Lalbagh Flower Show-ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ! ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿ!

August 7, 2025 | Siddesh
Lalbagh Flower Show-ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ! ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿ!
Share Now:

ಬೆಂಗಳೂರಿನಲ್ಲಿ ನಾಳೆಯಿಂದ ಅಂದರೆ 07 ಆಗಸ್ಟ್‌ 2025 ರಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ(Lalbagh Flower Show) ನಡೆಯಲಿದ್ದು ಫಲಪುಷ್ಪದಲ್ಲಿ ಭಾಗವಹಿಸಲು ಸಾರ್ವಜನಿಕರು ಮುಂಚಿತವಾಗಿ ಟಿಕೆಟ್ ಬುಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ.

ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ(Lalbagh Flower Show Bengalore) ಆಗಸ್ಟ್‌ 7 ರಿಂದ 18ರ ವರೆಗೆ ನಡೆಯಲಿದೆ. ಈ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.

ಇದನ್ನೂ ಓದಿ: Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

ಇಂದಿನ ಈ ಅಂಕನದಲ್ಲಿ ಸಾರ್ವಜನಿಕರು ಲಾಲ್ ಬಾಗ್ ಫಲಪುಷ್ಪ ಭಾಗವಹಿಸಲು ಮುಂಚಿತವಾಗಿ ಟಿಕೆಟ್ ಬುಕ್(Lalbagh Flower Show Online Ticket Booking) ಮಾಡಿಕೊಳ್ಳು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು?ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ದಿನಾಂಕ,ಪ್ರದರ್ಶನದ ಸಮಯ,ಪ್ರವೇಶ ಶುಲ್ಕ,ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿಕೊಳ್ಳುವ ವಿಧಾನ ಹೇಗೆ ಎನ್ನುವುದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Lalbagh Flower Show Date 2025-ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ದಿನಾಂಕ:

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವು ದಿನಾಂಕ: 07 August 2025 ರಿಂದ 18 August 2025 ರವರೆಗೆ ನಡೆಯಲಿದ್ದು ಒಟ್ಟು 12 ದಿನ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Lalbagh Flower Show Timing-ಪ್ರದರ್ಶನದ ಸಮಯ:

ಲಾಲ್ ಬಾಗ್ ನಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನವು ಬೆಳಗ್ಗೆ 6-00 ರಿಂದ ಸಂಜೆ 7-00ರ ವರೆಗೆ ತೆರೆದಿರುತ್ತದೆ.

Lalbagh Flower Show Ticket Price-ಪ್ರವೇಶ ಶುಲ್ಕ ಹೀಗಿದೆ:

ಲಾಲ್ ಬಾಗ್ ನಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಲು ಆಸಕ್ತಿಯನ್ನು ಹೊಂದಿರುವವರು ಟಿಕೆಟ್ ಅನ್ನು ಪಡೆಯಲು ಸಂಬಂಧಪಟ್ಟ ಇಲಾಖೆಯಿಂದ ನಿಗದಿಪಡಿಸಿರುವ ಟಿಕೆಟ್ ಶುಲ್ಕದ ವಿವರ ಹೀಗಿದೆ:

  • ವಯಸ್ಕರಿಗೆ- ₹80 ರೂ
  • ರಜಾ ದಿನಗಳಲ್ಲಿ- ₹100 ರೂ
  • ಮಕ್ಕಳಿಗೆ- ₹30 ರೂ
  • ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿರುತ್ತದೆ.

ಇದನ್ನೂ ಓದಿ: SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

Lalbagh Flower Show

ಇದನ್ನೂ ಓದಿ: Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

Lalbagh Flower Show Bengalore-10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ:

ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Lalbagh Flower Show Online Ticket Booking-ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಲು ಅವಕಾಶ:

ಲಾಲ್ ಬಾಗ್ ನಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಮನೆಯಲ್ಲೇ ಕುಳಿತು ಮುಂಚಿತವಾಗಿ ತಮ್ಮ ಮೊಬೈಲ್ ಮೂಲಕ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಟಿಕೆಟ್ ಅನ್ನು ಬುಕ್ ಮಾಡಲು ಅವಕಾಶ ನೀಡಲಾಗಿದೆ.

Step-1: ಮೊಟ್ಟ ಮೊದಲಿಗೆ ಇಲ್ಲಿ ಕ್ಲಿಕ್ "Book Ticket" ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ.

ಇದನ್ನೂ ಓದಿ: Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Lalbagh Flower Show Date

Step-2: ಬಳಿಕ "Click Here to Book Tickets" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಮತ್ತು ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ "Send OTP" ಬಟನ್ ಮೇಲೆ ಕ್ಲಿಕ್ ಮಾಡಿ 6 ಅಂಕಿಯ OTP ಅನ್ನು ನಮೂದಿಸಿ Login ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ ಅಧಿಕೃತ ಟಿಕೆಟ್ ಬುಕಿಂಗ್ ಪೇಜ್ ತೆರೆದುಕೊಳ್ಳುತ್ತದೆ ಇಲ್ಲಿ "Book Ticket" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ನಿಗದಿತ ಶುಲ್ಕವನ್ನು ಪಾವತಿ ಮಾಡಿ ಟಿಕೆಟ್ ಬುಕ್ ಮಾಡಬೇಕು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: