KPSC WR Dept. Jobs Notification- ಜಲಸಂಪನ್ಮೂಲ ಇಲಾಖೆ ನೇಮಕಾತಿ 313 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಜಲಸಂಪನ್ಮೂಲ ಇಲಾಖೆ(WR Dept. Jobs Notification) ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ವಿವರವನ್ನು ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.

KPSC WR Dept. Jobs Notification- ಜಲಸಂಪನ್ಮೂಲ ಇಲಾಖೆ ನೇಮಕಾತಿ 313 ಹುದ್ದೆಗಳಿಗೆ ಅರ್ಜಿ ಆಹ್ವಾನ!
KPSC WR Dept. Jobs Notification-2024

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಜಲಸಂಪನ್ಮೂಲ ಇಲಾಖೆ(WR Dept. Jobs Notification) ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ವಿವರವನ್ನು ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.

KPSC ಮುಖಾಂತರ ಜಲಸಂಪನ್ಮೂಲ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವಂತ ಸಹಾಯಕ ಇಂಜಿನಿಯರ್ ಹಾಗೂ ಗ್ರಂಥಪಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಹತೆಗಳನ್ನು ಪರಿಶೀಲಿಸಿಕೊಂಡು ನಿಗದಿಪಡಿಸಲಾಗಿರುವ ದಿನಾಂಕದಂದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೋರಿದೆ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಇಂಜಿನಿಯರ್ ಹುದ್ದೆಗಳ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಪಾಲಕ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ 28 ಮೇ 2024. ನೇಮಕಾತಿಗೆ ಸಂಬಂಧಿಸಿದ ಉಳಿದ ಇತರೆ ಸಂಪೂರ್ಣ ಮಾಹಿತಿಯು ಈ ಕೆಳಗಿನಂತಿದೆ. 

ಇದನ್ನೂ ಓದಿ: Loan interest- ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ!

Vacancy Details- ಖಾಲಿ ಇರುವ ಹುದ್ದೆಗಳ ವಿವರ: 

• ಸಿವಿಲ್ ಕಿರಿಯ ಇಂಜಿನಿಯರ್ (ಜಲ ಸಂಪನ್ಮೂಲ ಇಲಾಖೆ ) - 270 ಹುದ್ದೆಗಳು
• ಮೆಕ್ಯಾನಿಕಲ್ ಕಿರಿಯ ಇಂಜಿನಿಯರ್ (ಜಲ ಸಂಪನ್ಮೂಲ ಇಲಾಖೆ - 30 ಹುದ್ದೆಗಳು
• ಸಹಾಯಕ ಗ್ರಂಥಪಾಲಕ- 13 ಹುದ್ದೆಗಳು 
ಒಟ್ಟು ಹುದ್ದೆಗಳು = 313 ಹುದ್ದೆಗಳು

Salary- ವೇತನ ಶ್ರೇಣಿ ವಿವರ:

• ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ವೇತನ : 33450/- ರಿಂದ - 62600/- ವರೆಗೆ 
• ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ವೇತನ : 30350/- ರಿಂದ 58250/- ವರೆಗೆ 

ಇದನ್ನೂ ಓದಿ: Free computer training- 45 ದಿನದ ಉಚಿತ ಕಂಪ್ಯೂಟರ್ ಡಿ.ಟಿ.ಪಿ ಕಲಿಕೆ ತರಬೇತಿಗೆ ಅರ್ಜಿ ಆಹ್ವಾನ!
 
Qualification- ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳು:

ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೂರು ವರ್ಷಗಳ ಡಿಪ್ಲೋಮಾ ಇನ್ ಸಿವಿಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ಡಿಪ್ಲೋಮಾ ಪದವಿ ಹೊಂದಿರಬೇಕು. 

ಗ್ರಂಥಾಲಯ ಸಹಾಯಕ: ಅಭ್ಯರ್ಥಿಗಳು ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ, ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಮೂರು ವರ್ಷಗಳ ಲೈಬ್ರರಿ ಸೈನ್ಸ್ ನಲ್ಲಿ ಡಿಪ್ಲೋಮಾ ಪದವಿ ಹೊಂದಿರಬೇಕು.

ಇದನ್ನೂ ಓದಿ: Lok sabha election-2024: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಪರಿಶೀಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ.

Application fee- ನಿಗದಿಪಡಿಸಿದ ಅರ್ಜಿ ಶುಲ್ಕ: 

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
SC / ST ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ. 
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-

Important Date- ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನ : 29 ಏಪ್ರಿಲ್ 2024
ಅರ್ಜಿ ಸಲ್ಲಿಸಲು ಮುಕ್ತಾಯಗೊಳ್ಳುವ ದಿನಾಂಕ: 28 ಮೇ 2024

ಇದನ್ನೂ ಓದಿ: Voter ID- ವೋಟರ್ ಐಡಿ ತಿದ್ದುಪಡಿಗೆ ಕೊನೆಯ ಅವಕಾಶ! ಇಲ್ಲಿದೆ ನೀವೇ ಅರ್ಜಿ ಸಲ್ಲಿಸುವ ವಿಧಾನ.

Age limit- ವಯೋಮಿತಿ ಮಾನದಂಡ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷದಿಂದ 35 ವರ್ಷದ ಒಳಗಿರಬೇಕು. ಇನ್ನೂ ಮೀಸಲಾತಿ ವ್ಯಾಪ್ತಿ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಇರಲಿದೆ.

Application link- ಅರ್ಜಿ ಸಲ್ಲಿಸುವ ವಿಧಾನ: 

ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕೃತ ಜಾಲತಾಣ www.kpsc.kar.nic.in ಭೇಟಿ ನೀಡಿ ಆನ್ಲೈನ್ ವಿಧಾನ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Apply now  
ಸಹಾಯವಾಣಿ : +91 080 3057 4957