Michaung Cyclone-ವಾಯುಭಾರ ಕುಸಿತ ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ!

Cyclone news: ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋಲಾರ ಜಿಲ್ಲೆಯ ಶ್ರ‍ೀ ನಿವಾಸಪುರ ತಾಲ್ಲೂಕಿನ ಮುದಿಮದಗು ವ್ಯಾಪ್ತಿಯಲ್ಲಿ ಅತ್ಯಧಿಕ 9.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

Michaung Cyclone-ವಾಯುಭಾರ ಕುಸಿತ ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ!
Michaung Cyclone-2023

ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋಲಾರ ಜಿಲ್ಲೆಯ ಶ್ರ‍ೀ ನಿವಾಸಪುರ ತಾಲ್ಲೂಕಿನ ಮುದಿಮದಗು ವ್ಯಾಪ್ತಿಯಲ್ಲಿ ಅತ್ಯಧಿಕ 9.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

ಜೊತೆಗೆ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆ ದಾಖಲಾಗಿರುತ್ತದೆ. ಉಳಿದಂತೆ ರಾಜ್ಯದ್ಯಂತ ಮೋಡ ಕವಿದ ವಾತಾವರಣದಿಂದ ಕೂಡಿದೆ.

ಇದನ್ನೂ ಓದಿ: Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

Karnataka Weather News-ನಾಳೆ ಬೆಳಗ್ಗೆ 8-00 (05-12-2023) ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ ಹೀಗಿದೆ: 

ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಿಚಾಂಗ್ ಚಂಡಮಾರುತವಾಗಿ ರೂಪಗೊಂಡಿರುವ ಪರಿಣಾಮದಿಂದ ಪಕ್ಕದ ಆಂದ್ರಪ್ರದೇಶ ಮತ್ತು ತಮಿಳುನಾಡು ಹಾಗೂ ಒಡಿಶಾ ರಾಜ್ಯಗಳಲ್ಲಿ ಭಾರೀ ಮಳೆ ದಾಖಲಾಗಿರುತ್ತದೆ.

ಈ ಚಂಡಮಾರುತದ ಪ್ರಭಾವದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆಯಿರುತ್ತದೆ. ಜೊತೆಗೆ ರಾಜ್ಯದ್ಯಂತ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಇದನ್ನೂ ಓದಿ: Bara Parihara-2023: ರಾಜ್ಯ ಸರಕಾರದಿಂದ ಮೊದಲ ಕಂತಿನ ಬರ ಪರಿಹಾರ! ರೈತರಿಗೆ ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ಕೋಲಾರ, , ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇರುತ್ತದೆ. 

ಬಂಗಾಳಕೊಲ್ಲಿಯ ಚಂಡಮಾರುತವು ಇವತ್ತು ಆಂದ್ರಾದ ನೆಲ್ಲೂರು ಕರಾವಳಿಯ ಮೂಲಕ ಪ್ರವೇಶಿಸುವ ಸಾಧ್ಯತೆ ಇದೆ. 

ಡಿಸೆಂಬರ್ 7 ಅಥವಾ 8ರ ನಂತರ ಈ ಚಂಡಮಾರುತವು ಸಂಪೂರ್ಣ ಶಿಥಿಲಗೊಳ್ಳುವ ಸಾಧ್ಯತೆ ಇದ್ದು ಅ ನಂತರ  ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.

Bengalore Next 8 days weather forecast-ಮುಂದಿನ ಒಂದು ವಾರದ(04-12-2023 ರಿಂದ 12-12-2023 ರವರೆಗೆ) ಮಳೆ ಮುನ್ಸೂಚನೆ ಮಾಹಿತಿ:

ಇದನ್ನೂ ಓದಿ: Nigamada Yojane-ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ ಸೇರಿ ಇತರೆ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಈ ಮೇಲಿನ ಮುಂದಿನ ಒಂದು ವಾರದ ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ನಕ್ಷೆಯಲ್ಲಿ ಹಳದಿ ಬಣ್ಣದಿಂದ ಗುರುತಿಸಿದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಅಲ್ಲಲಿ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಉತ್ತಮ ಮಳೆ((50 ಮಿ.ಮೀ ನಿಂದ 90 ಮಿ.ಮೀ)  ಮುನ್ಸೂಚನೆ ನೀಡಲಾಗಿದೆ.

ನಕ್ಷೆಯಲ್ಲಿ ಹಸಿರು ಬಣ್ಣದಿಂದ ಗುರುತಿಸಿದ ಕೋಲಾರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ,ಹಾವೇರಿ, ಗದಗ, ಬಾಗಲಕೋಟೆ, ಉತ್ತರಕನ್ನಡ, ದಾರವಾಡ, ಬಿಜಾಪುರ ಜಿಲ್ಲೆಯಲ್ಲಿ ಸಾಧಾರಣ ಮಳೆ(20 ಮಿ.ಮೀ ನಿಂದ 50 ಮಿ.ಮೀ) ಮುನ್ಸೂಚನೆ ನೀಡಲಾಗಿದೆ.

ನೀಲಿ ಬಣದಿಂದ ಸೂಚಿಸಿದ ಬೆಳಗಾವಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಯ ಅಲ್ಲಲ್ಲಿ 16 ಮಿಲಿ ಮೀಟರ್ ನಿಂದ 5 ಮಿಮೀ ಮಳೆ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!