CBSE Recruitment 2024- PUC ಪಾಸಾದ ಅಭ್ಯರ್ಥಿಗಳಿಗೆ ಕಿರಿಯ ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ |

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್,(CBSE job notification-2024) ಕೇಂದ್ರ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ 118 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

CBSE Recruitment 2024- PUC ಪಾಸಾದ ಅಭ್ಯರ್ಥಿಗಳಿಗೆ ಕಿರಿಯ ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ |
CBSE Recruitment notification-2024

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್,(CBSE job notification-2024) ಕೇಂದ್ರ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ 118 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಕಿರಿಯ ಲೆಕ್ಕಿಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು(CBSE Recruitment) ಸೇರಿ ಒಟ್ಟು 118 ಹುದ್ದೆಗಳು ಖಾಲಿ ಇದ್ದು, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯ ವಿವರ ಈ ಕೆಳಗಿನ ಅಂಕಣದಲ್ಲಿದೆ.

ಇದನ್ನೂ ಓದಿ:  How to get a solar pump set subsidy-2024: ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು?

ಖಾಲಿ ಹುದ್ದೆಗಳ ವಿವರ - ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಗ್ರೂಪ್‌ ಎ, ಬಿ, ಸಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಖಾಲಿ ಇರುವ ಹುದ್ದೆಗಳ ವಿವರ ಹೀಗಿದೆ:

• ಅಸಿಸ್ಟೆಂಟ್ ಸೆಕ್ರೆಟರಿ- 64 ಹುದ್ದೆಗಳು
• ಅಕೌಂಟ್ಸ್ ಆಫೀಸರ್- 3 ಹುದ್ದೆಗಳು
• ಜೂನಿಯರ್ ಎಂಜಿನಿಯರ್- 17 ಹುದ್ದೆಗಳು
• ಜೂನಿಯರ್ ಟ್ರಾನ್ಸ್​ಲೇಶನ್ ಆಫೀಸರ್ - 7 ಹುದ್ದೆಗಳು
• ಅಕೌಂಟೆಂಟ್​-7 ಹುದ್ದೆಗಳು
• ಜೂನಿಯರ್ ಅಕೌಂಟೆಂಟ್​ - 20 ಹುದ್ದೆಗಳು

ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳು : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 118 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅನುಸಾರವಾಗಿ PUC ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. 

ಇದನ್ನೂ ಓದಿ: Free hostel admission-2024: ಉಚಿತ ವಿದ್ಯಾರ್ಥಿ ನಿಲಯ ಮತ್ತು ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ನಮೂನೆ.
 
Job location- ಉದ್ಯೋಗದ ಸ್ಥಳ: 

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತ ದೇಶದ ಯಾವುದೇ ರಾಜ್ಯದಲ್ಲಿ ಬೇಕಾದರೂ ನೇಮಕಾತಿಗೆ ಆಯೋಜಿಸಲಾಗುವುದು.   

Application fee- ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ:

ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಡಾಕ್ಯುಮೆಂಟ್‌ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
• ಎಸ್‌ಸಿ, ಎಸ್‌ಟಿ, ಅಂಗವಿಕಲ ಅಭ್ಯರ್ಥಿಗಳು, ಮಾಜಿ ಸೈನಿಕರು, ಮಹಿಳಾ ಅಭ್ಯರ್ಥಿಗಳು ಹಾಗೂ ಸಿಬಿಎಸ್‌ಇ ಉದ್ಯೋಗಿಗಳಿಗೆ ಪ್ರತಿ ಸಲ್ಲಿಸಲು ಅರ್ಜಿ ಶುಲ್ಕವಿರುವುದಿಲ್ಲ. 
• ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು
 - ಗ್ರೂಪ್ A ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು - 1500/-
 - ಗ್ರೂಪ್ B ಹಾಗೂ C ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು - 800/- 

ಇದನ್ನೂ ಓದಿ: Fast food business- ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

 Age limit- ವಯೋಮಿತಿ ಮಾನದಂಡ:

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಟ 35 ವರ್ಷದ ಒಳಗಿರಬೇಕು. 

ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರ: 

• ಅರ್ಜಿ ಸಲ್ಲಿಕೆ ಆರಂಭವಾಗಿದ್ದು : ಮಾರ್ಚ್‌ 12, 2024
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 11, 2024

ಇದನ್ನೂ ಓದಿ: SSC Jobs Notification-2024: SSC 933 ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಣೆ

ಅಧಿಕೃತ ವೆಬ್ ಸೈಟ್ ಲಿಂಕ್:

• ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ : Apply Now
• ಗ್ರೂಪ್ A, B, C ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ : Apply Now
• ಸಹಾಯವಾಣಿ ಇ-ಮೇಲ್ : srd24@cbseshiksha.in