PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

July 6, 2025 | Siddesh
PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!
Share Now:

ಕೇಂದ್ರ ಸರ್ಕಾರದಿಂದ ಗ್ರಾಮೀಣ ಮತ್ತು ನಗರ ಭಾಗದ ಗರ್ಭಿಣಿ ಮಹಿಳೆಯರಿಗೆ(PMMVY Yojana) ಉತ್ತಮ ಪೌಷ್ಟಿಕ ಆಹಾರವನ್ನು ಸೇವನೆ ಮಾಡಲು ಆರ್ಥಿಕವಾಗಿ ನೇರವನ್ನು ನೀಡಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಮೂಲಕ ₹11,000 ರೂ ಆರ್ಥಿಕ ನೆರವನ್ನು ಗರ್ಭಿಣಿ ಮಹಿಳೆಯರಿಗೆ ಒದಗಿಸಲಾಗುತ್ತದೆ. ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಈ ಯೋಜನೆಯಡಿ ಅರ್ಹ ಗರ್ಭಿಣಿ ಮಹಿಳೆಯರಿಗೆ(PMMVY Yojana Application) ಆರ್ಥಿಕ ನೆರವನ್ನು ಒದಗಿಸಲಾಗುತ್ತಿದ್ದು ಇದಕ್ಕಾಗಿ ಮಹಿಳೆಯರು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇನ್ನಿತರೆ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Milk Incentive-9.07 ಲಕ್ಷ ರೈತರ ಖಾತೆಗೆ 2,854 ಕೋಟಿ ಹಾಲಿನ ಪ್ರೋತ್ಸಾಹಧನ!

ಸಾಮಾನ್ಯವಾಗಿ ಬಹುತೇಕೆ ದೊಡ್ಡ ಸಂಖ್ಯೆ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ(PMMVY Scheme) ಮಾಹಿತಿಯು ತಿಳಿದೇ ಇರುವುದಿಲ್ಲ ಜೊತೆಗೆ ಮತ್ತೊಷ್ಟು ಜನರಿಗೆ ಯೋಜನೆಯ ಕುರಿತು ಮಾಹಿತಿ ಇರುತ್ತದೆ ಅದರೆ ಆ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅದರ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಮಾಹಿತಿಯು ಸರಿಯಾಗಿ ಇರುವುದಿಲ್ಲ ಇದಕ್ಕಾಗಿ ನಮ್ಮ ಪುಟದಿಂದ ಅನೇಕ ಯೋಜನೆಗಳ ಮಾಹಿತಿಯನ್ನು ಕಾಲ ಕಾಲಕ್ಕೆ ನೀಡಲಾಗುತ್ತಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ನಮ್ಮ ಪುಟವನ್ನು ಬೆಂಬಲಿಸಿ.

Matru Vandana Yojane-2025: ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ವಿವರ ಹೀಗಿದೆ:

ನಮ್ಮ ದೇಶದಲ್ಲಿ ಕೇಂದ್ರ ಸರಕಾರವು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯನ್ನು 1 ಜನವರಿ 2017 ರಿಂದ ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದ್ದು ಈ ಯೋಜನೆಯ ಮೂಲಕ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರವನ್ನು ಸೇವನೆ ಮಾಡಲು ₹11,000 ರೂ ವರೆಗೆ ಅರ್ಥಿಕ ನೆರವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Who can apply for PMMVY scheme- ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಯಾರೆಲ್ಲೆ ಅರ್ಜಿ ಸಲ್ಲಿಸಬಹುದು:

ಗರ್ಭಿಣಿ ಮಹಿಳೆಯರು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಈ ಕೆಳಗೆ ತಿಳಿಸಿರುವ ಅರ್ಹತಾ ಮಾನದಂಡಗಳನ್ನು ಹೊಂದಿದ್ದರೆ ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿರುತ್ತದೆ.

  • ಅರ್ಜಿದಾರರು ಬಿಪಿಎಲ್ ರೇಶನ್ ಕಾರ್ಡ ಹೊಂದಿರಬೇಕು.
  • ಇ-ಶ್ರಮ್ ಕಾರ್ಡ ಅನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.
  • ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಮಹಿಳೆಯರು.
  • ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸಹಾಯಧನ ಪಡೆಯುತ್ತಿರುವವರು.
  • ನರೇಗಾ ಯೋಜನೆ ಚಾಬ್ ಕಾರ್ಡ ಹೊಂದಿರುವವರು.
  • ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವವರು ಸಹ ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

PMMVY Yojana amount details- ಮಾತೃವಂದನಾ ಯೋಜನೆಯಡಿ ಎಷ್ಟು ಮೊತ್ತವನ್ನು ನೀಡಲಾಗುತ್ತದೆ?

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಅರ್ಹ ಫಲಾನುಭವಿ ಮಹಿಳೆಯರಿಗೆ ಮೊದಲ ಮಗುವಿವ ಸಮಯದಲ್ಲಿ ರೂ 5,000 ಮತ್ತು ಎರಡನೇ ಮಗುವಿನ ಹೆರಿಗೆ ಸಮಯದಲ್ಲಿ ರೂ 6,000 ಒಟ್ಟು 11,000 ಸಾವಿರ ಅರ್ಥಿಕ ನೆರವನ್ನು ಪಡೆಯಲು ಅವಕಾಶವಿರುತ್ತದೆ.

How To Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ತಮ್ಮ ಹಳ್ಳಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿರು ಅಂಗನವಾಡಿ ಕಾರ್ಯಕರ್ತೆಯರನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿಯು ಸಹ ಅರ್ಜಿ ನಮೂನೆಯನ್ನು ಪಡೆದು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Documents for PMMVY- ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:

  • ತಾಯಿ ಕಾರ್ಡ
  • ಆಧಾರ್ ಕಾರ್ಡ ಪ್ರತಿ
  • ರೇಶನ್ ಕಾರ್ಡ ಪ್ರತಿ
  • ಮಗುವಿನ ಲಸಿಕೆ ಮಾಹಿತಿಯ ಪ್ರತಿ
  • ಫಲಾನುಭವಿಯ ಬ್ಯಾಂಕ್ ಪಾಸ್ ಬುಕ್
  • ಪೋಟೋ
  • ಮೊಬೈಲ್ ನಂಬರ್

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲಾಖೆಯ ವೆಬ್ಸೈಟ್: Click here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: