BMRCL Recruitment 2024: ನಮ್ಮ ಮೆಟ್ರೋ ನೇಮಕಾತಿ!ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ವೇತನ ₹62,500

ಬೆಂಗಳೂರಿನ ಮೆಟ್ರೋ ರೈಲು ನಿಗಮವು ವಿವಿಧ ಹುದ್ದೆಗಳಿಗೆ ನೇಮಕಾತಿ( Bengaluru Metro rail Corporation Limited) ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅಭ್ಯರ್ಥಿಗಳು ಅರ್ಹತೆಗಳನ್ನು ತೆಗೆದುಕೊಂಡು ಈಗಲೇ ಅರ್ಜಿ ಸಲ್ಲಿಸಿ.

BMRCL Recruitment 2024: ನಮ್ಮ ಮೆಟ್ರೋ ನೇಮಕಾತಿ!ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ವೇತನ ₹62,500
BMRCL Recruitment-2024

ಬೆಂಗಳೂರಿನ ಮೆಟ್ರೋ ರೈಲು ನಿಗಮವು ವಿವಿಧ ಹುದ್ದೆಗಳಿಗೆ ನೇಮಕಾತಿ( Bengaluru Metro rail Corporation Limited) ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅಭ್ಯರ್ಥಿಗಳು ಅರ್ಹತೆಗಳನ್ನು ತೆಗೆದುಕೊಂಡು ಈಗಲೇ ಅರ್ಜಿ ಸಲ್ಲಿಸಿ.

ಬೆಂಗಳೂರಿನ ಮೆಟ್ರೋ ರೈಲು ನಿಗಮ ನಿಯಮಿತವು ಖಾಲಿ ಇರುವ ವಿವಿಧ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ಸಂಪೂರ್ಣ ಅರ್ಹತೆಗಳು, ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ ಶ್ರೇಣಿ ಹಾಗೂ ಇನ್ನಿತರ ಉಪಯುಕ್ತ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಹಾಗೂ ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಿರುವಂತಹ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!

ನೇಮಕಾತಿಯ ಸಂಕ್ಷಿಪ್ತ ವಿವರ : BMRCL Recruitment 2024

• ನೇಮಕಾತಿ ಇಲಾಖೆ : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ 
• ಹುದ್ದೆಗಳು : ಇಂಜಿನಿಯರ್ ಮತ್ತು ಸಹಾಯಕ ವ್ಯವಸ್ಥಾಪಕರು 
• ಹುದ್ದೆಗಳ ಸಂಖ್ಯೆ : 07 ಹುದ್ದೆಗಳು 

ಹುದ್ದೆಗಳ ಹೆಸರು ಮತ್ತು ಸಂಖ್ಯೆ : 

ಬೆಂಗಳೂರು ಮೆಟ್ಟೋ ರೈಲು ನಿಗಮ ನಿಯಮಿತದಲ್ಲಿ ಒಟ್ಟು ಏಳು ಹುದ್ದೆಗಳು ಖಾಲಿ ಇದ್ದು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ.
1. Executive Engineer (Civil) - 1
2. Assistant Engineer (Civil) - 4
3. Assistant Engineer (E&M) - 1
4. Assistant Manager (Marketing) - 1

ಇದನ್ನೂ ಓದಿ: fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!

ಶೈಕ್ಷಣಿಕ ವಿದ್ಯಾರ್ಹತೆ ವಿವರ : Educational Qualification 

ವಿವಿಧ ವಿಭಾಗಗಳ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ B. E ಪದವಿ ಮುಗಿಸಿರಬೇಕು. 

ವಯೋಮಿತಿ: 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 45 ವರ್ಷಕ್ಕೆ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಇರಲಿದೆ. 

ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ : ₹62,500/- ರಿಂದ ₹1,06,250/- ರವರೆಗೆ.

ಆಯ್ಕೆ ಮಾಡಿಕೊಳ್ಳಲು ವಿಧಾನ : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವುದರ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: SBI Bank Recruitment-2024: SBI ಬ್ಯಾಂಕ್ ನಿಂದ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ! ವೇತನ ₹69,810!

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು : 

• ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ ದಿನಾಂಕ : 05 ಜೂನ್ 2024
• ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಳ್ಳುವ ದಿನಾಂಕ : 02 ಜುಲೈ 2024

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು : 

• ಅರ್ಜಿ ಸಲ್ಲಿಸುವ ಲಿಂಕ್ : Click here

• ಅಧಿಸೂಚನೆ : ವೀಕ್ಷಿಸಿ