ ರಾಜ್ಯ ಸರಕಾರದಿಂದ ಪಡಿತರ ಚೀಟಿದಾರರಿಗೆ(Ration card status) ಅಕ್ಕಿ ಬದಲು ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗೆ ಜಮಾ ಅಗಿರುವ ಅಕ್ಕಿ ಹಣದ ಜಮಾ ವಿವರವನ್ನು ಮೊಬೈಲ್ ನಲ್ಲಿ ಹೇಗೆ ಪಡೆಯುವುದು? ಮತ್ತು ಒಂದು ಕುಟುಂಬಕ್ಕೆ ಎಷ್ಟು ಹಣ ಜಮಾ ಮಾಡಲಾಗುತ್ತದೆ? ಇತ್ಯಾದಿ ಸಂಪೂರ್ಣ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ.

Feb-2025 Annabhagya Amount- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಯೋಜನೆ ಹಣ ಅರ್ಹ ಫಲಾನುಭವಿಗಳ ಖಾತೆಗೆ ಜಮಾ:

ರಾಜ್ಯದಲ್ಲಿ ಪ್ರಸ್ತುತ ಲಭ್ಯವಿರುವ ಎಲ್ಲಾ ಪಡಿತರ ಚೀಟಿದಾರರ ಕುಟುಂಬದ ಮುಖ್ಯಸ್ಥರ ಖಾತೆಗೆ ನೇರ ನಗದು ವರ್ಗಾವಣೆಯ ಮೂಲಕ ಹೆಚ್ಚುವರಿಯಾಗಿ ನೀಡಬೇಕಾದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಸದಸ್ಯರಿಗೆ ರೂ 170/- ರಂತೆ ಒಟ್ಟು ಸದಸ್ಯರ ಅನುಗುಣವಾಗಿ ಒಟ್ಟು ಮೊತ್ತವನ್ನು ಲೆಕ್ಕ ಹಾಕಿ ಅರ್ಹ ರೇಶನ್ ಕಾರ್ಡ ಕುಟುಂಬದ ಯಜಮಾನಿಯರ ಖಾತೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಡಿಬಿಟಿ ಮೂಲಕ ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಯೋಜನೆಯ ಹಣವನ್ನು ಜಮಾ ಮಾಡಲಾಗಿದೆ.

ಇದನ್ನೂ ಓದಿ: Microfinance Helpline-ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ದೂರು ಸಲ್ಲಿಸಲು ಸಹಾಯವಾಣಿ!

Annabhagya DBT Status- ಅನ್ನಭಾಗ್ಯ ಯೋಜನೆ ಹಣ ಜಮಾ ವಿವರ ಪಡೆಯುವ ವಿಧಾನ:

ಪಡಿತರ ಚೀಟಿಯನ್ನು ಹೊಂದಿರುವ ಗ್ರಾಹಕರು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ವರ್ಗಾವಣೆ ಮಾಡುವ ಆರ್ಥಿಕ ನೆರವಿನ ಜಮಾ ವಿವರವನ್ನು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿ ಪಡೆಯಬಹುದಾಗಿದೆ.

Step-1: ಪ್ರಥಮದಲ್ಲಿ ಈ Annabhagya Status ಲಿಂಕ್ ಮೇಲೆ ಒತ್ತಿ DBT Karnataka ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Annabhagya status

ಇದನ್ನೂ ಓದಿ: MSP Price List-ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ!ದರ ಎಷ್ಟು?

Step-2: ನಂತರದಲ್ಲಿ ಈ ಅಪ್ಲಿಕೇಶನ್ ಅನ್ನು ಒಪನ್ ಮಾಡಿಕೊಂಡು ಪಡಿತರ ಚೀಟಿಯಲ್ಲಿರುವ ಕುಟುಂಬದ ಯಜಮಾನಿಯ ಆಧಾರ್ ಕಾರ್ಡ ವಿವರವನ್ನು ಹಾಕಿ ಬಳಕೆದಾರ ಐಡಿಯನ್ನು ಸಕ್ರಿಯಗೊಳಿಸಿಕೊಂಡು ಈ ಅಪ್ಲಿಕೇಶನ್ ಅನ್ನು ಲಾಗಿನ್ ಅಗಲು ನಾಲ್ಕು ಅಂಕಿಯ ಪಾಸ್ವರ್ಡ್ ಅನ್ನು ಮೊಬೈಲ್ ಆಧಾರಿತ OTP ಪಡೆದು ರಚನೆ ಮಾಡಿಕೊಳ್ಳಬೇಕು.

Step-3: ಬಳಕೆದಾರ ಐಡಿ ಮತ್ತು ಪಾಸ್ವರ್ಡ ಅನ್ನು ಸಕ್ರಿಯಗೊಳಿಸಿದ ಬಳಿಅಕ "Login" ಆಯ್ಕೆಯ ಮೇಲೆ ಒತ್ತಿ ನಿಮ್ಮ ಪಾಸ್ವರ್ಡ ಅನ್ನು ನಮೂದಿಸಿ ಅಪ್ಲಿಕೇಶನ್ ಪ್ರವೇಶ ಮಾಡಬೇಕು ಇಲ್ಲಿ ಮುಖಪುಟದಲ್ಲಿ ಕಾಣುವ ."ಪಾವತಿ ಸ್ಥಿತಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ "ಅನ್ನಭಾಗ್ಯ ಯೋಜನೆ" ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಿದರೆ ಪ್ರತಿ ತಿಂಗಳು ಈ ಯೋಜನೆಯಡಿ ಜಮಾ ಅಗಿರುವ ಅನ್ನಭಾಗ್ಯ ಯೋಜನೆಯ ಹಣ ಜಮಾ ವಿವರ ಗೋಚರಿಸುತ್ತದೆ.

ಇದನ್ನೂ ಓದಿ: Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

DBT karnataka app

ಇದನ್ನೂ ಓದಿ: Free Bus for Students- SSLC ಮತ್ತು PUC ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ!

ಪ್ರತಿ ತಿಂಗಳು ಎಷ್ಟು ಹಣ ಜಮಾ ಅಗಿದೆ? UTR ನಂಬರ್, ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಅಗಿದೆ? ಜಮಾ ದಿನಾಂಕ, ಬ್ಯಾಂಕ್ ಖಾತೆಯ ಕೊನೆಯ ನಾಲ್ಕು ಸಂಖ್ಯೆ ವಿವರ ಕಾಣಿಸುತ್ತದೆ.

Ration Card List-ಅನ್ನಭಾಗ್ಯ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಹರಿರುವ ಪಟ್ಟಿಯನ್ನು ಚೆಕ್ ಮಾಡುವ ವಿಧಾನ:

ಅನ್ನಭಾಗ್ಯ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿಯನ್ನು ಹೊಂದಿರುವ ಕಡ್ಡಾಯವಾಗಿದ್ದು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅಧಿಕೃತ ಆಹಾರ ಇಲಾಖೆಯ ತಂತ್ರಾಂಶವನ್ನು ನೇರವಾಗಿ ಭೇಟಿ ಮಾಡಿ ನಿಮ್ಮ ಹಳ್ಳಿಯಲ್ಲಿ ರೇಶನ್ ಕಾರ್ಡ ಅನ್ನು ಪಡೆಯಲು ಅರ್ಹರಿರುವ ಪಟ್ಟಿಯನ್ನು ಪಡೆದುಕೊಳ್ಳಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ Village wise ration Card list ಮಾಡಿ ಅಧಿಕೃತ ಆಹಾರ ಇಲಾಖೆಯ ತಂತ್ರಾಂಶವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

Ration card list

Step-2: ಬಳಿಕ ಈ ಪೇಜ್ ನಲ್ಲಿ "ಇ-ಪಡಿತರ ಚೀಟಿ/e-Ration card" ಆಯ್ಕೆಯ ಮೇಲೆ ಕ್ಲಿಕ್ ಮಾಡಿಬೇಕು ತದನಂತರ ಇಲ್ಲಿ "ಹಳ್ಳಿ ಪಟ್ಟಿ/Show Village list" ಎಂದು ನೂತನ ಆಯ್ಕೆ ಕಾಣಿಸಿಕೊಳ್ಳುತ್ತದೆ ಇದರ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

Step-3: ನಂತರ ಈ ಪುಟದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರು ನಿಮ್ಮ ಜಿಲ್ಲೆ/District, ತಾಲ್ಲೂಕು/Taluk, ಗ್ರಾಮ ಪಂಚಾಯತಿ/Gram panchayat, ಹಳ್ಳಿ/Village ಹೆಸರನ್ನು ಆಯ್ಕೆ ಮಾಡಿಕೊಂಡು "GO" ಎಂದು ಕಾಣಿಸುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಅರ್ಹ ಪಡಿತರ ಚೀಟಿದಾರರ ಪಟ್ಟಿ ತೋರಿಸುತ್ತದೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಲಭ್ಯವಿದಿಯಾ? ಎಂದು ಚೆಕ್ ಮಾಡಿಕೊಳ್ಳಿ ಇದ್ದರೆ ಮಾತ್ರ ನಿಮಗೆ ಅನ್ನಭಾಗ್ಯ ಯೋಜನೆಯ ಹಣ ಜಮಾ ಅಗುತ್ತದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: