Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

Gruhalakshmi amount-: ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿ.

ಬಹು ನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದ  ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಮೊದಲನೇ ಕಂತಿನ ಹಣ (Gruhalakshmi amount)ವರ್ಗಾವಣೆಗೆ ಚಾಲನೆ ನೀಡಲಾಗಿತ್ತು. ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿ.

ಈ ಕಾರ್ಯಕ್ರಮವನ್ನು ರಾಜ್ಯದ 11,000 ಸಾವಿರ ಗ್ರಾಮ ಪಂಚಾಯತಿಗಳಲ್ಲಿಯು ಸಹ ಏರ್ಪಡಿಸಲಾಗಿದ್ದು, ರಾಜ್ಯಾದ್ಯಂತ  ಚಾಲನೆ ಕಾರ್ಯಕ್ರಮ ನೇರ ಪ್ರಸಾರ ವಿಕ್ಷೀಣೆಗೆ ಅವಕಾಶ ಮಾಡಿಕೊಡಲಾಗಿತ್ತು.

ನೇರ ನಗದು ವರ್ಗಾವಣೆ(DBT) ಮೂಲಕ ಮೊದಲ ಕಂತಿನ ಹಣ ವರ್ಗಾವಣೆ:

ನೇರ ನಗದು ವರ್ಗಾವಣೆ(DBT) ಎಂದರೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆ ವಿವರವನ್ನು ಡಿಜಿಟಲ್ ಪೈಲ್ ನಲ್ಲಿ ಕೃಡೀಕರಿಸಿ ಕೇವಲ ಒಂದು ಕ್ಲಿಕ್ ಮಾಡುವುದರ ಮೂಲಕ ಎಲ್ಲಾ ಫಲಾನುಭವಿಗಳ ಖಾತೆಗೆ ಏಕ ಕಾಲಕ್ಕೆ ಹಣ ವರ್ಗಾವಣೆ ಮಾಡುವಂತಹ ವ್ಯವಸ್ಥೆ ಇದಾಗಿದೆ. 

ನಿಮ್ಮ ಖಾತೆಗೆ ಈ ಯೋಜನೆಯಡಿ ಹಣ ಜಮಾ ಅಗಿರುವುದನ್ನು ಖಚಿತಪಡಿಸಿಕೊಳ್ಳುವ ಎರಡು ವಿಧಾನವನ್ನು ಈ ಕೆಳಗೆ  ತಿಳಿಸಲಾಗಿದೆ. ಈ ವಿಧಾನ ಅನುಸರಿಸಿ ಈ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದವರು ಹಣ ಜಮಾ ಅಗಿರುವುದನ್ನು ಚೆಕ್ ಮಾಡಿಕೊಳ್ಳಬವುದು.

ವಿಧಾನ-1 : ಬ್ಯಾಂಕ್ ಸಹಾಯವಾಣಿಗೆ ಕರೆ ಮಾಡಿ ತಿಳಿಯಬವುದು:

ಈ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಪಡಿತರ ಚೀಟಿ ಕುಟುಂಬದ ಫಲಾನುಭವಿಗಳು ಈ ಲಿಂಕ್ https://www.krushikamitra.com/Bank-balance-check-mobil-numbers-177 ಮೇಲೆ ಕ್ಲಿಕ್ ಮಾಡಿ ನಿಮ್ಮ ಖಾತೆಯಿರುವ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಖಾತೆಗೆ ಹಣ ಜಮಾ ಅಗಿರುವುದನ್ನು ಖಚಿತಪಡಿಸಿಕೊಳ್ಳಬವುದು.

ಇದನ್ನೂ ಓದಿ: LPG subsidy amount: ಕೇಂದ್ರ ಸರಕಾರದಿಂದ ಗ್ಯಾಸ್ ಸಬ್ಸಿಡಿ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.


ವಿಧಾನ-2 : DBT Karnataka ಮೊಬೈಲ್ ಅಪ್ಲಿಕೇಶನ್ ಮೂಲಕ ತಿಳಿಯಬವುದು:

ಕರ್ನಾಟಕ ಸರಕಾರದ ಇ-ಆಡಳಿತ ವಿಭಾಗದ  ರಾಜ್ಯ "DBT Karnataka" ಅಧಿಕೃತ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಮ್ಮ ಮೊಬೈಲ್ ನಲ್ಲೇ ಸರಕಾರಿ ಯೋಜನೆಗಳ ನೇರ ನಗದು ವರ್ಗಾವಣೆ(DBT)ಯ ಹಣ ಜಮಾ ಅಗಿರುವುದನ್ನು ತಿಳಿಯಬವುದಾಗಿದೆ.

Step-1: ಪ್ರಥಮದಲ್ಲಿ ಈ https://play.google.com/store/apps/details?id=com.dbtkarnataka ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇ ಸ್ಟೋರ್ ಭೇಟಿ ಮಾಡಿ "DBT Karnataka" ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ನಂತರ ಫಲಾನುಭವಿಯ 12 ಅಂಕಿಯ ಆಧಾರ್ ನಂಬರ್ ನಮೂದಿಸಿ ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ ಒಟಿಪಿಯನ್ನು ನಮೂದಿಸಿ "VERIFY OTP" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ಈ ಪ್ರಕ್ರಿಯೆ ಮುಗಿಸಿದ ಬಳಿಕ ನಿಮಗೆ ನೆನಪಿನಲ್ಲಿ ಉಳಿಯುವ 4 ಅಂಕಿಯ Secure code ಅನ್ನು ಹಾಕಿ "SUBMIT" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ತದನಂತರ ಫಲಾನುಭವಿಯ ವಿವರ ತೋರಿಸುತ್ತದೆ ಈ ಪುಟದ ಕೊನೆಯ ಕಾಲಂ ನಲ್ಲಿ ಮೊಬೈಲ್ ನಂಬರ್ ಹಾಕಿ "OK" ಬಟನ್ ಮೇಲೆ ಕ್ಲಿಕ್ ಮಾಡಿಬೇಕು.


Step-4: ಈ ಪುಟದಲ್ಲಿ "Payment Status" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಂತರ ಯೋಜನೆಯ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ಈ ಯೋಜನೆಯಡಿ ಹಣ ಜಮಾ ಅಗಿರುವುದರ ಕುರಿತು ಮಾಹಿತಿ ತಿಳಿಯುತ್ತದೆ.

ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಅಗಿದೆ ಎಂದು ತಿಳಿಯಲಿ "Seeding status of Aadhar in Bank Account" ಬಟನ್ ಮೇಲೆ ಕ್ಲಿಕ್ ಮಾಡಿದರೆ ವಿವರ ಗೋಚರಿಸುತ್ತದೆ.

ರೇಷನ್ ಕಾರ್ಡ ಕುರಿತು ನಮ್ಮ ಪುಟದ ಇತರೆ ಅಂಕಣಗಳು: