Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 6, 2025 | Siddesh
Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

2025-26 ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ(Scholarship Application-2025) ಬರುವ ವರ್ಗಕ್ಕೆ ಸೇರಿದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುವ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಿಕ್ಷಣ ವೆಚ್ಚವನ್ನು(School Fee) ಭರಿಸಲು ಇಲಾಖೆಯಿಂದ ನೆರವು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಅಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ(School Fee Scholarship)ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸಲು SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು(Scholarship) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Who Can Apply-ಅರ್ಜಿ ಸಲ್ಲಿಸಲು ಅರ್ಹರು:

ವಿದ್ಯಾರ್ಥಿಯು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿಗದಿಪಡಿಸಿರುವ ವರ್ಗಕ್ಕೆ ಸೇರಿದವರಾಗಿರಬೇಕು.

ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯವು 2.0 ಲಕ್ಷದಿಂದ 2.5 ಲಕ್ಷದ ಮಿತಿಯಲ್ಲಿರಬೇಕು.

ವಿದ್ಯಾರ್ಥಿಯು ಪಿ.ಯುಸಿ,ಡಿಪ್ಲೊಮಾ,ಪದವಿ,ಸ್ನಾತಕೋತ್ತರ ಪದವಿ,ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಇದನ್ನೂ ಓದಿ: Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Important Dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ: 13 ಜೂನ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025

Notification copy-ಅಧಿಕೃತ ಪ್ರಕಟಣೆ ಪ್ರತಿ:

Scholarship Useful Websites Links-ಅರ್ಜಿ ಸಲ್ಲಿಸಲು ಉಪಯುಕ್ತ ವೆಬ್ಸೈಟ್ ಲಿಂಕ್:

ಅರ್ಜಿ ಸಲ್ಲಿಸಲು ಲಿಂಕ್Apply Now
ಇಲಾಖೆಯ ಅಧಿಕೃತ ವೆಬ್ಸೈಟ್Click Here
ಸಹಾಯವಾಣಿ8277799990
ಇತರೆ ವಿದ್ಯಾರ್ಥಿವೇತನದ ಮಾಹಿತಿRead More

ಇದನ್ನೂ ಓದಿ: Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

SSP Scholarship Online Application-ಆನ್ಲೈನ್ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಮನೆಯಲ್ಲೇ ಕುಳಿತು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ರಾಜ್ಯ ಸರ್ಕಾರದ SSP ತಂತ್ರಾಂಶವನ್ನು ಭೇಟಿ ಮಾಡಿ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ Scholarship Application ಅಧಿಕೃತ SSP ವಿದ್ಯಾರ್ಥಿ ವೇತನದ ತಂತ್ರಾಂಶವನ್ನು ಭೇಟಿ ಮಾಡಬೇಕು.

Step-2: ತದನಂತರ ಈ ಜಾಲತಾಣಕ್ಕೆ ಪ್ರಥಮ ಬಾರಿಗೆ ಭೇಟಿ ಮಾಡುತ್ತಿರುವವರು ಪ್ರಥಮ ಹಂತದಲ್ಲಿ ಅಗತ್ಯ ವಿವರವನ್ನು ಭರ್ತಿ ಮಾಡಿ ಖಾತೆಯನ್ನು ರಚನೆ ಮಾಡಿಕೊಳ್ಳಬೇಕು. ಖಾತೆಯನ್ನು ರಚನೆ ಮಾಡಿಕೊಂಡು "ಲಾಗಿನ್" ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ ಲಾಗಿನ್ ಅಗಬೇಕು.

Step-3: ಈ ಮೇಲೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Required Documenst For Scholarship-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar
  • ಬ್ಯಾಂಕ್ ಪಾಸ್ ಬುಕ್/Bank Passbook
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And income certificate
  • ಕಾಲೇಜು ಶುಲ್ಕು ಪಾವತಿ ರಶೀದಿ/Fee Receipt
  • ವಿದ್ಯಾರ್ಥಿಯ ಪೋಟೋ/Photo
  • ಅಂಕಪಟ್ಟಿ/Marks card
  • ಮೊಬೈಲ್ ನಂಬರ್/Mobile Number

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: