Motor Vehicle Inspectors-2024: KPSC ಯಿಂದ ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ!

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ(Motor Vehicle Inspectors job Notification) ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಬಿಡುಗಡೆಯಾದ ಅಧಿಕೃತ ಅಧಿಸೂಚನೆಯ ವಿವರ ಇಲ್ಲಿದೆ.

Motor Vehicle Inspectors-2024: KPSC ಯಿಂದ ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ!
Motor Vehicle Inspector job notification

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ(Motor Vehicle Inspectors job Notification) ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಬಿಡುಗಡೆಯಾದ ಅಧಿಕೃತ ಅಧಿಸೂಚನೆಯ ವಿವರ ಇಲ್ಲಿದೆ.

KPSC Recruitement 2024 : ಕರ್ನಾಟಕ ಲೋಕಸೇವಾ ಆಯೋಗವು ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಎಂಬ ನೋಟಿಫಿಕೇಶನ್ನ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಿದ್ದೇವೆ.

ಇದನ್ನೂ ಓದಿ: Public exam-2024: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಕರಣ ತೆರೆ ಎಳೆದ ಹೈಕೋರ್ಟ್!

Vacancy details- ಹುದ್ದೆಗಳ ವಿವರ :

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) 
ಉದ್ಯೋಗ ಇಲಾಖೆ : ಕರ್ನಾಟಕ ಸಾರಿಗೆ ಇಲಾಖೆ
ಹುದ್ದೆಗಳ ಹೆಸರು : ಮೋಟಾರು ವಾಹನ ನಿರೀಕ್ಷಕರು(Motor Vehicle Inspectors)
ಹುದ್ದೆಗಳ ಸಂಖ್ಯೆ : 76 ಹುದ್ದೆಗಳು

How can apply for this job- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಅರ್ಹತೆಗಳು :

KPSC Recruitement 2024 : ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಮೋಟರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ, SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿ ಡಿಪ್ಲೋಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿ ಹೊಂದಿರಬೇಕು. ಜೊತೆಗೆ ವಾಹನ ಪರವಾನಗಿ ( Driving Licence ) ಹೊಂದಿರಬೇಕು.

ಇದನ್ನೂ ಓದಿ: Intelligence Bureau Recruitement 2024- ಗುಪ್ತಚರ ಇಲಾಖೆಯಲ್ಲಿ SSLC ಪಾಸಾದವರಿಗೂ ಭರ್ಜರಿ ಅವಕಾಶ! ಒಟ್ಟು 660 ಹುದ್ದೆಗಳಿಗೆ ನೇಮಕಾತಿ.

Age limit- ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆ :

KPSC Recruitement 2024 - ಕನಿಷ್ಠ 18 ವರ್ಷ ಪೂರೈಸಿದ್ದು ಗರಿಷ್ಠ 35 ವರ್ಷದ ಒಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ ಐದು ವರ್ಷ

Salary- ವೇತನ ಶ್ರೇಣಿ:

ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450/- ರಿಂದ 62,600/- ವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ: Free mushroom training- ಉಚಿತ ಅಣಬೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Application fee- ಅರ್ಜಿ ಶುಲ್ಕ:

 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 600/-
 ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 300/-
 ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ - 50/-
 ಪ. ಜಾತಿ, ಪ. ಪಂಗಡ, ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ - ಉಚಿತವಾಗಿ ಅರ್ಜಿ ಸಲ್ಲಿಸಬಹುದು.

Last date for application- ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ - 22 ಏಪ್ರಿಲ್ 2024
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ - 21 ಮೇ 2024

ಇದನ್ನೂ ಓದಿ: IPPB Recruitment 2024: ಅಂಚೆ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವುದರ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ಕೊಟ್ಟಿರುವ Apply now ಬಟನ್ ಮೇಲೆ ಕ್ಲಿಕ್ ಮಾಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಲಿಂಕ್: Apply Now
RPC Notification ಅಧಿಕೃತ ಅಧಿಸೂಚನೆ: Download Now
HK Notification ಅಧಿಕೃತ ಅಧಿಸೂಚನೆ: Download Now