Micro credit scheme- ಮೈಕ್ರೋ ಕ್ರೆಡಿಟ್ ಯೋಜನೆಗೆ ಅರ್ಜಿ! ₹2.5 ಲಕ್ಷಕ್ಕೆ ₹1.5 ಲಕ್ಷ ಸಹಾಯಧನ!

Facebook
Twitter
Telegram
WhatsApp

ಸರಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ(Micro credit scheme) ಕಡಿಮೆ ಬಡ್ಡಿದರದಲ್ಲಿ ಮತ್ತು ಶೇ 75% ಸಬ್ಸಿಡಿಯಲ್ಲಿ ಸಾಲವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏನಿದು ಮೈಕ್ರೋ ಕ್ರೆಡಿಟ್ ಯೋಜನೆ(Micro credit yojana)? ಯಾರೆಲ್ಲ ಈ ಯೋಜನೆಯ ಪ್ರಯೋಜನ(micro loan) ಪಡೆದುಕೊಳ್ಳಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಅಂಕಣದಲ್ಲಿ ತಿಳಿಸಲಾಗಿದೆ. ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಅರ್ಹ ಅರ್ಜಿದಾರಿರಿಗೆ ಈ ಮಾಹಿತಿ ತಲುಪಿಸಲು ಸಹಕರಿಸಿ.

ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ವಿವಿಧ ಎಸ್.ಸಿ/ಎಸ್.ಟಿ ನಿಗಮಗಳಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಅಂದರೆ ಕನಿಷ್ಠ 10 ಜನ ಸದಸ್ಯರಿರುವ ಸಂಘಗಳಿಗೆ ಕಿರು ಉದ್ಯಮಿಯನ್ನು ಆರಂಭಿಸಲು ಮೈಕ್ರೋ ಕ್ರೆಡಿಟ್ ಸಾಲ(micro finance) ಮತ್ತು ಇದಕ್ಕೆ ಸಬ್ಸಿಡಿ ನೀಡಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಾಲ(finance loan) ಮತ್ತು ಸಾಲಕ್ಕೆ ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 10 ಅಕ್ಟೋಬರ್ 2024 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: four wheeler subsidy- 4.00 ಲಕ್ಷ ಸಹಾಯಧನದಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಪಡೆಯಲು ಅರ್ಜಿ ಆಹ್ವಾನ!

ಇದನ್ನೂ ಓದಿ: Crop loan farmer list-ಬೆಳೆ ಸಾಲ ಮನ್ನಾ ಅಗಿರುವ ಪಟ್ಟಿಯನ್ನು ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Micro credit loan subsidy details-ಮೈಕ್ರೋ ಕ್ರೆಡಿಟ್ ಯೋಜನೆ ಸಹಾಯಧನ ವಿವರ:

> ಒಟ್ಟು ಘಟಕ ವೆಚ್ಚ: ₹2.5 ಲಕ್ಷ
> ಸಹಾಯಧನ: ₹1.5 ಲಕ್ಷ
> ಉಳಿಕೆ ₹1.0 ಲಕ್ಷಕ್ಕೆ ಶೇ 4ರ ಬಡ್ದಿದರದಲ್ಲಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತದೆ.

How to apply for Micro credit scheme-ಅರ್ಜಿ ಸಲ್ಲಿಕೆ ಮಾಹಿತಿ:

ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ನೇರವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Land purchase scheme- 25 ಲಕ್ಷದಲ್ಲಿ ಶೇ 50% ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

documents for Micro credit subsidy scheme-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು;

1) ನಿಮ ಸ್ವ-ಸಹಾಯ ಸಂಘ ನೋಂದಣಿಯಾಗಿರುವುದರ ಪ್ರಮಾಣ ಪತ್ರ ಮತ್ತು ಪೂರಕ ದಾಖಲೆಗಳು.
2) ಸದಸ್ಯರ ಆಧಾರ್ ಕಾರ್ಡ.
3) ಸಂಘದ ಬ್ಯಾಂಕ್ ಪಾಸ್ ಬುಕ್.
4) ಸದಸ್ಯರ ಆಧಾರ್ ಕಾರ್ಡ ಪ್ರತಿ.

How can apply for Micro credit yojana- ಅರ್ಜಿ ಸಲ್ಲಿಸಲು ಅರ್ಹತೆಗಳು:

1) ಅರ್ಜಿದಾರರು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.

2) ಸಂಘವು ಅರ್ಥಿಕ ಆದಾಯ ತರಬಲ್ಲ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

3) ಎಸ್.ಸಿ/ಎಸ್.ಟಿ ವರ್ಗಕ್ಕೆ ಸೇರಿದ ಸ್ವ-ಸಹಾಯ ಸಂಘವಾಗಿರಬೇಕು.

ಇದನ್ನೂ ಓದಿ: Tractor subsidy-2024: ಟ್ರ್ಯಾಕ್ಟರ್, ಪವರ್ ಟಿಲ್ಲರ್ ಸೇರಿದಂತೆ ಸಬ್ಸಿಡಿಯಲ್ಲಿ ಯಾವೆಲ್ಲ ಯಂತ್ರ ಪಡೆಯಬಹುದು? ಇಲ್ಲಿದೆ ಸಂಪೂರ್ಣ ವಿವರ!

Micro credit scheme online application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ನಿಮ್ಮ ಮೊಬೈಲ್ ನಲ್ಲಿ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ sevasidhu ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಇಲ್ಲಿ ಮೊದಲ ಬಾರಿಗೆ ಈ ಜಾಲತಾಣವನ್ನು ಪ್ರವೇಶ ಮಾಡುತ್ತಿದ್ದರೆ ನಿಮ್ಮ ಮೊಬೈಲ್ ನಂಬರ್ ಇತರೆ ವಿವರವನ್ನು ಹಾಕಿ ನೊಂದಣಿ ಮಾಡಿಕೊಂಡು ಲಾಗಿನ್ ವಿವರವನ್ನು ನಮೂದಿಸಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಮಾಡಿಕೊಳ್ಳಿ.

Step-3: ಲಾಗಿನ್ ಅದ ನಂತರ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ “ಮೈಕ್ರೋ ಕ್ರೆಡಿಟ್ ಯೋಜನೆ ” ಎಂದು ಸರ್ಚ ಮಾಡಿ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.

Facebook
Twitter
Telegram
WhatsApp
Picture of siddesh

siddesh

Leave a Comment

Top Stories

Google Pay loan

Google Pay loan-ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ 9.0 ಲಕ್ಷದವರೆಗೆ ಲೋನ್!

ಗೂಗಲ್ ಪೇ ಮೊಬೈಲ್ ಅಪ್ಲಿಕೇಶನ್ ನಲ್ಲಿ ಬಳಕೆದಾರರು ವೈಯಕ್ತಿಕ ಸಾಲ(Google Pay loan) ಪಡೆಯಲು ಅವಕಾಶವಿದ್ದು, ಲೋನ್ ಪಡೆಯಲು ಅರ್ಜಿಯನ್ನು ಸಲ್ಲಿಸುವುದು ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಲೋನ್

D.Pharm. Admission

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ

Colgate Scholarship

Colgate Scholarship 2024 – ಕೋಲ್ ಗೇಟ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ 75 ಸಾವಿರ ವಿದ್ಯಾರ್ಥಿ ವೇತನ!

Colgate Keep India Smiling Scholarship 2024 – ಕೋಲ್ ಗೇಟ್ ಕಂಪನಿಯು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಭರ್ಜರಿ 75,000 ರೂ. ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಹ