KSRLPS Job Application- ಕಚೇರಿ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ!

KSRLPS Job Application: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಕಚೇರಿ ಸಹಾಯಕರು ಹುದ್ದೆಗಳು ಸೇರಿದಂತೆ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

KSRLPS Job Application- ಕಚೇರಿ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ!
KSRLPS Job Application-2024

KSRLPS Job Application: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಕಚೇರಿ ಸಹಾಯಕರು ಹುದ್ದೆಗಳು ಸೇರಿದಂತೆ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆ, ವಯೋಮಿತಿ ಮಾನದಂಡಗಳು ಹಾಗೂ ಇತರೆ ವಿವರಗಳನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ಹೇಳಿಕೊಂಡು ಅರ್ಜಿ ಸಲ್ಲಿಸಿ.

KSRPS Recruitment 2024: ಕರ್ನಾಟಕ ರಾಜ್ಯ ರೂರಲ್ ಲೈವ್ಲಿ ಹುಡ್ ಪ್ರಮೋಷನ್ ಸೊಸೈಟಿ ಮಾಡಿಕೊಳ್ಳುತ್ತಿರುವ ನೇಮಕಾತಿಗೆ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಈ ಇಲಾಖೆಯಲ್ಲಿ ಒಟ್ಟು 34 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ನೇಮಕಾತಿ ಹುದ್ದೆಗಳನ್ನು ಕೆಳಗೆ ನೀಡಲಾಗಿದೆ.

ಇದನ್ನೂ ಓದಿ: NVS Recruitment- ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿ! 1377 ಹುದ್ದೆಗಳಿಗೆ ಅರ್ಜಿ ಆಹ್ವಾನ.

Vacancy post details- ಖಾಲಿ ಇರುವ ಹುದ್ದೆಗಳ ವಿವರ -

• ಕ್ಲಸ್ಟರ್ ಮೇಲ್ವಿಚಾರಕ - 8 ಹುದ್ದೆಗಳು
• ಬ್ಲಾಕ್ ಮ್ಯಾನೇಜರ್ - 20 ಹುದ್ದೆಗಳು
• ಕಚೇರಿ ಸಹಾಯಕರು - 1 ಹುದ್ದೆ
• ಜಿಲ್ಲಾ ವ್ಯವಸ್ಥಾಪಕರು - 2 ಹುದ್ದೆಗಳು
• DEO / MIS ಸಂಯೋಜಕರು - 3 ಹುದ್ದೆಗಳು

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆ:

ಬಿಡುಗಡೆಯಾಗಿರುವ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿತ ವಿಷಯಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ: BSF Recruitment 2024- SSLC, ITI ಪಾಸಾದವರಿಗೆ BSF ನಲ್ಲಿ ಉದ್ಯೋಗವಕಾಶ!

ಅರ್ಜಿ ಸಲ್ಲಿಸುವ ವಿಧಾನ:

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಖಾಲಿ ಇರುವಂತಹ ಕಚೇರಿ ಸಹಾಯಕರು ಹುದ್ದೆಗಳ ಸೇರಿದಂತೆ ಇತರೆ ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕನ್ನು ಕೆಳಗಿನ ಭಾಗದಲ್ಲಿ ನೀಡಲಾಗಿರುತ್ತದೆ. ಅಭ್ಯರ್ಥಿಗಳ ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

Application fee- ಅರ್ಜಿ ಶುಲ್ಕ:

KSRLPS Job Application - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ. ಉಚಿತವಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Free electronics repair training- ಉಚಿತ ಟಿ ವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆಗೆ ಪ್ರಾರಂಭವಾಗುವ ದಿನಾಂಕ : 13 ಮಾರ್ಚ್ 2024
ಅರ್ಜಿ ಸಲ್ಲಿಕೆ ಮುಕ್ತಾಯವಾಗುವ ದಿನಾಂಕ : 10 ಏಪ್ರಿಲ್ 2024

Application link- ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ : Apply Now