Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!

May 17, 2025 | Siddesh
Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!
Share Now:

ರಾಜ್ಯ ಸರ್ಕಾರದಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆ/ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ(Guest lecturer) ಪ್ರತಿ ತಿಂಗಳು ನೀಡುತ್ತಿರುವ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ಪ್ರಸ್ತುತ ಈ ಅಂಕಣದಲ್ಲಿ ಪ್ರಾಥಮಿಕ ಹಾಗೂ ಪ್ರೌಡಶಾಲೆ/ಪದವಿ ಪೂರ್ವ ಕಾಲೇಜುಗಳಲ್ಲಿ(Karnataka Guest Teacher Salary) ಮಕ್ಕಳಿಗೆ ಪಾಠ ಮಾಡುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಈ ಹಿಂದೆ ಎಷ್ಟು ವೇತನ ಪಾವತಿ ಮಾಡಲಾಗುತ್ತಿತ್ತು ಪ್ರಸ್ತುತ ಎಷ್ಟು ಏರಿಕೆ ಮಾಡಲಾಗಿದೆ ಇನ್ನಿತರೆ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ತರಬೇತಿ! ಸಬ್ಸಿಡಿಯಲ್ಲಿ ಯಂತ್ರ ಪಡೆಯಲು ಅವಕಾಶ!

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಭಾಗದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ಅನೇಕ ದಿನಗಳಿಂದ ಗೌರವಧನವನ್ನು ಹೆಚ್ಚಳ ಮಾಡಬೇಕು ಎನ್ನುವ ವಿಷಯದ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿಯನ್ನು ಸಲ್ಲಿಸಿದ್ದರು ಪ್ರಸ್ತುತ ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳ ಮಾಡಲು ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ.

Guest Teacher Salary Hike-ರೂ ₹2,000 ಗೌರವಧನ ಹೆಚ್ಚಳ:

ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆ/ಪದವಿ ಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರತಿ ತಿಂಗಳು ನೀಡುತ್ತದ ಗೌರವಧನವನ್ನು ರೂ ₹2,000 ಏರಿಕೆ ಮಾಡಿ ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

Guest Teacher Salary Details-ಗೌರವಧನ ಹೆಚ್ಚಳದ ವಿವರ ಹೀಗಿದೆ:

ರಾಜ್ಯ ಸರ್ಕಾರದಡಿ ಬರುವ ಎಲ್ಲಾ ಜಿಲ್ಲೆಗಳಲ್ಲಿನ ಪ್ರಾಥಮಿಕ ಹಾಗೂ ಪ್ರೌಡಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವಧನವನ್ನು ನಿಗದಿಪಡಿಸಲಾಗಿತ್ತು ಇದೇ ಮಾದರಿಯಲ್ಲಿ ಸಂಭಾವನೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹12,000 ನಿಗದಿಪಡಿಸಿತ್ತು,

ಅದರೆ ಈಗ ಇದನ್ನು ಪರಿಷ್ಕರಿಸಿ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಿ ಕ್ರಮವಾಗಿ ಪ್ರಾಥಮಿಕ ಅತಿಥಿ ಶಿಕ್ಷಕರಿಗೆ ರೂ ₹12,000 , ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ರೂ ₹12,500, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರೂ ₹14,000 ಗೌರವಧನ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Property-ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ! ಬಿ-ಖಾತಾ ನೀಡುವ ಅವಧಿ ವಿಸ್ತರಣೆ!

Guest Teacher Salary Hike Info-ಪರಿಷ್ಕೃತ ಗೌರವಧನ ವಿವರ:

ವಿವರಹಿಂದಿನ ಗೌರವಧನಪರಿಷ್ಕೃತ ಗೌರವಧನ
ಪ್ರಾಥಮಿಕ ಅತಿಥಿ ಶಿಕ್ಷಕರಿಗೆ₹10,000 ₹12,000
ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ₹10,500 ₹12,500
ಪದವಿ ಪೂರ್ವ ಕಾಲೇಜು ಅತಿಥಿ ಶಿಕ್ಷಕರಿಗೆ₹12,000 ₹14,000

Guest Teacher Salary Hike Order Copy-ಅಧಿಕೃತ ಆದೇಶದ ಪ್ರತಿ:

Guest Teacher Salary
Guest Teacher salary order

ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್-Click here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: