Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 21, 2025 | Siddesh
Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!
Share Now:

ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಐಎಎಸ್ ಬಾಬಾ ಬೆಂಗಳೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ(Free Coaching) ಸಂಸ್ಥೆ ಇವರುಗಳ ಸಹಭಾಗಿತ್ವದಲ್ಲಿ ಮೊದಲ ಹಂತದಲ್ಲಿ 300 ಅಭ್ಯರ್ಥಿಗಳಿಗೆ ಉಚಿತವಾಗಿ IAS,KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆಯನ್ನು ನಡೆಸಲು ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇಂದಿನ ದಿನಗಳಲ್ಲಿ ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುವ ಮುನ್ನ ಪೂರ್ವ ಸಿದ್ದತಾ ತರಬೇತಿ(Free Coaching Competitive Exams)ಮತ್ತು ಪರೀಕ್ಷೆಗಳನ್ನು ಬರೆಯುವುದು ಅತ್ಯಗತ್ಯವಾಗಿದ್ದು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ದುಬಾರಿ ಶುಲ್ಕವನ್ನು ಪಾವತಿ ಮಾಡಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯನ್ನು ಪಡೆಯುವುದು ಕಷ್ಟಕರವಾಗುತ್ತದೆ ಇಂತಹ ವಿದ್ಯಾರ್ಥಿಗಳಿಗೆ ನೆರವು ನೀಡಲು ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಐಎಎಸ್ ಬಾಬಾ ಬೆಂಗಳೂರು ಇವರುಗಳ ಸಹಭಾಗಿತ್ವದಲ್ಲಿ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವನ್ನು ಆರಂಭಿಸಿದೆ.

ಇದನ್ನೂ ಓದಿ: Education Scholarship-ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

ಸಂಕಲ್ಪ ಎನ್ನುವ ಹೆಸರಿನಲ್ಲಿ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ(Competitive Exams Free Coaching) ಕೇಂದ್ರವನ್ನು ಪ್ರಾರಂಭಿಸಿದ್ದು ಉಚಿತವಾಗಿ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇನ್ನಿತರೆ ಅಗತ್ಯ ಮಾಹಿತಿಯನ್ನು ಪ್ರಸ್ತುತ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ಉಚಿತ ತರಬೇತಿ ಅವಶ್ಯಕವಿರುವ ಅಭ್ಯರ್ಥಿಗಳಿಗೆ ಈ ಮಾಹಿತಿಯನ್ನು ತಲುಪಿಸಲು ತಪ್ಪದೇ ನಿಮ್ಮ ಮೊಬೈಲ್ ನಲ್ಲಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಯು ಪದವಿಯನ್ನು ಪಾಸಾಗಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಮೊದಲ ಆಧ್ಯತೆ ಇರುತ್ತದೆ.

ಇದನ್ನೂ ಓದಿ: Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Competitive Exams

Last Date For Application-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಕೆ ಪ್ರಾರಂಭ- 18 ಜುಲೈ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 24 ಜುಲೈ 2025

IAS, KAS Free Coaching-ಉಚಿತ ಸೌಲಭ್ಯ:

ಆಯ್ಕೆಯಾದ ಅಭ್ಯರ್ಥಿಗಳಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ, ದೃಶ್ಯಕಲಾ ಮಹಾವಿದ್ಯಾಲಯದ ಆರ್ಟ್ ಗ್ಯಾಲರಿ ಕಟ್ಟಡದಲ್ಲಿ ಸುಸಜ್ಜಿತ ತರಗತಿಗಳು, ಆಧುನಿಕ ಗ್ರಂಥಾಲಯ ಮತ್ತು ಎಲ್ಲಾ ಮೂಲಸೌಕರ್ಯಗಳೊಂದಿಗೆ ಈ ಕೇಂದ್ರವನ್ನು ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

300 ವಿದ್ಯಾರ್ಥಿಗಳಿಗೆ ಅವಕಾಶ:

ಪ್ರಸ್ತುತ ಪ್ರಥಮ ಹಂತದಲ್ಲಿ 300 ಅಭ್ಯರ್ಥಿಗಳಿಗೆ IAS,KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆಯನ್ನು ನಡೆಸಲು ಉಚಿತ ತರಬೇತಿಯನ್ನು ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

How To Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಉಚಿತ ಸ್ಪರ್ಧಾತ್ಮಕ ತರಬೇತಿಯನ್ನು ಪಡೆಯಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿಗೆ Apply Now ಇಲ್ಲಿ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಲು ಗೂಗಲ್ ಪಾರ್ಮ್ ಅನ್ನು ಒಪನ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

Free Coaching Center

Step-2: ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಉಚಿತ ಸ್ಪರ್ಧಾತ್ಮಕ ತರಬೇತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ವಾಟ್ಸಾಪ್ ಚಾನಲ್ ಲಿಂಕ್-Join Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: