Farm pond: ರಾಜ್ಯ ಸರ್ಕಾರದಿಂದ ಮತ್ತೆ ಕೃಷಿ ಭಾಗ್ಯ ಯೋಜನೆಗೆ ಮರು ಚಾಲನೆ! ಅನುದಾನ ಎಷ್ಟು? ಎಷ್ಟು ಜಿಲ್ಲೆ ಆಯ್ಕೆ ಮಾಡಲಾಗಿದೆ?
Farm pond: ಮಳೆಯ ಅಭಾವ ಸಂದರ್ಭದಲ್ಲಿ ಬೆಳೆಗಳಿಗೆ ನೀರನ್ನು ಒದಗಿಸಲು ಮತ್ತು ಮಳೆ ನೀರನ್ನು ಸಂರಕ್ಷಣೆ ಮಾಡುವ ದೇಸೆಯಲ್ಲಿ ರೈತರಿಗೆ ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಥಿಕ ನೆರವು ನೀಡುವ ಜನಪ್ರಿಯ ಕೃಷಿ ಭಾಗ್ಯ ಯೋಜನೆಯನ್ನು ಮರು ಚಾಲನೆ ಮಾಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಮಳೆಯ ಅಭಾವ ಸಂದರ್ಭದಲ್ಲಿ ಬೆಳೆಗಳಿಗೆ ನೀರನ್ನು ಒದಗಿಸಲು ಮತ್ತು ಮಳೆ ನೀರನ್ನು ಸಂರಕ್ಷಣೆ ಮಾಡುವ ದೇಸೆಯಲ್ಲಿ ರೈತರಿಗೆ ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಥಿಕ ನೆರವು ನೀಡುವ ಜನಪ್ರಿಯ ಕೃಷಿ ಭಾಗ್ಯ ಯೋಜನೆಯನ್ನು ಮರು ಚಾಲನೆ ಮಾಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎಕ್ಸ್(Twitter) ಖಾತೆಯಲ್ಲಿ ಈ ಯೋಜನೆಯ ಮರು ಜಾರಿ ಕುರಿತು ಈ ರೀತಿ ಮಾಹಿತಿ ಹಂಚಿಕೊಂಡಿದ್ದಾರೆ: ಮನ್ಸೂನ್ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಸಂಜೀವಿನಿಯಂತಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಈ ಯೋಜನೆಯಡಿ ನೀರು ಸಂಗ್ರಹಣೆಗಾಗಿ ಕೃಷಿಹೊಂಡಗಳ ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿತಿನ್ ಹೊದಿಕೆ, ಹೊಂಡದಿಂದ ನೀರೆತ್ತಲು ಡೀಸೆಲ್ ಪಂಪ್ ಸೆಟ್, ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ ನಿರ್ಮಾಣಕ್ಕಾಗಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ರೂ.100 ಕೋಟಿ ವೆಚ್ಚದಲ್ಲಿ ಸಹಾಯಧನ ಒದಗಿಸಲಾಗುವುದು.
ಇದನ್ನೂ ಓದಿ: Akrama-sakrama yojana: ಕೃಷಿ ಪಂಪ್ ಸೆಟ್ ಅಕ್ರಮ ಸಕ್ರಮ ಯೋಜನೆ ಕುರಿತು ಹೊಸ ಆದೇಶ ಹೊರಡಿಸಿದ ರಾಜ್ಯ ಸರಕಾರ!
Krishi bhagya yojana-2023: ಕೃಷಿ ಭಾಗ್ಯ ಯೋಜನೆಗೆ ಅನುದಾನ ಎಷ್ಟು ಮೀಸಲಿಡಲಾಗಿದೆ? ಒಟ್ಟು ಎಷ್ಟು ಜಿಲ್ಲೆ ಆಯ್ಕೆ ಮಾಡಲಾಗಿದೆ?
ಪ್ರಸುತ್ತ ವರ್ಷದಲ್ಲಿ ಈ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯದ ಒಟ್ಟು 24 ಜಿಲ್ಲೆಗಳ 106 ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಇಲ್ಲಿ ರೈತರಿಗೆ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ರೂ.100 ಕೋಟಿ ಅನುದಾನವನ್ನು ಒದಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
Farm pond: ರೈತರಿಗೆ ವರದಾನವಾಗಿದ್ದ ಕೃಷಿ ಭಾಗ್ಯ ಯೋಜನೆಯ ಕೃಷಿ ಹೊಂಡಗಳು:
ಮಳೆ ಆಶ್ರಿತ ರೈತರನ್ನು ಕೇಂದ್ರೀಕರಿಸಿ ಮಳೆ ನೀರು ಸಂಗ್ರಹಣೆ ಮತ್ತು ಮನ ಬಳಕೆಗೆ ಆದ್ಯತೆ ನೀಡಿ ಕೃಷಿ ಭಾಗ್ಯ ಯೋಜನೆಯನ್ನು 2014-15 ಸಾಲಿನಿಂದ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಮೊದಲನೆ ಹಂತದಲ್ಲಿ 5 ಮುಖ್ಯ ಒಣ ಭೂಮಿ ವಲಯಗಳ 23 ಜಿಲ್ಲೆಗಳ 107 ತಾಲ್ಲೂಕುಗಳಲ್ಲಿ ಮತ್ತು 2015-16 ನೇ ಸಾಲಿನಿಂದ ಕಡಿಮೆ ಮಳೆ ಬೀಳುವ ತಾಲ್ಲೂಕುಗಳನ್ನು ಸೇರ್ಪಡೆ ಮಾಡಿ ಒಟ್ಟು 25 ಜಿಲ್ಲೆಗಳ 132 ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾದೆ. 2017-18 ನೇ ಸಾಲಿನಿಂದ ಯೋಜನೆಯ ಸೌಲಭ್ಯವನ್ನು, ಅಚ್ಚುಕಟ್ಟು ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಿಗೆ ವಿಸ್ತರಿಸಿ ಅನುಷ್ಠಾನಗೊಳಿಸಲಾಗಿತ್ತು.
ಈಗ 2023-24 ಸಾಲಿನಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ರೂ.100 ಕೋಟಿ ವೆಚ್ಚದಲ್ಲಿ ಈ ಯೋಜನೆಗೆ ಮರು ಚಾಲನೆ ನೀಡಲಾಗಿದೆ.
ಇದನ್ನೂ ಓದಿ: PMSBY Insurance Scheme- ವರ್ಷಕ್ಕೆ 20 ರೂ ಪಾವತಿಸಿ 2 ಲಕ್ಷ ವಿಮಾ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!
ದಿನನಿತ್ಯ ಈ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್> WhatsApp channel ಮಾಡಿ ಕೃಷಿಕಮಿತ್ರ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ.
ಕೃಷಿ ಭಾಗ್ಯ ಯೋಜನೆಯ ಉದ್ದೇಶಗಳು:
ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವುದು, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವುದು. ಬಿದ್ದ ಮಳೆ ನೀರನ್ನು ವ್ಯರ್ಥ ಮಾಡದೆ ಆ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು,
2020-21 ನೇ ವರ್ಷದ ಕೃಷಿ ಭಾಗ್ಯ ಯೋಜನೆಯ ಮಾರ್ಗಸೂಚಿಯ ಪ್ರಕಾರ ಸಹಾಯಧನದ ವಿವರ ಹೀಗಿದೆ
ಇದನ್ನೂ ಓದಿ: 3 phase current- ರೈತರಿಗೆ ಗುಡ್ ನ್ಯೂಸ್ ಈ ದಿನದಿಂದ ಕೃಷಿ ಪಂಪ್ ಸೆಟ್ ಗೆ 7 ತಾಸು 3 ಫೇಸ್ ಕರೆಂಟ್!
krishi honda application- ಈ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು?
ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಆಸಕ್ತಿಯಿರುವ ರೈತರು ಇನ್ನು ಕೆಲವು ದಿನಗಳಲ್ಲಿ ಈ ಯೋಜನೆಯ ಹೊಸ ಮಾರ್ಗಸೂಚಿ, ಅರ್ಜಿ ನಮೂನೆ ಇತರೆ ವಿವರ ಲಭ್ಯವಾಗಲಿದ್ದು ಆ ಬಳಿಕ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಬವುದು.
ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ನಿಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೆಶಕರ ಕಚೇರಿ ಅಥವಾ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಒಮ್ಮೆ ಭೇಟಿ ಮಾಡಿ.