- Advertisment -
HomeNew postsIAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

Last updated on September 30th, 2024 at 02:27 pm

ಕರ್ನಾಟಕ ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(IAS KAS Free Coaching ) ನೀಡಲು ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ವಿವರ ಇಲ್ಲಿದೆ.

ಕರ್ನಾಟಕ ಸರ್ಕಾರದ ಈ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವುದು ಹೇಗೆ?(IAS KAS Free Coaching 2024 )ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ? ಹಾಗೂ ಇನ್ನಿತರ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ನಿರ್ದೇಶನಲಯವು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ (Minority Students) ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Southern Railway Recruitment-2024: ದಕ್ಷಿಣ ರೈಲ್ವೆ ಇಲಾಖೆಯಿಂದ 2438 ಹುದ್ದೆಗಳ ನೇಮಕಾತಿ!

ಆಯ್ಕೆಯಾದವರಿಗೆ ಸಿಗುವ ಸವಲತ್ತುಗಳೇನು?

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಆರ್ಥಿಕ ಹೊರೆಯನ್ನು ತಪ್ಪಿಸಲು ಹಾಗೂ ಕಲಿಕಾ ಪೂರಕ ವಾತಾವರಣವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲು ಬೆಂಗಳೂರು ನಗರದಲ್ಲಿರುವಂತಹ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಈ ಯೋಜನೆಯನ್ನು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಸಹಾಯವಾಗುವಂತೆ ಜಾರಿಗೆ ತಂದಿದ್ದು, ಇದರಲ್ಲಿ ಆಯ್ಕೆ ಆದವರಿಗೆ 10 ತಿಂಗಳ ವಸತಿ ಸಹಿತ UPSC /KPSC ಪರೀಕ್ಷೆಗಳಿಗೆ ಉಚಿತ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳಿಂದ ನೀಡಲಾಗುತ್ತದೆ.

ಇದನ್ನೂ ಓದಿ: Diploma in veterinary: 2 ವರ್ಷದ ಪಶುಸಂಗೋಪನಾ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

How can apply-ಯಾರು ಅರ್ಜಿ ಸಲ್ಲಿಸಬಹುದು?

 • ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿದ್ದು, ಯೋಜನೆಗೆ ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳು ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕು.
• ಈಗಾಗಲೇ ಸರ್ಕಾರಿ ನೌಕರಿಯಲ್ಲಿರುವವರು ಅರ್ಜಿ ಸಲ್ಲಿಸಲು ಅರ್ಹರುರುವುದಿಲ್ಲ.

How to apply-ಹೇಗೆ ಅರ್ಜಿ ಸಲ್ಲಿಸಬೇಕು?

ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Central budget 2024: ಕೇಂದ್ರ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಎಷ್ಟು ಅನುದಾನ? ಇಲ್ಲಿದೆ ಪಿ ಎಂ ಕಿಸಾನ್ ಹಣ ಹೆಚ್ಚಳದ ಅಧಿಕೃತ ಮಾಹಿತಿ!

Important dates-ಪ್ರಮುಖ ದಿನಾಂಕಗಳು : 

• ಆನ್ಲೈನ್ ನೋಂದಣಿಗೆ ಆರಂಭ ದಿನಾಂಕ – 24 ಜುಲೈ 2024
• ಆನ್ಲೈನ್ ನೊಂದಣಿಗೆ ಕೊನೆಯ ದಿನಾಂಕ – 31 ಆಗಸ್ಟ್ 2024

Website links-ಪ್ರಮುಖ ಲಿಂಕ್ ಗಳು : 

• ಅಧಿಕೃತ ಪ್ರಕಟಣೆ – Download Now
• ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ : Click here

ಇದನ್ನೂ ಓದಿ: adhar rtc link-2024: ರೈತರು ಇನ್ನೂ 7 ದಿನದ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ಸರಕಾರಿ ಯೋಜನೆಗಳ ಸೌಲಭ್ಯ ಸಿಗುವುದಿಲ್ಲ!

- Advertisment -
LATEST ARTICLES

Related Articles

- Advertisment -

Most Popular

- Advertisment -