Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

July 17, 2025 | Siddesh
Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!
Share Now:

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ(Devaraj Arasu Nigama) ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಪ್ರವೇಶವನ್ನು ಪಡೆದ ವಿದ್ಯಾರ್ಥಿಗಳಿಗೆ ಬಡ್ಡಿರಹಿತವಾಗಿ(Education Loan Scheme) ಒಂದು ಕೋರ್ಸ್ ಪೂರ್ಣ ಅವಧಿಗೆ ರೂ 50.00 ಲಕ್ಷದವರೆಗೆ ಸಾಲವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಕೆಲವು ಉನ್ನತ ಕೋರ್ಸ್ ಗಳಿಗೆ ಕಾಲೇಜು ಶುಲ್ಕ ಹೆಚ್ಚಿರುವುದರಿಂದ ವಿದೇಶದಲ್ಲಿ ಕಡಿಮೆ ಶುಲ್ಕ ಇರುವ ಕಾರಣ ಅನೇಕ ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಹೋಗುತ್ತಿದ್ದು ಇಂತಹ ವಿದ್ಯಾರ್ಥಿಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಲು ಬಡ್ಡಿರಹಿತವಾಗಿ(Education Loan Interest Subsidy Scheme) ಸಾಲವನ್ನು ಒದಗಿಸಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Scholarship-HDFC ಬ್ಯಾಂಕಿನಿಂದ Parivartan ಯೋಜನೆಯಡಿ ₹75,000 ವಿದ್ಯಾರ್ಥಿವೇತನ!

ಈ ಯೋಜನೆಯಡಿ ಅರ್ಥಿಕ ನೆರವನ್ನು(Education Loan) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಪ್ರಮುಖ ಕ್ರಮಗಳೇನು? ಅನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇತ್ಯಾದಿ ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Education Loan Interest Subsidy-ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:

ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟಲ್ & ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಟರ್ & ಅಲೈಡ್ ಸೈನ್ಸಸ್/ ಟೆಕ್ನಾಲಜಿ, ಮೆಡಿಸಿನ್, ಹುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ & 3ಬಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಬಡ್ಡಿರಹಿತವಾಗಿ ಸಾಲ ಸೌಲಭ್ಯವನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಇದನ್ನೂ ಓದಿ: Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

Who Can Apply-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತೆಗಳು:

  • ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಸಾಲ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು.
  • ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೇಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.
  • ಕ್ಯೂ.ಎಸ್. ವಿಶ್ವ ರ್ಯಾಂಕಿಂಗ್ 1000 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರದೇಶ ಪಡೆದಿರಬೇಕು.
  • ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ /ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.
  • ಅರ್ಜಿಯ ಜೋತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.
  • ಸ್ನಾತಕೋತ್ತರ ಕೊರ್ಸಗಳಿಗೆ ವಯೋಮಿತಿ 32, ಪಿ.ಎಚ್.ಡಿ ಕೊರ್ಸಗಳಿಗೆ 35 ವರ್ಷಗಳ ವಯೋಮಿತಿಗಳೊಳಗಿರಬೇಕು
  • ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Education Loan

Education Loan Amount-ವಿದ್ಯಾರ್ಥಿಗಳು ಈ ಯೋಜನೆಯಡಿ ಎಷ್ಟು ನೆರವು ಪಡೆಯಬಹುದು?

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಟ 25.00 ಲಕ್ಷ ಹಾಗೂ ಪೂರ್ಣ ಕೋರ್ಸ್ ಅವಧಿಗೆ 50.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ನಿಗಮದಿಂದ ಒದಗಿಸಲಾಗುತ್ತದೆ.

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಸೇವಾ ಸಿಂಧು ಪೋರ್ಟಲ್(https://www.sevasindu.karnataka.gov.in) ಮೂಲಕ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ್ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now

ಇದನ್ನೂ ಓದಿ: Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Required Documents For Education Loan-ಅರ್ಜಿ ಸಲ್ಲಿಸಲು ದಾಖಲೆಗಳು:

ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ಪೋಟೋ
  • ವಿದೇಶದ ಕಾಲೇಜಿನಲ್ಲಿ ಪ್ರವೇಶ ಪಡೆದಿರುವುದರ ಬಗ್ಗೆ ದೃಡೀಕರಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸ

ಇದನ್ನೂ ಓದಿ: Awas Yojana-ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಆಹ್ವಾನ!

Important Notice-ವಿದ್ಯಾರ್ಥಿಗಳಿಗೆ ನಿಗಮದಿಂದ ವಿಶೇಷ ಸೂಚನೆಗಳು:

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಆಧಾರ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯು ಇದ್ದು ಹೊಂದಾಣಿಕೆಯಾಗಬೇಕು.

Loan Repayment Method-ಸಾಲ ಮರುಪಾವತಿ ವಿಧಾನ:

ವಿದ್ಯಾರ್ಥಿಗಳು ನಿಗಮದಿಂದ ಪಡೆದ ಸಾಲವನ್ನು ಮರುಪಾವತಿ ಮಾಡುವಿ ವಿಧಾನದ ಮಾಹಿತಿ ಹೀಗಿದೆ ಮರುಪಾವತಿ ಅವಧಿಯು ಗರಿಷ್ಠ 60 ಮಾಸಿಕ ಕಂತುಗಳು ವ್ಯಾಸಂಗ ಪೂರ್ಣಗೊಂಡ 1 ವರ್ಷದ ನಂತರ ಅಥವಾ ಉದ್ಯೋಗ ದೊರೆತ 6 ತಿಂಗಳ ನಂತರ ಮರುಪಾವತಿ ಕಂತು ಪ್ರಾರಂಭವಾಗುತ್ತದೆ ಎಂದು ನಿಗಮದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

For More Information-ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್-https://dbcdc.karnataka.gov.in/kn

WhatsApp Group Join Now
Telegram Group Join Now
Share Now: