Karnataka Apex Bank Recruitment 2024- ಅಪೇಕ್ಸ್ ಬ್ಯಾಂಕ್ ನೇಮಕಾತಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶ!

ಪಿಯುಸಿ ಪಾಸ್ ಆಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಕರ್ನಾಟಕ ಅಪೇಕ್ಸ್ ಬ್ಯಾಂಕ್(Apex Bank Recruitment 2024) ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.

Karnataka Apex Bank Recruitment 2024- ಅಪೇಕ್ಸ್ ಬ್ಯಾಂಕ್ ನೇಮಕಾತಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶ!
Karnataka Apex Bank Recruitment

ಪಿಯುಸಿ ಪಾಸ್ ಆಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಕರ್ನಾಟಕ ಅಪೇಕ್ಸ್ ಬ್ಯಾಂಕ್(Apex Bank Recruitment 2024) ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.

Karnataka Apex Bank Recruitment 2024 : ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರಿನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Public exam-2024: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಕರಣ ತೆರೆ ಎಳೆದ ಹೈಕೋರ್ಟ್!

Karnataka Apex Bank Recruitment- ನೇಮಕಾತಿ ವಿವರ 

 ಹುದ್ದೆಗಳ ಹೆಸರು: ಬ್ಯಾಂಕ್ ಸಹಾಯಕರು
 ಒಟ್ಟು ಖಾಲಿ ಹುದ್ದೆಗಳು: 93
 ವೇತನ ಶ್ರೇಣಿ: 28,425/- ರಿಂದ 87,125/- ರವರೆಗೆ

ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ : ಕರ್ನಾಟಕ ರಾಜ್ಯ ಅಪೇಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರಿನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪದವಿಯಲ್ಲಿ ಶೇಕಡ 55 ರಷ್ಟು ಅಂಕಗಳೊಂದಿಗೆ ಪಾಸ್ ಆಗಿರುವುದು ಕಡ್ಡಾಯ ಹಾಗೂ SC / ST, ಅಂಗವಿಕಲ ವರ್ಗದ ಅಭ್ಯರ್ಥಿಗಳು ಪದವಿಯಲ್ಲಿ ಶೇಕಡ 50ರಷ್ಟ ಅಂಕಗಳೊಂದಿಗೆ ಪಾಸಾಗಿರಬೇಕು.

ಇದನ್ನೂ ಓದಿ: Intelligence Bureau Recruitement 2024- ಗುಪ್ತಚರ ಇಲಾಖೆಯಲ್ಲಿ SSLC ಪಾಸಾದವರಿಗೂ ಭರ್ಜರಿ ಅವಕಾಶ! ಒಟ್ಟು 660 ಹುದ್ದೆಗಳಿಗೆ ನೇಮಕಾತಿ.

Apex Bank Job Notification- ಅರ್ಜಿ ಸಲ್ಲಿಸಲು ವಯೋಮಿತಿ : 

 ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರಿನ, ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ನಿಗದಿಪಡಿಸಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಮಿತಿ 40 ವರ್ಷವನ್ನು ನಿಗದಿಪಡಿಸಲಾಗಿದೆ.

How to apply?- ಅರ್ಜಿ ಸಲ್ಲಿಸುವ ವಿಧಾನ: 

ಕರ್ನಾಟಕ ಅಪೇಕ್ಸ್ ಬ್ಯಾಂಕಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಸಂಸ್ಥೆಯು ನಿಗದಿಪಡಿಸಲಾಗಿರುವ ದಿನಾಂಕದಂದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕನ್ನು ನಮ್ಮ ಈ ಕೆಳಗಿನ ಲೇಖನದ ಭಾಗದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Free mushroom training- ಉಚಿತ ಅಣಬೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಪ್ರಮುಖ ದಿನಾಂಕಗಳು:

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 07 ಮಾರ್ಚ್ 2024 
ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ : 06 ಏಪ್ರಿಲ್ 2024,
ಶುಲ್ಕ ಪಾವತಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ ಸಾಯಂಕಾಲ : 06 ಏಪ್ರಿಲ್ 2024, 5:30 ಗಂಟೆ ಒಳಗೆ.

Application fee- ಅರ್ಜಿ ಶುಲ್ಕ :

ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು : 1000/-

SC / ST ಮತ್ತು ಪ್ರವರ್ಗ 1 ವರ್ಗದ ಅಭ್ಯರ್ಥಿಗಳು - 500/-

ಪ್ರಮುಖ ಲಿಂಕ್ ಗಳು:

ಅರ್ಜಿ ಸಲ್ಲಿಸಲು ಲಿಂಕ್:  Apply Now
ಅಧಿಕೃತ ಅಧಿಸೂಚನೆ: Download Now

ಇದನ್ನೂ ಓದಿ: IPPB Recruitment 2024: ಅಂಚೆ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ!