Student Bus Pass-KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಜಿ ಅಹ್ವಾನ!

June 1, 2025 | Siddesh
Student Bus Pass-KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಜಿ ಅಹ್ವಾನ!
Share Now:

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್ ಪಾಸ್(Bus Pass) ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುತ್ತಿದ್ದು, ಪಾಸುಗಳನ್ನು(KSRTC Student Bus Pass) ಪಡೆಯಲು ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್ (https://sevasindhuservices.karnataka.gov.in/buspassservices/) ನಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

ಪ್ರಸ್ತುತ ಈ ಲೇಖನದಲ್ಲಿ KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಇದರ ಬಗ್ಗೆ KSRTC ಸಂಸ್ಥೆಯಿಂದ ಯಾವೆಲ್ಲ ಅಂಶಗಳನ್ನು ಪ್ರಕಟಣೆ ಹೊರಡಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

KSRTC Student Bus Pass Fee-ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ:

ಆನ್ ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ. 30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Tractor Cultivator Subsidy- ಸಬ್ಸಿಡಿಯಲ್ಲಿ ₹ 9,900/- ಪಾವತಿಸಿ ಟ್ರ್ಯಾಕ್ಟರ್ ಕಲ್ಟಿವೇಟರ್ ಪಡೆಯಲು ಅರ್ಜಿ!

Student Bus Pass Application-ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‍ಗಾಗಿ ಅರ್ಜಿ ಸಲ್ಲಿಸಲು Declaration Form ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್‍ಸೈಟ್‍ನಲ್ಲಿ https://ksrtc.karnataka.gov.in/studentpass ಡೌನ್‍ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಪಾಸ್ ಕೌಂಟರ್ ಆಯ್ಕೆ ಮಾಡಿ ಸಲ್ಲಿಸುವುದು.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‍ನ ವಿಳಾಸದ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿ ಪಾಸುಗಳನ್ನು 2025 ನೇ ಜೂನ್ 2 ರಿಂದ ನಿಗದಿತ ಪಾಸ್ ಕೌಂಟರ್ ಗಳಲ್ಲಿ ವಿತರಿಸಲಾಗುವುದು.

ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ಯುಪಿಐ ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.

ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ.

ಇದನ್ನೂ ಓದಿ: Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

Scholarship Yojane

Last Date For Bus Pass-ಪ್ರಮುಖ ದಿನಾಂಕಗಳು:

ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- 31 ಮೇ 2025

ಬಸ್ ಪಾಸ್ ವಿತರಣೆ ಆರಂಭ- 02 ಜೂನ್ 2025

ಈ ಯೋಜನೆಯ ಸೌಲಭ್ಯವನ್ನು ವಿದ್ಯಾರ್ಥಿನಿಯರು ಸಹ ಪಡೆಯಬಹುದಾಗಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಈ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದಾಗಿರುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‍ಸೈಟ್((Website Click here) ನಲ್ಲಿ ಒದಗಿಸಲಾಗಿದೆ.

ಇದನ್ನೂ ಓದಿ: Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

KSRTC Bus Pass Price List-ವಿದ್ಯಾರ್ಥಿ ಪಾಸಿನ ದರಗಳು:

ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ: ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ರೂ.150/- ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.

ಪ್ರೌಢಶಾಲೆ ವಿದ್ಯಾರ್ಥಿಗಳು:

ಸಾಮಾನ್ಯ ವರ್ಗದ ಬಾಲಕ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪಾಸಿದ ದರ ರೂ. 750 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.
ಸಾಮಾನ್ಯ ವರ್ಗದ ಬಾಲಕಿಯ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪಾಸಿದ ದರ ರೂ. 550, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.

ಇದನ್ನೂ ಓದಿ: Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

ಕಾಲೇಜು/ ಡಿಪ್ಲೋಮಾ ವಿದ್ಯಾರ್ಥಿಗಳು:

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪಾಸಿದ ದರ ರೂ.1050/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.

ಐಟಿಐ ವಿದ್ಯಾರ್ಥಿಗಳು:

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 12 ತಿಂಗಳ ಅವಧಿಗೆ ಪಾಸಿದ ದರ ರೂ. ರೂ.1310/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 160.

ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು:

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ರೂ.1550/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.

ಇದನ್ನೂ ಓದಿ: Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

ಸಂಜೆ ಕಾಲೇಜು / ಪಿಹೆಚ್‍ಡಿ ವಿದ್ಯಾರ್ಥಿಗಳು:

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ರೂ.1350/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150 ನಿಗಧಿಪಡಿಸಲಾಗಿದೆ.

For More Information-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ಲಿಂಕ್ ಗಳು:

ವಿದ್ಯಾರ್ಥಿ ಪಾಸುಗಳಿಗೆ ಅರ್ಜಿ ಸಲ್ಲಿಕೆ/ ಪಾಸು ಮುದ್ರಣ ಸಂಬಂಧ ದೂರುಗಳಿದ್ದಲ್ಲಿ, ಸೇವಾಸಿಂಧು ಪೋರ್ಟಲ್ ಮುಖೇನ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳಿಗೆ ಸಹಾಯವಾಣಿ ಸಂಖ್ಯೆ – 080-24410574 ಅಥವಾ ಇ-ಮೇಲ್ ವಿಳಾಸ: sevasindhu@karnataka.gov.in, ಪಾಸ್ ವಿತರಣಾ ಕೇಂದ್ರಗಳಲ್ಲಿ ಪಾಸ್ ಕಾರ್ಡಿನ ಮುದ್ರಣ ಮತ್ತು ವಿತರಣೆಗೆ ಸಂಬಂಧಿಸಿದ ವಿಷಯಗಳಿಗೆ

ಸಹಾಯವಾಣಿ ಸಂಖ್ಯೆ 8904085030 / 080-49203888 ಅಥವಾ ಇ-ಮೇಲ್ onehlepdesk@karnataka.gov.in ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾಲ್‍ಸೆಂಟರ್ ಸಹಾಯವಾಣಿ ಸಂಖ್ಯೆ 080-26252625 ಅಥವಾ ಇ-ಮೇಲ್ ವಿಳಾಸ: callcen

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: