Best Home loan- 2024: ಉಚಿತ ಮನೆ ಯೋಜನೆಯಡಿ ರೂ. 1 ಲಕ್ಷ ಸಹಾಯಧನ! ಈ ವಿಧಾನ ಅನುಸರಿಸಿ ಅರ್ಜಿ ಸಲ್ಲಿಸಿ.

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಯಡಿ ಸರ್ಕಾರಿ ಗೃಹ ಸಾಲ ಯೋಜನೆಯನ್ನು ಜಾರಿಗೆತರಲಾಗಿದ್ದು. ಈ ಯೋಜನೆಯನ್ನು ಜೂನ್ 2015 ರಿಂದ ಅನುಸ್ಥಾನ ಮಾಡಲಾಗುತ್ತಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶದ ಎಲ್ಲಾ ಬಡ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮನೆ ಒದಗಿಸುವ ಉದ್ದೇಶ ಹೊಂದಿದೆ.

Best Home loan- 2024: ಉಚಿತ ಮನೆ ಯೋಜನೆಯಡಿ ರೂ. 1 ಲಕ್ಷ ಸಹಾಯಧನ! ಈ ವಿಧಾನ ಅನುಸರಿಸಿ ಅರ್ಜಿ ಸಲ್ಲಿಸಿ.
Home loan scheme

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಯಡಿ ಸರ್ಕಾರಿ ಗೃಹ ಸಾಲ ಯೋಜನೆಯನ್ನು ಜಾರಿಗೆತರಲಾಗಿದ್ದು. ಈ ಯೋಜನೆಯನ್ನು ಜೂನ್ 2015 ರಿಂದ ಅನುಸ್ಥಾನ ಮಾಡಲಾಗುತ್ತಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶದ ಎಲ್ಲಾ ಬಡ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮನೆ ಒದಗಿಸುವ ಉದ್ದೇಶ ಹೊಂದಿದೆ.

ಇತ್ತೀಚೆಗೆ ಈ ಯೋಜನೆಯ ಮಾನದಂಡಗಳಲ್ಲಿ ಒಂದಿಷ್ಟು ಬದಲಾವಣೆ ಮಾಡಲಾಗಿದ್ದು, ಪ್ರಸ್ತುತ ಈ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Baal aadhaar- ಚಿಕ್ಕ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ! ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿ ತಿಳಿಯಿರಿ!

Home loan amount- ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬಹುದು?

ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಯಡಿಯಲ್ಲಿ ಸರ್ಕಾರದಿಂದ ಸಬ್ಸಿಡಿ ಮೊತ್ತವನ್ನು ನೇರವಾಗಿ  ಅರ್ಜಿ ಸಲ್ಲಿಸಿರುವ ಫಲಾನುಭವಿಯ ಬ್ಯಾಂಕ್ ಅಕೌಂಟ್ ಗೆ ವರ್ಗಾವನೆ ಮಾಡಲಾಗುತ್ತದೆ. ಈ ಯೋಜನೆಯು ನಗರ ಮತ್ತು ಗ್ರಾಮೀಣ ಎಂಬ ಎರಡು ವಿಭಾಗಗಳನ್ನು ಹೊಂದಿದ್ದು. ಈ ಯೋಜನೆ ಅಡಿಯಲ್ಲಿ ಕೊಳೆಗೇರಿಗಳಲ್ಲಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರವು ಪ್ರತಿ ಮನೆಗೆ ರೂ.1 ಲಕ್ಷ ಸಹಾಯಧನವನ್ನು ನೀಡುತ್ತದೆ.

ಇದಲ್ಲದೇ ಗೃಹ ಸಾಲವನ್ನೂ(Home loan) ಸಹ ಪಡೆಯಬಹುದು. ಇದರ ಮೇಲೆ 6.5% ವರೆಗೆ ಬಡ್ಡಿ ಸಹಾಯಧನವನ್ನು ಒದಗಿಸಲಾಗುತ್ತದೆ. ಸಾಲವನ್ನು 20 ವರ್ಷಗಳಲ್ಲಿ ಮರುಪಾವತಿ ಮಾಡಬಹುದಾಗಿದೆ.

ಇದನ್ನೂ ಓದಿ: Labour card- ಕಾರ್ಮಿಕ ಕಾರ್ಡ ಹೊಂದಿರುವವರು ಇ-ಕಾರ್ಡ ಪಡೆಯಲು ಅರ್ಜಿ ಆಹ್ವಾನ!

Pradhan Mantri Awas Yojana Beneficiary status- ಈ ಯೋಜನೆಯ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ:

ನೀವೇನಾದರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದರೆ ಈ ಕೆಳಗಿನ ವಿಧಾನವನ್ನು ಅನುಸರಿಸಿ ನಿಮ್ಮ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.

Step-1: ಪ್ರಥಮದಲ್ಲಿ ಈ PMAY Status check ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ "Search" ಆಯ್ಕೆಯ ಮೇಲೆ ಕ್ಲಿಕ್ ಮಾಡಿ "Beneficiary wise funds released" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: "Beneficiary wise funds released" ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಹಾಕಿ "Send OTP" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Crop insurance amount-2024: 13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

Step-3: "Send OTP" ಬಟನ್ ಮೇಲೆ ಕ್ಲಿಕ್ ಮಾಡಿದಾಗ "There is no fund release details available for this beneficiary" ಎಂದು ತೋರಿಸಿದರೆ ನಿಮಗೆ ಈ ಯೋಜನೆಯಡಿ ಹಣ ಸಂದಾಯವಾಗಿಲ್ಲ ಎಂದು ಒಂದೊಮ್ಮೆ OTP ಬಂದು ನಿಮ್ಮ ಹೆಸರು ಇತರೆ ವಿವರ ತೋರಿಸಿದರೆ ಈ ಯೋಜನೆಯಡಿ ನೀವು ಸೌಲಭ್ಯ ಪಡೆಯಲು ಅರ್ಹರು ಎಂದು.

PMAY(U) ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು?

Pradhan Mantri Awas Yojana ಯೋಜನೆಯಡಿ ಪ್ರಯೋಜನ ಪಡೆಯಲು ಆಸಕ್ತಿಯಿರುವ ಅರ್ಹ ನಾಗರಿಕರು ಗೂಗಲ್ ಪ್ಲೈ ಸ್ಟೋರ್ ನಲ್ಲಿ PMAY(U) ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಈ ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Annabhagya yojana- ಈ ಪಟ್ಟಿಯಲ್ಲಿರುವವರಿಗೆ ಮಾರ್ಚ-2024 ತಿಂಗಳ ಅನ್ನಭಾಗ್ಯ ಅಕ್ಕಿ ವಿತರಣೆ ಮತ್ತು ಅಕ್ಕಿ ಹಣ ವರ್ಗಾವಣೆ ಪ್ರಾರಂಭ!

PMAY(U) ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಲಿಂಕ್: Download Now

ಅಥವಾ ನಿಮ್ಮ ಹತ್ತಿರದ ಗ್ರಾಮ/ಪಟ್ಟಣ ಪಂಚಾಯತಿ ಸೇವಾ ಕೇಂದ್ರದಲ್ಲಿ ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಲು ಫಲಾನುಭವಿಗಳು ಈಗಾಗಲೇ ಸ್ವಂತ ಮನೆ ಹೊಂದಿರಬಾರದು. ಇದ್ದರೆ ಅದು ಅನ್ವಯಿಸುವುದಿಲ್ಲ ಈ ಯೋಜನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅವರು ಮನೆ ಮಾಲೀಕರಾಗಲು ಯೋಜನೆಯನ್ನು ಪಡೆದರೆ, ಅವರು ಶೀಘ್ರವಾಗಿ ಅನುಮೋದನೆ ಪಡೆಯುತ್ತಾರೆ. ಅರ್ಜಿದಾರರು ಭಾರತೀಯರಾಗಿರಬೇಕು. ಅಲ್ಲದೆ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ವಸತಿ ಯೋಜನೆಯ ಪ್ರಯೋಜನವನ್ನು ಪಡೆದಿರಬಾರದು.

ಇಡಬ್ಲ್ಯೂಎಸ್ ಅಡಿಯಲ್ಲಿ ಫಲಾನುಭವಿಯ ವಾರ್ಷಿಕ ಆದಾಯವು ರೂ.6 ಲಕ್ಷ ಮೀರಬಾರದು. ಅದೇ LIG ಅಡಿಯಲ್ಲಿ ಫಲಾನುಭವಿ ವಾರ್ಷಿಕ ಆದಾಯ ರೂ.6 ಲಕ್ಷಕ್ಕಿಂತ ಹೆಚ್ಚು ಮತ್ತು ರೂ.12 ಲಕ್ಷಕ್ಕಿಂತ ಕಡಿಮೆ ಇರಬೇಕು. MIG-I ಫಲಾನುಭವಿಯ ವಾರ್ಷಿಕ ಆದಾಯವು ರೂ.12 ಲಕ್ಷ ಅಥವಾ ರೂ.18 ಲಕ್ಷಕ್ಕಿಂತ ಕಡಿಮೆಯಿರಬೇಕು. MIG-II ಗೆ ಫಲಾನುಭವಿಯ ವಾರ್ಷಿಕ ಆದಾಯ ರೂ. 18 ಲಕ್ಷ ಮೀರಬಾರದು.

ಇದನ್ನೂ ಓದಿ: Online marriage registration- ಇನ್ನು ಮುಂದೆ ವಿವಾಹ ನೋಂದಣಿ ಭಾರೀ ಸುಲಭ ನಿಮ್ಮ ಮೊಬೈಲ್ ಮೂಲಕವೇ ನೋಂದಣಿ ಮಾಡಿ!

Required Documents for application- ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ಅರ್ಜಿದಾರರ ಆಧಾರ್ ಕಾರ್ಡ್. 
  • ವಿಳಾಸ ದೃಡೀಕರಣ.
  • ಆದಾಯ ಪ್ರಮಾಣಪತ್ರ.
  • ವಯಸ್ಸಿನ ಪ್ರಮಾಣಪತ್ರ.
  • ಅರ್ಜಿದಾರರ ಮೊಬೈಲ್ ಸಂಖ್ಯೆ.
  • ಬ್ಯಾಂಕ್ ಪಾಸ್ ಪುಸ್ತಕ ಪ್ರತಿ.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ.

ಈ ಯೋಜನೆಯ ಕುರಿತು ಉಪಯುಕ್ತ ಲಿಂಕ್ ಗಳು:

ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಧಿಕೃತ ವೆಬ್ಸೈಟ್: Click here
ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಧಿಕೃತ ವೆಬ್ಸೈಟ್-2: Click here
ಸಹಾಯವಾಣಿಗಳು: 011-23060484, 011-23063620, 011-23063567, 011-23061827