BNPM Job- ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ನಿಗಮದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ!

ಭಾರತ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಡಿಯಲ್ಲಿ ಬ್ಯಾಂಕ್ ನೋಟ್ ಮುದ್ರಣದ ಕಾರ್ಯನಿರ್ವಹಿಸುತ್ತಿರುವಂತಹ "ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್" ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ(BNPM Job notification-2024) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

BNPM Job- ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ನಿಗಮದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ!
BNPM Job notification-2024

ಭಾರತ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಡಿಯಲ್ಲಿ ಬ್ಯಾಂಕ್ ನೋಟ್ ಮುದ್ರಣದ ಕಾರ್ಯನಿರ್ವಹಿಸುತ್ತಿರುವಂತಹ "ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್" ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ(BNPM Job notification-2024) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತ ಅರ್ಹತೆಗಳೇನು? ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರ ಸೇರಿದಂತೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ಉದ್ಯೋಗವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಇದರ ಸದಪಯೋಗಪಡಿಸಿಕೊಳ್ಳಿ.

ಇದನ್ನೂ ಓದಿ: Crop insurance guideline-2024ರ ಮುಂಗಾರು ಬೆಳೆ ವಿಮೆ ಯೋಜನೆಯ ಅಧಿಕೃತ ಮಾರ್ಗಸೂಚಿ ಬಿಡುಗಡೆ!

BNPM Job notification-2024: ನೇಮಕಾತಿ ಸಂಕ್ಷಿಪ್ತ ವಿವರ : 

• ನೇಮಕಾತಿ ನಿಗಮ : ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್
• ಖಾಲಿ ಹುದ್ದೆಗಳ ಸಂಖ್ಯೆ : 39 ಹುದ್ದೆಗಳು 
• ಅರ್ಜಿ ಸಲ್ಲಿಕೆ : ಆನ್ಲೈನ್ ಮೂಲಕ.

ಹುದ್ದೆಗಳ ಮಾಹಿತಿ : Vacancy Details 

ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಒಂದು ನೇಮಕಾತಿಯಲ್ಲಿ ಕಚೇರಿ ಸಹಾಯಕ, ಖಾತೆ ಸಹಾಯಕ ಮತ್ತು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರೊಸೆಸ್ ಸಹಾಯಕ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ.

ಇದನ್ನೂ ಓದಿ: Karnataka Weather forecast-2024: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ!

ಶೈಕ್ಷಣಿಕ ಅರ್ಹತೆಗಳು - Educational Qualification 

ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ ಮತ್ತು ವಿಶ್ವವಿದ್ಯಾಲಯದಿಂದ ಐಟಿಐ,ಡಿಪ್ಲೋಮಾ ಅಥವಾ ಪದವಿ ಮುಗಿಸಿರುವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಯೋಮಿತಿ ಮಾನದಂಡ ಮತ್ತು ವಯೋ ಸಡಿಲಿಕೆ - Age limit and Age Relaxation 

ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 28 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಅನ್ವಯವಾಗಲಿದೆ. 

ಆಯ್ಕೆ ಆದವರಿಗೆ ಸಿಗುವ ಮಾಸಿಕ ವೇತನ ಶ್ರೇಣಿ Pay Scale : ₹24,500/- ಹಾಗೂ ಇತರೆ ಸೌಲಭ್ಯಗಳು ಲಭ್ಯವಿರಲಿವೆ.

ಇದನ್ನೂ ಓದಿ: SSLC ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ : MTS, Clerks ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ!

ಅರ್ಜಿ ಶುಲ್ಕ - Application fee 

• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು : ₹200/-
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು : ₹600/-

ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಮುಖ ದಿನಾಂಕಗಳು : 

• ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 05 ಜೂನ್ 2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಜೂನ್ 2024

 ನೇಮಕಾತಿಗೆ ಅವಶ್ಯಕವಿರುವ ಲಿಂಕ್ ಗಳು : 

• ಅರ್ಜಿ ಸಲ್ಲಿಕೆ ಲಿಂಕ್ : Click here
• ಅಧಿಸೂಚನೆ : ಡೌನ್ಲೋಡ್