Gruhalakshmi Yojana-2024: ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯಲು ಗುರುತಿನ ಚೀಟಿ ಪರಿಗಣಿಸಲು ಅನುಮೋದನೆ!

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana-2024) ಪ್ರತಿ ತಿಂಗಳು ರೂ 2,000 ಸಾವಿರ ಅರ್ಥಿಕ ನೆರವನ್ನು ಪಡೆಯಲು ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ನೂತನ ಕ್ರಮ ಜಾರಿಗೆ ಅನುಮೋದನೆ ನೀಡಲಾಗಿದೆ.

Gruhalakshmi Yojana-2024: ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯಲು ಗುರುತಿನ ಚೀಟಿ ಪರಿಗಣಿಸಲು ಅನುಮೋದನೆ!
Gruhalakshmi Yojana-2024

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana-2024) ಪ್ರತಿ ತಿಂಗಳು ರೂ 2,000 ಸಾವಿರ ಅರ್ಥಿಕ ನೆರವನ್ನು ಪಡೆಯಲು ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ನೂತನ ಕ್ರಮ ಜಾರಿಗೆ ಅನುಮೋದನೆ ನೀಡಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕವಾಗಿ ಎಲ್ಲಾ ಮಹಿಳೆಯರಿಗೆ ರೂ 2,000 ನೀಡುವಂತೆ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಈ ಯೋಜನೆಯಡಿ ಅರ್ಜಿ(Gruhalakshmi Yojana application)ಸಲ್ಲಿಸಲು ಈ ಹಿಂದೆ ಸರಕಾರದಿಂದ ಮಾರ್ಗಸೂಚಿಯಲ್ಲಿ ಮಾರ್ಪಡು ಮಾಡಲಾಗಿತ್ತು.

ಇದರನ್ವಯ ಈಗ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಂತ್ರಾಶದಲ್ಲಿ ಮಾರ್ಪಡು ಮಾಡಲು ರಾಜ್ಯ ಸರಕಾರದಿಂದ ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯಲು ಗುರುತಿನ ಚೀಟಿ ಪರಿಗಣಿಸಲು ಅನುಮೋದನೆ ನೀಡಲಾಗಿದೆ:

ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಥಿಕ ನೆರವನ್ನು ಪಡೆಯಲು ಅನುಕೂಲವಾಗುವಂತೆ ಯೋಜನೆಯ ತಂತ್ರಾಂಶದಲ್ಲಿ(Website) ಅರ್ಜಿ ಸಲ್ಲಿಸುವ ಸಮಯದಲ್ಲಿ National Portal for Transgender persons ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರದಿಂದ ಅನುಮೋದನೆ ನೀಡಿ ವೆಬ್ಸೈಟ್ ನಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

Application Date-ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ? 

ಅರ್ಹ ಅರ್ಜಿದಾರರು ಈ ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ಜುಲೈ ರಿಂದ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಪ್ರಸ್ತುತ ವಾಸವಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಜಿಲ್ಲಾ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

Required Documents for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು?

1) ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ.
2) ಪಾಸ್ ಪೋರ್ಟ ಅಳತೆಯ ಪೋಟೋ.
3) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
4) ಬ್ಯಾಂಕ್ ಪಾಸ್ ಬುಕ್ ಪ್ರತಿ.

ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಯೋಜನೆ ಅಧಿಕೃತ ವೆಬ್ಸೈಟ್ ಲಿಂಕ್: Click here

ಇದನ್ನೂ ಓದಿ: Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!