Job news- KPSCಯಿಂದ ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ!

ಕರ್ನಾಟಕ ಲೋಕಸೇವಾ ಆಯೋಗವು(KPSC) ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ್ದು ವಿವಿಧ ಇಲಾಖೆಯಡಿ ಇರುವ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು ತಾತ್ಕಾಲಿಕ ಆಯ್ಕೆಪಟ್ಟಿಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ ನೀಡಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.

Job news- KPSCಯಿಂದ ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ!
Job news-2024

ಕರ್ನಾಟಕ ಲೋಕಸೇವಾ ಆಯೋಗವು(KPSC) ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ್ದು ವಿವಿಧ ಇಲಾಖೆಯಡಿ ಇರುವ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು ತಾತ್ಕಾಲಿಕ ಆಯ್ಕೆಪಟ್ಟಿಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ ನೀಡಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಳ ಸಂಬಂಧ ಅಂತಿಮ ಆಯ್ಕೆಪಟ್ಟಿ ಹೆಚ್ಚುವರಿ ಆಯ್ಕೆಪಟ್ಟಿ ಮತ್ತು ಕಟ್ ಆಫ್ ಅಂಕಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: Parihara grants- ಈ ಜಿಲ್ಲೆಗಳಲ್ಲಿ ಮೊದಲ ಕಂತಿನ ಬರ ಪರಿಹಾರ ರೈತರ ಖಾತೆಗೆ ಬಿಡುಗಡೆ!

kpsc job selection list-2024: ಇಲಾಖಾವರು ಪ್ರಕಟಿಸಿದ ಹುದ್ದೆಯ ವಿವರ: 

  • ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರರು- 229+59(ಹೈ.ಕ) 
  • ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಗರ ಯೋಜಕರು- 18+05(ಹೈ.ಕ)
  • ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು- 18+07(ಹೈ.ಕ)
  • ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ- 06(ಹೈ.ಕ)
  • ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಿರಿಯ ಅಭಿಯಂತರರು- 89+47(ಹೈ.ಕ) 
  • ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರರು- 229+59(ಹೈ.ಕ) 
  • ಜಲಸಂಪನ್ಮೂಲ ಇಲಾಖೆಯ ಕಿರಿಯ ಇಂಜಿನಿಯರ್(ಸಿವಿಲ್)- 166(ಹೈ.ಕ) 
  • ಜಲಸಂಪನ್ಮೂಲ ಇಲಾಖೆಯ ಕಿರಿಯ ಸಹಾಯಕ(ಡಿವಿಜನ್-1)- 181(ಹೈ.ಕ) 
  • ಕರ್ನಾಟಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯ ವಿಮಾ ವೈದ್ಯಾದಿಕಾರಿಗಳು- 143

ಇದನ್ನೂ ಓದಿ: Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!ಪರಿಹಾರ

ಆಕ್ಷೇಪಣೆ ಸಲ್ಲಿಕೆ:

ತಾತ್ಕಾಲಿಕ ಆಯ್ಕೆಪಟ್ಟಿಗಳಿಗೆ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ (29-01-2024 ರಂದು ಸಂಜೆ 5 ಗಂಟೆಯೊಳಗಾಗಿ) ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು 560001 ಇವರಿಗೆ ಸಂಬಂಧಿತ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು.

ಈ ಹುದ್ದೆಗಳಿಗೆ ಆಯ್ಕೆಯಾಗಲು ಇಚ್ಛಿಸದ ಅಭ್ಯರ್ಥಿಗಳು ಸ್ವ-ಇಚ್ಛಾ ಹೇಳಿಕೆಯನ್ನು ಆಯ್ಕೆಪಟ್ಟಿ ಪ್ರಕಟಿಸಿದ 7 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ. ಬೆಂಗಳೂರು 560001 ಇವರಿಗೆ ಲಿಖಿತವಾಗಿ ಸಲ್ಲಿಸಬೇಕು. ಆ ನಂತರ ಸಲ್ಲಿಸಲಾಗುವ ಆಕ್ಷೇಪಣೆ / ಸ್ವ-ಇಚ್ಚಾ ಹೇಳಿಕೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಲತಾ ಕುಮಾರಿ ಕೆ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧಿಕೃತ ವೆಬ್ಸೈಟ್ ಲಿಂಕ್- Click here