DRDO job notification- ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ!

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(DRDO)ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯ ವಿವರ ಇಲ್ಲಿದೆ. 

DRDO job notification- ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ!
DRDO job application-2024

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(DRDO)ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯ ವಿವರ ಇಲ್ಲಿದೆ. 

DRDO Recruitment 2024-ಭಾರತ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಗ್ರಾಜುಯೇಟ್ ಅಪ್ರೆಂಟಿಸ್‌ ಸೇರಿದಂತೆ ವಿವಿಧ ವಿಭಾಗದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: CBSE Recruitment 2024- PUC ಪಾಸಾದ ಅಭ್ಯರ್ಥಿಗಳಿಗೆ ಕಿರಿಯ ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ.

Vacancy details- ಹುದ್ದೆಗಳ ವಿವರ:

ನೇಮಕಾತಿ ಅಧಿಕೃತ ನೋಟಿಫಿಕೇಶನ್ ಪ್ರಕಾರ DRDO ದಲ್ಲಿ ಒಟ್ಟು 150 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ವಿಭಾಗವಾರು ಹುದ್ದೆಗಳ ವಿಂಗಡಣೆಯು ಹೀಗಿದೆ : 

• ಗ್ರಾಜುಯೇಟ್‌ ಅಪ್ರೆಂಟಿಸ್ ತರಬೇತುದಾರ ಹುದ್ದೆಗಳ ಸಂಖ್ಯೆ : 105 ಹುದ್ದೆಗಳು 
• ಡಿಪ್ಲೊಮ ಅಪ್ರೆಂಟಿಸ್ ಟ್ರೇನಿ ಹುದ್ದೆಗಳು : 20 ಹುದ್ದೆಗಳು 
• ಐಟಿಐ ಅಪ್ರೆಂಟಿಸ್ ಟ್ರೇನಿ ಹುದ್ದೆಗಳು : 25 ಹುದ್ದೆಗಳು 

ಇದನ್ನೂ ಓದಿ:  How to get a solar pump set subsidy-2024: ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು?

Education Qualification- ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿ ಹುದ್ದೆಗಳಿಗೆ ಅನುಸಾರವಾಗಿ, ಕೆಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು.
• ಗ್ರಾಜುಯೇಟ್‌ ಅಪ್ರೆಂಟಿಸ್ ಹುದ್ದೆಗಳಿಗೆ ವಿವಿಧ ಬ್ರ್ಯಾಂಚ್‌ನಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು.  
• ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದಾದರೆ, ವಿವಿಧ ಬ್ರ್ಯಾಂಚ್‌ಗಳಲ್ಲಿ ಡಿಪ್ಲೊಮ ಪದವಿಯಲ್ಲಿ ಉತ್ತೀರ್ಣಗೊಂಡಿರಬೇಕು.
• ಐಟಿಐ ಅಪ್ರೆಂಟಿಸ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ಟ್ರೇಡ್‌ಗಳಲ್ಲಿ ಐಟಿಐ ಪಾಸ್‌ ಆಗಿರಬೇಕು.

ಇದನ್ನೂ ಓದಿ: Free hostel admission-2024: ಉಚಿತ ವಿದ್ಯಾರ್ಥಿ ನಿಲಯ ಮತ್ತು ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ನಮೂನೆ.
 
ವಯೋಮಿತಿ ಮಾನದಂಡ: 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷದಿಂದ 27 ವರ್ಷದ ಒಳಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವುದಾದರೆ, ನೇಮಕಾತಿ ನಿಯಮಗಳ ಪ್ರಕಾರ ವಯೋ ಸಡಿಲಿಕೆ ಇರುತ್ತದೆ.

DRDO Jobs Salary- ವೇತನ:
 
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು 7000-10000. ರೂಪಾಯಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Fast food business- ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭವಾದ ದಿನಾಂಕ : 29-03-2024
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ನಿಗದಿಪಡಿಸಲಾದ ಕೊನೆಯ ದಿನಾಂಕ : 09-04-204

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. 

DRDO ಅಧಿಕೃತ ವೆಬ್ಸೈಟ್ ಲಿಂಕ್ : Click here