HomeNew postsGanesh chaturthi 2024: ನಿಮ್ಮ ಊರಿನಲ್ಲಿ ಗಣೇಶನನ್ನು ಕೂರಿಸುತ್ತಿದಿರೇ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

Ganesh chaturthi 2024: ನಿಮ್ಮ ಊರಿನಲ್ಲಿ ಗಣೇಶನನ್ನು ಕೂರಿಸುತ್ತಿದಿರೇ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

ಸಾರ್ವಜನಿಕ ಗಣೇಶೋತ್ಸವ ಆಚರಣೆ(Ganesh chaturthi) ಮಾಡುವ ಯುವಕರು/ನಾಗರಿಕರು ಸರಕಾರದಿಂದ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸುರಕ್ಷತಾ ನಿಯಮಗಳನ್ನು ಈ ಕೆಳಗೆ ಪ್ರಕಟಿಸಲಾಗಿದೆ.

ತಮ್ಮ ತಮ್ಮ ಊರುಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವವರು ಈ ಲೇಖನದಲ್ಲಿ ತಿಳಿಸಿರುವ ಸುರಕ್ಷತಾ ಕ್ರಮಗಳ ಕುರಿತು ಒಮ್ಮೆ ಸಂಪೂರ್ಣವಾಗಿ ತಿಳಿಯುವುದು ಅತ್ಯಗತ್ಯವಾಗಿದೆ.

ಪ್ರಸ್ತುತ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ತುಂಬಾ ವಿಜೃಂಬಣೆಯಿಂದ ಎಲ್ಲಾ ಜಿಲ್ಲೆಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದ್ದು, ಹಬ್ಬದ ಆಚರಣೆಯಲ್ಲಿ ಸಾರ್ವಜನಿಕರು ತೆಗೆದುಕೊಳ್ಳಬೇಕಾಗದ ಮುನ್ನೆಚರಿಕೆ ಕ್ರಮಗಳನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಅದರಲ್ಲು ಗಣೇಶ ವಿಸರ್ಜನೆ ಸಮಯದಲ್ಲಿ ಯುವಕರು ಮುಂಜಾಗ್ರತೆ ವಹಿಸುವುದು ಅತ್ಯಗತ್ಯವಾಗಿದೆ.

ಇದನ್ನೂ ಓದಿ: Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

Ganesh chaturthi niyamagalu-2024: ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲಿಸಬೇಕಾದ ಸುರಕ್ಷತಾ ಕ್ರಮಗಳು:

1) ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್‌ಗಳನ್ನು ಅಳವಡಿಸುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.

2) ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎಂದು ಪರೀಕ್ಷಿಸಿಕೊಳ್ಳಿ.

3) ಸೀರಿಯಲ್ ಲೈಟ್ ಹಾಗೂ ದೀಪಗಳನ್ನು ಹಾಕುವಾಗ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಬಾರದು.

4) ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರದು.

5) ಗಣೇಶ ಮೂರ್ತಿಯ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರವಿರಬೇಕು. ವಿದ್ಯುತ್ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಬಾರದು.

6) ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಬೆಸ್ಕಾಂನ ಆಯಾ ಉಪ ವಿಭಾಗದ ಅಧಿಕಾರಿಗಳ ಗಮನಕ್ಕೆ ತಂದರೆ, ಅವರು ಅಗತ್ಯ ನೆರವು ಒದಗಿಸುತ್ತಾರೆ.

7) ತುಂಡಾದ ತಂತಿ, ವಿದ್ಯುತ್ ಕಿಡಿ ಗಮನಕ್ಕೆ ಬಂದರೆ 1912 ಸಹಾಯವಾಣಿಗೆ ಕರೆ ಮಾಡಿ.

8) ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ ‘ಅಪಾಯ ವಲಯ’ ಎ೦ದು ಸೂಚಿಸಬೇಕು.

ಇದನ್ನೂ ಓದಿ: Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

ಇದನ್ನೂ ಓದಿ: BPL card suspension- ಈ ನಿಯಮ ಮೀರಿದರೆ ನಿಮ್ಮ ಬಿಪಿಎಲ್ ಕಾರ್ಡ್ ಅಮಾನತು ಆಗುತ್ತದೆ!

Ganesh chaturthi festival- ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಉಪ ವಿಭಾಗ ಕಚೇರಿ ಸಂಪರ್ಕಿಸಿ:

1) ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಅರಕ್ಷಕ ಠಾಣೆ ಹಾಗೂ ಇನ್ನಿತರ) ಸಕ್ಷಮ ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.

2) ನಿರಕ್ಷೇಪಣಾ ಪತ್ರ ಪಡೆದ ನ೦ತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯ‌ರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹ ಪ್ರತಿಷ್ಠಾಪಿಸಲು ನಿರ್ಮಿಸಿರುವ ಪೆಂಡಾಲ್‌ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಳ್ಳಬೇಕು.

3) ವೈರಿಂಗ್ ಸುರಕ್ಷತೆ, ಎಂ.ಸಿ.ಬಿ. ಮತ್ತು ಇ.ಐ.ಎ. ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್‌ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿ ಪಡೆದು ಸ್ಥಳ ಪರಿಶೀಲಿಸಿದ ನಂತರವೇ ಸಂಪರ್ಕ ಕಲ್ಪಿಸಲಾಗುವುದು.

4) ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

ಇದನ್ನೂ ಓದಿ: Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!

Ganesh habba-ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದ ವಿತರಣೆ ಕುರಿತು ಇರಲಿ ಮುನ್ನೆಚರಿಕೆ:

ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಲು FSSAI ಪರವಾನಗಿ ಪಡೆದಿರುವ ವ್ಯಕ್ತಿ / ಸಂಸ್ಥೆಗಳು ಮಾತ್ರ ಪ್ರಸಾದ ಸಿದ್ಧಪಡಿಸುವಂತೆ ಆದೇಶ ಹೊರಡಿಸಲಾಗಿರುತ್ತದೆ.

Ganesh murthi visarjane-ಗಣೇಶ ವಿಸರ್ಜನೆ ಸಮಯದಲ್ಲಿ ಇರಲಿ ಮುಂಜಾಗ್ರತೆ:

1) ಗಣೇಶನನ್ನು ನೀರಿಗೆ ಮುಳುಗಿಸುವ ಸ್ಥಳಕ್ಕೆ ಸಣ್ಣ ಮಕ್ಕಳನ್ನು ಕರೆದುಕೊಂಡು ಹೋಗಬೇಡಿ.

2) ಡಿಜೆ ಸೌಂಡ್ ಬಾಕ್ಸ್ ಅನ್ನು ಅದಷ್ಟು ವಿದ್ಯುತ್ ತಂತಿ ತಗುಲದ ರೀತಿ ವಾಹನಕ್ಕೆ ಕಟ್ಟುವುದು ಮತ್ತು ವಿದ್ಯುತ್ ಲೈನ್ ಕೆಳಗೆ ಇರುವ ರಸ್ತೆಯಲ್ಲಿ ಸಂಚಾರ ಮಾಡದಿರುವುದು ಉತ್ತಮ.

3) ಗಣೇಶನನ್ನು ನೀರಿಗೆ ಬಿಡುವ ಸ್ಥಳಕ್ಕೆ ಈಜು ಬರುವಂತಹ ವ್ಯಕ್ತಿಗಳು ಮಾತ್ರ ತೆರಲಿ.

ಇದನ್ನೂ ಓದಿ: Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

Most Popular

Latest Articles

- Advertisment -

Related Articles