Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!

March 28, 2025 | Siddesh
Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!
Share Now:

ಉಚಿತ ವಸತಿ ಮತ್ತು ಊಟ ಸಹಿತ 30 ದಿನಗಳ ಹೊಲಿಗೆ ಕಲಿಕಾ ತರಬೇತಿಗೆ(Free Tailoring Training) ಅರ್ಹ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಸರ್ಕಾರದ ಯಾವೆಲ್ಲ ಯೋಜನೆಯಡಿ ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು(Holige yantra subsidy) ಪಡೆಯಬಹುದು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಹೊಲಿಗೆ ತರಬೇತಿಯನ್ನು(holige tarabeti) ಪಡೆದು ಮಹಿಳೆಯರು ತಮ್ಮ ಮನೆಯಲ್ಲಿ ಬಿಡುವಿನ ವೇಳೆಯಲ್ಲಿ ಅಥವಾ ಈ ಕ್ಷೇತ್ರದಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಪೂರ್ಣ ಅವಧಿಯ ವರೆಗೆ ಈ ಉದ್ದಿಮೆಯನ್ನು ಪ್ರಾರಂಭಿಸಲು ಸಹ ಈ ತರಬೇತಿಯು ತುಂಬಾ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

ಪ್ರತಿ ಜಿಲ್ಲೆಯಲ್ಲಿರುವ ಸ್ವ-ಉದ್ಯೋಗ ತರಬೇತಿ ಕೇಂದ್ರಗಳಲ್ಲಿ ಕಾಲ ಕಾಲಕ್ಕೆ ವಿವಿಧ ಬಗ್ಗೆಯ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುತ್ತಿದ್ದು ಪ್ರಸ್ತುತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ 1 ತಿಂಗಳ ಉಚಿತ ಟೈಲರಿಂಗ್(Sewing Machine Training) ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Tailoring training eligibility-ತರಬೇತಿಯಲ್ಲಿ ಭಾಗವಹಿಸಲು ಅರ್ಹತೆಗಳು:

  • ಉಚಿತ ಹೊಲಿಗೆ ತರಬೇತಿಯಲ್ಲಿ ಭಾಗವಹಿಸಲು ತರಬೇತಿ ಕೇಂದ್ರದಿಂಗ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ವಿವರ ಈ ಕೆಳಗಿನಂತಿದೆ:
  • ಮಹಿಳಾ ಅಭ್ಯರ್ಥಿಗಳು ಮಾತ್ರ ಹೊಲಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
  • ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
  • ಅರ್ಜಿದಾರರಿಗೆ ಕನ್ನಡ ಓದಲು ಮತ್ತು ಬರೆಯಲು ಬರಬೇಕಾಗುತ್ತದೆ.

ಇದನ್ನೂ ಓದಿ: E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

Tailoring Training Date-ತರಬೇತಿ ನಡೆಯುವ ದಿನಾಂಕ:

ಉಚಿತ ಹೊಲಿಗೆ ಯಂತ್ರ ತರಬೇತಿಯು 04 ಎಪ್ರಿಲ್ 2025 ರಿಂದ ಆರಂಭವಾಗಿ 03 ಮೇ 2025ಕ್ಕೆ ಮುಕ್ತಾಯವಾಗುತ್ತದೆ.

ತರಬೇತಿಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸುವ ವಿಧಾನ:

ಹೊಲಿಗೆ ಕಲಿಕಾ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳುಅ ಸಿದ್ದಪಡಿಸಿಕೊಂಡು ನೇರವಾಗಿ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದ್ದು ಮುಂಚಿವಾಗಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳ ಈ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿ: 9449860007, 9538281989, 9916783825, 8880444612

ಇದನ್ನೂ ಓದಿ: Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Tailoring Bussiness

ಇದನ್ನೂ ಓದಿ: Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Documents For Training-ಅಗತ್ಯ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ
  • ಪೋಟೋ
  • ಬ್ಯಾಂಕ್ ಪಾಸ್ ಬುಕ್
  • ರೇಶನ್ ಕಾರ್ಡ
  • ಮೊಬೈಲ್ ನಂಬರ್

Free Training Course-ತರಬೇತಿಯು ಸಂಪೂರ್ಣ ಉಚಿತ:

ಉಚಿತ ಹೊಲಿಗೆ ತರಬೇತಿಯನ್ನು ಪಡೆಯಲು ಅಭ್ಯರ್ಥಿಗಳು ಯಾವುದೇ ಬಗ್ಗೆಯ ಶುಲ್ಕವನ್ನು ಪಾವತಿ ಮಾಡುವ ಅವಶ್ಯಕತೆಯಿರುವುದಿಲ್ಲ ತರಬೇತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ವಸತಿ ಮತ್ತು ಊಟ ಸಂಪೂರ್ಣ ಉಚಿತವಾಗಿರುತ್ತದೆ.

ಇದನ್ನೂ ಓದಿ: Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

Tailoring Training Place-ತರಬೇತಿ ಎಲ್ಲಿ ನಡೆಯುತ್ತದೆ?

ಉಚಿತ ಹೊಲಿಗೆ ತರಬೇತಿಯು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಕೇಂದ್ರದಲ್ಲಿ ನಡೆಯುತ್ತದೆ.

Holige Yantra Subsidy Schemes-ಯಾವೆಲ್ಲ ಯೋಜನೆಯಡಿ ಹೊಲಿಗೆ ಯಂತ್ರಕ್ಕೆ ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದು?

ಹೊಲಿಗೆ ಯಂತ್ರಕ್ಕೆ ಸರ್ಕಾರದಿಂದ ಸಹಾಯಧನ ಪಡೆಯಲು ನಮ್ಮ ರಾಜ್ಯದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಯೋಜನೆಗಳು ಮುಖ್ಯವಾಗಿ ನಿರುದ್ಯೋಗಿ ಯುವಕ/ಯುವತಿಯರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಆರ್ಹಕವಾಗಿ ನೆರವು ನೀಡುತ್ತವೆ.

1) ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (PM Vishwakarma Scheme) - WEBSITE LINK
2) ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆ- WEBSITE LINK
3) ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆ- WEBSITE LINK
4) ಶ್ರಮಶಕ್ತಿ ಯೋಜನೆ- WEBSITE LINK

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: