Education Scholarship-ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

July 20, 2025 | Siddesh
Education Scholarship-ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!
Share Now:

ಶ್ರ‍ೀ ಮಾರಿಕಾಂಬಾ ದೇವಸ್ಥಾನ ಶಿರಸಿದಿಂದ(Marikamba Temple Sirsi) SSCL,PUC,ಪದವಿ,ಡಿಪ್ಲೋಮಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ತಿಳಿಸಲಾಗಿದೆ.

ಪ್ರತಿ ವರ್ಷದಂತೆ ಶ್ರ‍ೀ ಮಾರಿಕಾಂಬಾ ದೇವಸ್ಥಾನದ ವತಿಯಿಂದ ವಿವಿಧ ತರಗತಿಗಳನ್ನು(SSCL PUC Students) ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನವನ್ನು ನೀಡಲು ಶೈಕ್ಷಣಿಕ ಸಹಾಯಧನವನ್ನು ವಿತರಣೆ ಮಾಡಲು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಲು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

ಪ್ರಸ್ತುತ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು(Scholarship) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇನ್ನಿತರೆ ಪೂರಕವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸಲು ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

Marikamba Temple Scholarship Application-ಶ್ರ‍ೀ ಮಾರಿಕಾಂಬಾ ದೇವಸ್ಥಾನದಿಂದ ಶೈಕ್ಷಣಿಕ ಸಹಾಯಕ್ಕೆ ಅರ್ಜಿ:

ಶ್ರ‍ೀ ಮಾರಿಕಾಂಬಾ ದೇವಸ್ಥಾನದಿಂದ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ನೆರವನ್ನು ಹಲವು ವರ್ಷಗಳಿಂದ ಒದಗಿಸಿಕೊಂಡು ಬರುತ್ತಿದ್ದು ಈ ನಿಟ್ಟಿನಲ್ಲಿ 2025 ನೇ ವರ್ಷವು ಸಹ ವಿವಿಧ ತರಗತಿಗಳಲ್ಲಿ ಶೇ 70% ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಆರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Marikamba Temple Scholarship-ಯಾವೆಲ್ಲ ತರಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?

ಪ್ರಸ್ತುತ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ವಿದ್ಯಾರ್ಥಿವೇತನವನ್ನು ಪಡೆಯಲು ಎಸ್ ಎಸ್ ಎಲ್ ಸಿ/SSLC, ಪಿಯುಸಿ/PUC, ಡಿಪ್ಲೋಮಾ/Diploma, ಇಂಜಿನಿಯರಿಂಗ್Engineering, ವೈದ್ಯಕೀಯ/MBBS, ಪದವಿ, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Scholarship Application Important Dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ15 ಜುಲೈ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31 ಜುಲೈ 2025
ಅರ್ಜಿ ಸಲ್ಲಿಸಲು ಲಿಂಕ್Apply Now

ಇದನ್ನೂ ಓದಿ: New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

Marikamba Temple Sirsi scholarship

Scholarship Eligibility-ಸ್ಕಾಲರ್ಶಿಪ್ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶ್ರ‍ೀ ಮಾರಿಕಾಂಬಾ ದೇವಸ್ಥಾನದ ವತಿಯಿಂದ ಪ್ರಸ್ತುತ ವಿದ್ಯಾರ್ಥಿವೇತನವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತೆಯನ್ನು ಹೊಂದಿವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿದಾರ ವಿದ್ಯಾರ್ಥಿಯು ಉತ್ತರಕನ್ನಡ ಜಿಲ್ಲೆಯವರಾಗಿರಬೇಕು.
ಬಿಪಿಎಲ್ ರೇಷನ್ ಕಾರ್ಡ ಅನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಶೇ 70% ಕ್ಕಿಂತ ಹೆಚ್ಚಿನ ಅಂಕವನ್ನು ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

Online Scholarship Application-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಕೆಳಗೆ ವಿವರಿಸುವ ಹಂತಗಳನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಸ್ವಂತ ತಾವೇ ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮ ಹಂತದಲ್ಲಿ ಇಲ್ಲಿ ಕ್ಲಿಕ್ Online Scholarship Application ಮಾಡಿ ಅಧಿಕೃತ ವಿದ್ಯಾರ್ಥಿವೇತನದ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Scholarship Application

Step-2: ಇಲ್ಲಿ ಮುಖಪುತದಲ್ಲಿ ಮೇಲೆ ಕಾಣುವ "Click here to Apply -ಶೈಕ್ಷಣಿಕ ಸಹಾಯದ ಅರ್ಜಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ವಿದ್ಯಾರ್ಥಿವೇತನದ ಅರ್ಜಿ ನಮೂನೆ ತೆರೆದುಕೊಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "SEND NOW" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Required Documents-ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ಅವಶ್ಯಕ ದಾಖಲೆಗಳು:

  • ವಿದ್ಯಾರ್ಥಿಯ ಪೋಟೋ
  • ವಿದ್ಯಾರ್ಥಿಯ ಅಂಕಪಟ್ಟಿ
  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ಬಿಪಿಎಲ್ ಕಾರ್ಡ
  • ವಿದ್ಯಾರ್ಥಿಯ ಶಾಲಾ ಶುಲ್ಕ ಪಾವತಿ ರಶೀದಿ

For More Information-ಹೆಚ್ಚಿನ ಮಾಹಿತಿ ಪಡೆಯಲು:

Helpline-ಸಹಾಯವಾಣಿ:- +91 83842 26360
Office Address-ಕಚೇರಿ ವಿಳಾಸ:- Sirsi-Banavasi Road, Sirsi - 581401
E-mail-ಇ-ಮೇಲ್:- [email protected]

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: