Cotton Corporation of India jobs: ಹತ್ತಿ ನಿಗಮ ಮಂಡಳಿಯಲ್ಲಿ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ!

ಕಾಟನ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ(Cotton Corporation of India Recruitment 2024) ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು ಆಸಕ್ತರು ಬೇಗನೆ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

Cotton Corporation of India jobs: ಹತ್ತಿ ನಿಗಮ ಮಂಡಳಿಯಲ್ಲಿ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ!
Cotton Corporation of India jobs-2024

ಕಾಟನ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ(Cotton Corporation of India Recruitment 2024) ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು ಆಸಕ್ತರು ಬೇಗನೆ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಭಾರತ ಕೇಂದ್ರ ಸರ್ಕಾರದ ಜವಳಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮ ನಿಗಮವಾಗಿದೆ. ಹತ್ತಿ ಬೆಳೆಗೆ ಸಂಬಂಧಿಸಿದ ವ್ಯಾಪಾರ, ಸಂಗ್ರಹಣೆ ಮತ್ತು ರಫ್ತ್ತು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿರುವ ಈ ನಿಗಮದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

ನೇಮಕಾತಿ ಸಂಕ್ಷಿಪ್ತ ವಿವರ : 

• ನೇಮಕಾತಿ ಮಂಡಳಿ : Cotton Corporation of India
• ನೇಮಕಾತಿ ಹುದ್ದೆಗಳ ಸಂಖ್ಯೆ : 214 ಹುದ್ದೆಗಳು 
• ರಾಜ್ಯದಲ್ಲಿ ಪರೀಕ್ಷಾ ಕೇಂದ್ರ : ಬೆಂಗಳೂರು

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ : Vacancy Details 

ಹತ್ತಿ ನಿಗಮ ಮಂಡಳಿಯಲ್ಲಿ ವಿವಿಧ ವಿಭಾಗಗಳ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟ್, ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಸೇರಿ ಒಟ್ಟು 214 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: BMRCL Recruitment 2024: ನಮ್ಮ ಮೆಟ್ರೋ ನೇಮಕಾತಿ!ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ವೇತನ ₹62,500

ಶೈಕ್ಷಣಿಕ ಅರ್ಹತೆಗಳು : Educational Eligibility Details 

ಈ ನೇಮಕಾತಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು.

ವಯೋಮಿತಿ - ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿಯನ್ನು 32 ವರ್ಷಕ್ಕೆ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ಹುದ್ದೆಗಳಿಗೆ ಗರಿಷ್ಠ ವಯೋಮಿತಿಯನ್ನು 30 ವರ್ಷಕ್ಕೆ ನಿಗದಿಪಡಿಸಲಾಗಿದೆ. ಆದರೆ ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!

ವೇತನ ಶ್ರೇಣಿ : Salary Range 

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ಅನುಸಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 20,000ರೂ. ನಿಂದ 1,40,000ರೂ. ವರೆಗೆ ವೇತನವನ್ನು ನೀಡಲಾಗುವುದು.

ಹುದ್ದೆಗಳಿಗೆ ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?

ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ 120 ಅಂಕಗಳ ಲಿಖಿತ ಪರೀಕ್ಷೆಯನ್ನು ನಡೆಸಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ : 

• Gen / EWS / OBC ವರ್ಗದ ಅಭ್ಯರ್ಥಿಗಳಿಗೆ - ₹1500/-
• SC/ ST/ Ex- Army /PwBD ವರ್ಗದ ಅಭ್ಯರ್ಥಿಗಳಿಗೆ - ₹500/-

ಇದನ್ನೂ ಓದಿ: fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಜುಲೈ 2, 2024 ಕೊನೆಯ ದಿನಾಂಕವಾಗಿರುತ್ತದೆ.

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು : 

ಅಧಿಕೃತ ವೆಬ್ಸೈಟ್ ಲಿಂಕ್ : Click here
• ಅಧಿಕೃತ ಪ್ರಕಟಣೆ : ಡೌನ್ಲೋಡ್