New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

July 19, 2025 | Siddesh
New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!
Share Now:

ಕರ್ನಾಟಕ ರಾಜ್ಯದಲ್ಲಿ ಅರ್ಹ ನಾಗರಿಕರಿಗೆ ಹೊಸ ರೇಷನ್ ಕಾರ್ಡ(New Ration Card)ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSA) ಅಡಿಯಲ್ಲಿ ರೇಷನ್ ಕಾರ್ಡಗಳನ್ನು(New Ration Card Application)ಪಡೆದಿರುವ ಅರ್ಹ ಕುಟುಂಬಗಳಿಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ: Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ನಾಗರಿಕರು ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ಪಡೆಯಲು ಪಡಿತರ ಚೀಟಿ/ರೇಷನ್ ಕಾರ್ಡ ಅನ್ನು ಹೊಂದಿರುವುದ ಕಡ್ಡಾಯವಾಗಿದ್ದು ಪ್ರಸ್ತುತ ರೇಷನ್ ಕಾರ್ಡ(Ration Card) ಅನ್ನು ಹೊಂದಿಲ್ಲದೇ ಇರುವ ಅರ್ಹ ಕುಟುಂಬಗಳು ಅರ್ಜಿಯನ್ನು ಸಲ್ಲಿಸಿ ಈ ಕಾರ್ಡ ಅನ್ನು ಪಡೆಯಲು ಸಂಬಂಧಪಟ್ಟ ಇಲಾಖೆಯಿಂದ ಅವಕಾಶವನ್ನು ನೀಡಿದ್ದು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಒದಗಿಸಬೇಕು? ಇತ್ಯಾದಿ ಅಗತ್ಯ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

New Ration Card Eligibility-ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗೆಕ್ಕೆ ಸೇರಿದವರು ಮಾತ್ರ BPL Card ಪಡೆಯಲು ಅರ್ಜಿ ಸಲ್ಲಿಸಬಹುದು ಉಳಿದವರಿಗೆ APL Card ಅನ್ನು ಪಡೆಯಲು ಅವಕಾಶವಿರುತ್ತದೆ.
  • ನವದಂಪತಿಗಳು ಅಂದರೆ ಇತ್ತೀಚಿಗೆ ಮದುವೆಯಾಗಿ ಪಡಿತರ ಚೀಟಿಯನ್ನು ಹೊಂದಿಲ್ಲದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ತಮ್ಮ ಹೆಸರಿನಲ್ಲಿ ರೇಷನ್ ಕಾರ್ಡ್ಅನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.
  • ಸರ್ಕಾರಿ/ಸಾರ್ವಜನಿಕ ವಲಯದ ಉದ್ಯೋಗಿಗಳು, ವೈದ್ಯರು, ವಕೀಲರು, ಲೆಕ್ಕಪರಿಶೋಧಕರು BPL ಕಾರ್ಡ್‌ ಪಡೆಯಲು ಅರ್ಹರಿವುದಿಲ್ಲ.
  • ಅರ್ಜಿದಾರರು 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿದ್ದರೆ BPL ಕಾರ್ಡ್‌ಗೆ ಅರ್ಹರಲ್ಲ ಎಂದು ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

How To Apply For New Ration Card-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಹೊಸ ಪಡಿತರ ಚೀಟಿಯನ್ನು ಆಹಾರ ಇಲಾಖೆಯಿಂದ ಪಡೆಯಲು ಅರ್ಹ ನಾಗರಿಕರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹಳ್ಳಿ ವ್ಯಾಪ್ತಿಯ ಗ್ರಾಮ ಪಂಚಾಯತಿ, CSC Center,ಗ್ರಾಮ ಒನ್, ಅಥವಾ ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ration card

ಇದನ್ನೂ ಓದಿ: Horticulture Diploma-ಎರಡು ವರ್ಷದ ಬಾಗಲಕೋಟೆ ತೋಟಗಾರಿಕೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Required Documents For New Ration Card-ಹೊಸ ರೇಷನ್ ಕಾರ್ಡಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

ಪಡಿತರ ಚೀಟಿ/ರೇಷನ್ ಕಾರ್ಡ ಅನ್ನು ಪಡೆಯಲು ಅರ್ಹ ಕುಟುಂಬದ ಸದಸ್ಯರು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಅತ್ಯಗತ್ಯ.

  • ಅರ್ಜಿದಾರ ಸದಸ್ಯರ ಆಧಾರ್ ಕಾರ್ಡ್ ಪ್ರತಿ/Aadhar.
  • ವೋಟರ್ ಐಡಿ/Voter ID.
  • ಕುಟುಂಬದ ಆದಾಯ ಪ್ರಮಾಣ ಪತ್ರ/Income Certificate.
  • ವಿದ್ಯುತ್ ಬಿಲ್/ಗ್ಯಾಸ್ ಬಿಲ್ ಪ್ರತಿ/Gas Bill.
  • ಅರ್ಜಿದಾರರ ಫೋಟೋ/Photo.
  • ಮೊಬೈಲ್ ನಂಬರ್/Mobile Number.

ಇದನ್ನೂ ಓದಿ: Free Skill Training-ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

Online Ration Card Status-ಆನ್ಲೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ಚೆಕ್ ಮಾಡುವ ವಿಧಾನ:

ಅರ್ಹ ಅರ್ಜಿದಾರರು ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಿದ ಬಳಿಕ ಆಹಾರ ಇಲಾಖೆಯ ahara.kar.nic.in
ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ಲೈನನಲ್ಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

Step-1: ಪ್ರಥಮದಲ್ಲಿ Ration Card Application Status ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆಯ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

ration card website

ಇದನ್ನೂ ಓದಿ: Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Step-2: ಇದಾದ ಬಳಿಕ ಈ ಪುಟದಲ್ಲಿ "ಇ-ಸ್ಥಿತಿ/E-Status" ಬಟನ್ ಮೇಲೆ ಕ್ಲಿಕ್ ಮಾಡಿ "ಹೊಸ /ಹಾಲಿ ಪಡಿತರ ಚೀಟಿಯ ಸ್ಥಿತಿ/New/Existing RC Request Status" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆಯು ಯಾವ ವಿಭಾಗದಡಿ ಬರುತ್ತದೆ(ಬೆಂಗಳೂರು/ಮೈಸೂರು/ಕಲಬುರಗಿ) ಅದರ ಮೇಲೆ ಕ್ಲಿಕ್ ಒತ್ತಿ ಮುಂದಿನ ಪೇಜ್ ಗೆ ಭೇಟಿ ಮಾಡಬೇಕು.

Step-3: ತದನಂತರ ಈ ಪುಟದಲ್ಲಿ ಮೇಲೆ ಕಾಣುವ "Application Status of new Ration Card applied/ಹೊಸ ಪಡಿತರ ಚೀಟಿಗೆ ಸಲ್ಲಿಸಲಾದ ಅರ್ಜಿ ಯ ಸ್ಥಿತಿ" ಬಟನ್ ಮೇಲೆ ಕ್ಲಿಕ್ ಮಾಡಿ
"Enter Acknowledgment No/ ಹಿಂಬರಹ ಸಂಖ್ಯೆ ನಮೂದಿಸಿ" ಕಾಲಂ ನಲ್ಲಿ ನಿಮ್ಮ ಅರ್ಜಿಯ ಸಂಖ್ಯೆಯನ್ನು ಹಾಕಿ "Go" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ರೇಷನ್ ಕಾರ್ಡ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಮನೆಯಲ್ಲೇ ಕುಳಿತು ಯಾವುದೇ ಸರ್ಕಾರಿ ಕಚೇರಿಯನ್ನು ಭೇಟಿ ಮಾಡದೇ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: Scholarship-HDFC ಬ್ಯಾಂಕಿನಿಂದ Parivartan ಯೋಜನೆಯಡಿ ₹75,000 ವಿದ್ಯಾರ್ಥಿವೇತನ!

Ration Card Benefits-ರೇಷನ್ ಕಾರ್ಡನಿಂದ ಯಾವೆಲ್ಲ ಸೌಲಭ್ಯ ಪಡೆಯಬಹುದು?

ಅರ್ಹ ನಾಗರಿಕರು ಅರ್ಜಿಯನ್ನು ಸಲ್ಲಿಸಿ ಆಹಾರ ಇಲಾಖೆಯಿಂದ ರೇಷನ್ ಕಾರ್ಡ ಅನ್ನು ಪಡೆಯುವುದರ ಮೂಲಕ ಈ ಕೆಳಗಿನ ಪಟ್ಟಿಯಲ್ಲಿರುವ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

  • ರಾಜ್ಯ ಮತ್ತು ಕೇಂದ್ರ ಸರ್ಕಾರದ ಬಹುತೇಕ ಸಬ್ಸಿಡಿ ಯೋಜನೆಗಳ ಸೌಲಭ್ಯವನ್ನು ಪಡೆಯಲು ಪಡಿತರ ಚೀಟಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.
  • ಯಶಸ್ವಿನಿ ಕಾರ್ಡ ಪಡೆಯಲು ಸಹಕಾರಿಯಾಗಿದೆ.
  • BPL Card ಹೊಂದಿದವರಿಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಲಾದ ಅಕ್ಕಿ, ಗೋಧಿ, ರಾಗಿ ಸಕ್ಕರೆ ಇತ್ಯಾದಿ ಉತ್ಪನ್ನಗಳನ್ನು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯಬಹುದು
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು ಪಡೆಯಲು ಈ ಕಾರ್ಡ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ.
  • APL Card ಅನ್ನು ಸಾಧಾರಣ ದರದಲ್ಲಿ ಆಹಾರ ಧಾನ್ಯಗಳು ಮತ್ತು ಕೆಲವು ಸರ್ಕಾರಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ಗುರುತಿನ ಚೀಟಿಯ ರೀತಿ ಈ ದಾಖಲೆಯನ್ನು ಬಳಕೆ ಮಾಡಿಕೊಳ್ಳಬಹುದು.

For More Information-ಹೆಚ್ಚಿನ ಮಾಹಿತಿಗಾಗಿ:

Official website-ಅಧಿಕೃತ ವೆಬ್ಸೈಟ್- Click Here
Ration Card Helpline-ಸಹಾಯವಾಣಿ- 1800-425-9339

WhatsApp Group Join Now
Telegram Group Join Now
Share Now: