Bengalore weather-ರಾಜ್ಯದ ಮಳೆ ಮುನ್ಸೂಚನೆ! ಇಲ್ಲಿದೆ ಹಿಂಗಾರು ಮಳೆ ಮಾಹಿತಿ.

Bengalore weather update: ಕರ್ನಾಟಕ ಮಳೆ ಮಾಹಿತಿ ನಕ್ಷೆಯ ಪ್ರಕಾರ ಕಳೆದ ಎರಡು-ಮೂರು ದಿನದಿಂದ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಲಲ್ಲಿ ಉತ್ತಮ ಮಳೆಯಾಗುತ್ತಿದ್ದು ನಿನ್ನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಂಪುರ ವ್ಯಾಪ್ತಿಯಲ್ಲಿ ಅತ್ಯಧಿಕ 68.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

Bengalore weather-ರಾಜ್ಯದ ಮಳೆ ಮುನ್ಸೂಚನೆ! ಇಲ್ಲಿದೆ ಹಿಂಗಾರು ಮಳೆ ಮಾಹಿತಿ.
Karnataka weather 2023

ಕರ್ನಾಟಕ ಮಳೆ ಮಾಹಿತಿ ನಕ್ಷೆಯ ಪ್ರಕಾರ ಕಳೆದ ಎರಡು-ಮೂರು ದಿನದಿಂದ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಲಲ್ಲಿ ಉತ್ತಮ ಮಳೆಯಾಗುತ್ತಿದ್ದು ನಿನ್ನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಂಪುರ ವ್ಯಾಪ್ತಿಯಲ್ಲಿ ಅತ್ಯಧಿಕ 68.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

ಉಳಿದಂತೆ ಬೀದರ್, ವಿಜಾಪುರ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಧ್ಯಮದಿಂದ ಉತ್ತಮ ಮಳೆ ದಾಖಲಾಗಿರುತ್ತದೆ.

ಇದನ್ನೂ ಓದಿ: Nigamada Yojane-ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ ಸೇರಿ ಇತರೆ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ನಾಳೆ ಬೆಳಿಗ್ಗೆ(01-12-2023)  8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ವಿವರ:

ಮಳೆ ಮುನ್ಸೂಚನೆ ನಕ್ಷೆಯನ್ವಯ ರಾಜ್ಯದಾದ್ಯಂತ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಘಟ್ಟದ ಕೆಳಗಿನ ತಪ್ಪಲು ತಾಲೂಕುಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇರುತ್ತದೆ. ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಕೊಡಗು ಅಲ್ಲಲ್ಲಿ,  ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉಳಿದಂತೆ ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಹಾಸನ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇರುತ್ತದೆ.

ಇದನ್ನೂ ಓದಿ: Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒಂದೆರಡು ಕಡೆ ಹಾಗೂ ಬೆಳಗಾವಿ - ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ  ಮಳೆಯ ಮುನ್ಸೂಚನೆ ಇರುತ್ತದೆ.

ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಇದನ್ನೂ ಓದಿ: Ujjwala Yojana-2023: ಉಜ್ವಲ ಯೋಜನೆಯಡಿ ಗ್ಯಾಸ್ ಸಬ್ಸಿಡಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Next 8 days bengalore weather- ಮುಂದಿನ ಒಂದು ವಾರದ ಮಳೆ ಮುನ್ಸೂಚನೆ:

ಇದನ್ನೂ ಓದಿ: PM Kisan Scheme: ನಿಮ್ಮ ಪಿಎಂ ಕಿಸಾನ್ ಯೋಜನೆ ಜಾಲ್ತಿಯಲ್ಲಿ ಇದೆಯೇ Or ರದ್ದಾಗಿದೆಯೇ ಪರೀಕ್ಷಿಸಿಕೊಳ್ಳಿ

ಈ ಮೇಲಿನ ಒಂದು ವಾರದ ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯಲ್ಲಿ ಸೂಚಿಸಿರುವ ಮುನ್ಸೂಚನೆಯ ಪ್ರಕಾರ ದಿನಾಂಕ 30-11-2023 ರಿಂದ 08-12-2023 ರವರೆಗೆ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು,

30 ನವೆಂಬರ್ ಮತ್ತು 01 ಡಿಸೆಂಬರ್ ರಂದು ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ.

02 ಮತ್ತು 03 ಡಿಸೆಂಬರ್ ರಂದು ಬೆಂಗಳೂರು,ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮೋಡ ಮತ್ತು ಒಣ ಹವೆ ಮುನ್ಸೂಚನೆ ನೀಡಲಾಗಿದೆ.

04, 05, 06 ಡಿಸೆಂಬರ್ ರಂದು ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. 
02 ಮತ್ತು 03 ಡಿಸೆಂಬರ್ ರಂದು ಮೋಡ ಮತ್ತು ಒಣ ಹವೆ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: New ration card-ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ!

Karnataka weather update-ಹಿಂಗಾರು ಮಳೆ ಮಾಹಿತಿ ಹೀಗಿದೆ:

ಡಿಸೆಂಬರ್ 2ರ ನಂತರ ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ಚಂಡಮಾರುತವು ಡಿಸೆಂಬರ್ 5 ಅಥವಾ 6ರಂದು ಉತ್ತರ ಆಂದ್ರಾ ಹಾಗೂ ಒಡಿಶಾದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.