1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

April 17, 2025 | Siddesh
1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!
Share Now:

ರಾಜ್ಯ ಸರ್ಕಾರದಿಂದ ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು(First standard admission age) ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು ಈ ನಿಯಮಕ್ಕೆ ಸಡಿಲಿಕೆಯನ್ನು ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕದಲ್ಲಿ ಒಂದನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿಯನ್ನು ಸಡಿಲಗೊಳಿಸಲಾಗಿದೆ. ಈಗ 5 ವರ್ಷ 5 ತಿಂಗಳು ತುಂಬಿದ ಮಕ್ಕಳನ್ನು 1ನೇ ತರಗತಿಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(education minister Madhu Bangarappa) ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ತೀರ್ಮಾನದಿಂದ ಪೋಷಕರಲ್ಲಿ ವಯಸ್ಸಿನ ಮಿತಿಯ ಬಗ್ಗೆ ಇದ್ದ ಗೊಂದಲ ಮತ್ತು ಆತಂಕ ದೂರವಾಗಿದೆ.

ಇದನ್ನೂ ಓದಿ: SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ದೇಶಾದ್ಯಂತ 1ನೇ ತರಗತಿಗೆ ದಾಖಲಾತಿಗೆ 6 ವರ್ಷ ಕಡ್ಡಾಯ ಎಂಬ ನಿಯಮ ಜಾರಿಯಲ್ಲಿದೆ. ಆದರೆ, ಕರ್ನಾಟಕದಲ್ಲಿ ಈ ವರ್ಷಕ್ಕೆ ಮಾತ್ರ ವಯೋಮಿತಿಯನ್ನು ಒಂದು ವರ್ಷದ ಮಟ್ಟಿಗೆ ಸಡಿಲಗೊಳಿಸಲಾಗಿದೆ.

1st standard admission age in Karnataka- 5 ವರ್ಷ 5 ತಿಂಗಳು ತುಂಬಿದರೆ ಸಾಕು:

ಈ ವರ್ಷಕ್ಕೆ ಮಾತ್ರ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದ್ದು ಇದರನ್ವಯ 01 ಜೂನ್ 2025ಕ್ಕೆ 5 ವರ್ಷ 5 ತಿಂಗಳು ತುಂಬಿದ ಮಕ್ಕಳಿಗೆ 1ನೇ ತರಗತಿಯನ್ನು ಪ್ರವೇಶ ಮಾಡಲು ಅವಕಾಶ ನೀಡಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) ಮತ್ತು ಎಸ್‌ಇಪಿ ವರದಿಯ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. 5 ವರ್ಷ 5 ತಿಂಗಳು ತುಂಬಿದ ಮಕ್ಕಳು, ಯುಕೆಜಿ ಪೂರ್ಣಗೊಳಿಸಿದ್ದರೆ, ಈ ವರ್ಷ 1ನೇ ತರಗತಿಗೆ ದಾಖಲಾಗಬಹುದು.

ಇದನ್ನೂ ಓದಿ: Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

ಇದನ್ನೂ ಓದಿ: Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

Karnataka school admission latest news-ಮುಂದಿನ ವರ್ಷದಿಂದ 6 ವರ್ಷ ಪೂರೈಸಿರಬೇಕು:

ಆದರೆ, ಈ ಸಡಿಲಿಕೆ ಈ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ದಾಖಲಾತಿಗೆ 6 ವರ್ಷ ಕಡ್ಡಾಯ ಎಂಬ ರಾಷ್ಟ್ರೀಯ ನಿಯಮವೇ ಜಾರಿಯಲ್ಲಿರಲಿದೆ. ಈ ತಾತ್ಕಾಲಿಕ ಬದಲಾವಣೆಯು ಪೋಷಕರಿಗೆ ತಮ್ಮ ಮಕ್ಕಳ ಶಿಕ್ಷಣವನ್ನು ಯೋಜಿಸಲು ಸಹಾಯಕವಾಗಲಿದೆ.

ಈ ನಿರ್ಧಾರವು ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಪೋಷಕರಿಗೆ ಮತ್ತು ಶಾಲೆಗಳಿಗೆ ಸ್ಪಷ್ಟತೆಯನ್ನು ತಂದಿದೆ. NEP ಶಿಫಾರಸುಗಳಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ.

ಈ ಸಡಿಲಿಕೆಯಿಂದಾಗಿ, 2025ರ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಮಕ್ಕಳಿಗೆ 1ನೇ ತರಗತಿಯಲ್ಲಿ ಶಿಕ್ಷಣ(Karnataka school admission age) ಪಡೆಯಲು ಅವಕಾಶ ಸಿಗಲಿದೆ. ಪೋಷಕರು ತಮ್ಮ ಮಕ್ಕಳ ದಾಖಲಾತಿಗೆ ಸಂಬಂಧಿಸಿದಂತೆ ಶಾಲೆಗಳೊಂದಿಗೆ ಸಂಪರ್ಕದಲ್ಲಿರುವಂತೆ ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ: Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

Karnataka school admission-ಹಲವು ಗೊಂದಲಕ್ಕೆ ತೆರೆ:

ಪ್ರಾಥಮಿಕ ಶಿಕ್ಷಣ ಇಲಾಖೆಯ ಈ ನಿರ್ಧಾರದಿಂದ ಪೋಷಕರಿಗೆ ಮತ್ತು ಶಾಲಾ ಆಡಳಿತ ಮಂಡಳಿಯಲ್ಲಿ ಉಂಟಾದ ಹಲವು ಗೊಂದಲಗಳಿಗೆ ತೆರೆ ಬಿದ್ದಿದೆ.

1) ಈ ನಿರ್ಧಾರದಿಂದಾಗಿ ಹಲವಾರು ಮಕ್ಕಳಿಗೆ ಈ ವರ್ಷವೇ ಶಾಲಾ ಪ್ರವೇಶ ಸಾಧ್ಯವಾಗಲಿದೆ.

2) ಪೋಷಕರ ಆತಂಕ ಹಾಗೂ ಗೊಂದಲವನ್ನು ದೂರಮಾಡಲಾಗಿದೆ.

3) ಶಾಲೆಗಳಲ್ಲೂ ದಾಖಲಾತಿ ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಒದಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: