Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 16, 2025 | Siddesh
Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!
Share Now:

ಕೃಷಿ ಡಿಪ್ಲೊಮಾ(Diploma in agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಬ್ರಹ್ಮಾವರದಲ್ಲಿ ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎರಡು ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ (krishi diploma)ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಪ್ರವೇಶವನ್ನು(Diploma agriculture admission-2025) ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ನಮೂನೆ ಡೌನ್ಲೋಡ್ ವೆಬ್ಸೈಟ್ ಲಿಂಕ್ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Diploma agriculture admission eligibility criteria-ಪ್ರವೇಶಕ್ಕೆ ನಿಗದಿಪಡಿಸಿದ ಅರ್ಹತೆಗಳು:

ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಿಂದ ತಿಳಿಸಿರುವ ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವುದು ಕಡ್ದಾಯವಾಗಿದೆ.

1) ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ(uahs shivamogga) ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಟ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)

2) ಪ್ರವೇಶ ಬಯಸುವ ವಿದ್ಯಾರ್ಥಿಯು ದಿನಾಂಕ: 06-06-2025 ರಂದು ಅರ್ಜಿದಾರ ಅಭ್ಯರ್ಥಿಯ ವಯಸ್ಸು 19 ವರ್ಷಗಳನ್ನು ಮೀರಿರಬಾರದು.

ಇದನ್ನೂ ಓದಿ: Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

Diploma agriculture application

Diploma agriculture admission last date-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 27 ಜೂನ್ 2025
ಡಿಮಾಂಡ್ ಡ್ರಾಪ್ಟ್(ಡಿ,ಡಿ) ಪಡೆಯಲು ಕೊನೆಯ ದಿನಾಂಕ- 27 ಜೂನ್ 2025
ವಿಶ್ವವಿದ್ಯಾಲಯದ ವೆಬ್ಸೈಟ್ ನಲ್ಲಿ ಅರ್ಹತಾ ಪಟ್ಟಿ ಬಿಡುಗಡೆ ದಿನಾಂಕ- 04 ಜುಲೈ 2025

Diploma agriculture-ರೈತರ ಮಕ್ಕಳಿಗೆ ಶೇ 50% ಮೀಸಲಾತಿ:

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

Diploma agriculture application link-ಅರ್ಜಿ ನಮೂನೆ ಮತ್ತು ಡಿಡಿ ಕುರಿತು ವಿವರಣೆ:

ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ ಸೈಟ್ : www.uahs.edu.in ನಲ್ಲಿ ದಿನಾಂಕ: 06-05-2025 ರಿಂದ 27-06-2025 ರವರೆಗೆ ಡೌನ್‌ ಲೋಡ್ ಮಾಡಬಹುದು. ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 27-06-2025ರೊಳಗೆ ಕಳುಹಿಸಿ ಕೊಡಬೇಕು.

Application link-ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್-Download Now

ಇದನ್ನೂ ಓದಿ: PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

ಡಿ.ಡಿ ತೆಗೆಯುವ ವಿಳಾಸ:

ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಡಿ.ಡಿಯನ್ನು ತೆಗೆಯಬೇಕಾಗುತ್ತದೆ ಇದಕ್ಕಾಗಿ ಡಿ.ಡಿ ತೆಗೆಯುವ ವಿಳಾಸ ಹೀಗಿದೆ: "Comptroller, KSNUAHS, Shivamogga - 577412"

How to Apply-ಅರ್ಜಿ ಸಲ್ಲಿಸುವುದು ಹೇಗೆ?

ಭರ್ತಿ ಮಾಡಿದ ಅರ್ಜಿಗಳನ್ನು ಡಿಡಿಯನ್ನು ಲಗತ್ತಿಸಿ "ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ - 577 412 ಇಲ್ಲಿಗೆ ದಿನಾಂಕ: 27-06-2025 (ಸಂಜೆ 04.00 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಕಳುಹಿಸಬೇಕು. ದಿನಾಂಕ : 27-06-2025 ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

Application Fee-ಅರ್ಜಿ ಶುಲ್ಕ:

ಸಾಮಾನ್ಯ ವರ್ಗದವರಿಗೆ- ರೂ. 500/-
ಪ.ಜಾ./ಪ.ಪಂ./ಪ್ರವರ್ಗದವರಿಗೆ- ರೂ. 250/-

Required Documents For Application-ಅರ್ಜಿ ಸಲ್ಲಿಸಲು ದಾಖಲೆಗಳು:

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ರೈತರ ಮಕ್ಕಳಾಗಿದ್ದಲ್ಲಿ ವ್ಯವಸಾಯ ಪ್ರಮಾಣ ಪತ್ರ
  • ಪೋಟೋ
  • SSLC ಅಂಕಪಟ್ಟಿ
  • ಕನ್ನಡ ಮತ್ತು ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಇದನ್ನೂ ಓದಿ: Gold Loan-ಚಿನ್ನದ ಮೇಲೆ ಸಾಲ ಪಡೆಯಲು RBI ನಿಂದ ಹೊಸ ನಿಯಮ ಜಾರಿ!

Diploma Agriculture Selection Process-ಕೃಷಿ ಡಿಪ್ಲೋಮಾ ಪ್ರವೇಶಕ್ಕೆ ಆಯ್ಕೆ ವಿಧಾನ:

ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುತ್ತದೆ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳಪಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಹಾಗೂ ಇನ್ನಿತರೆ ಮಾಹಿತಿಯನ್ನು ವೆಬ್‌ಸೈಟ್ ಮುಖಾಂತರ ತಿಳಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

For More Information-ಈ ಕುರಿತು ಇನ್ನು ಅಧಿಕ ಮಾಹಿತಿಯನ್ನು ಪಡೆಯಲು ಉಪಯುಕ್ತ ವೆಬ್ಸೈಟ್ ಲಿಂಕ್:

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ಸೈಟ್- Click Here
ಡಿಪ್ಲೊಮಾ ಕೃಷಿ ಕೋರ್ಸ್‌ ಪ್ರವೇಶದ ಅಧಿಕೃತ ಪ್ರಕಟಣೆ- Download Now
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಪ್ರಕಟಣೆ- Download Now

WhatsApp Group Join Now
Telegram Group Join Now
Share Now: