Railway SI & Constable Recruitment: 4500+ SI ಹಾಗೂ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ(RPF Recruitment notification) ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ರಕ್ಷಣಾ ಪಡೆಯು 4500 ಕ್ಕಿಂತಲೂ ಹೆಚ್ಚು ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Railway SI & Constable Recruitment: 4500+ SI ಹಾಗೂ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
railway police recruitment-2024

ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ(RPF Recruitment notification) ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ರಕ್ಷಣಾ ಪಡೆಯು 4500 ಕ್ಕಿಂತಲೂ ಹೆಚ್ಚು ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

RPF Recruitment 2024: ರೈಲ್ವೆ ರಕ್ಷಣಾ ಪಡೆಯಲ್ಲಿ ಸಬ್ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿವರ, ಹುದ್ದೆಗಳಿಗೆ ಸಂಬಂಧಿಸಿದ ಸಂಬಳ ವಿವರ ಹಾಗೂ ವಯೋಮಿತಿ ವಿವರವನ್ನು ಇಲ್ಲಿ ವಿವರಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನೀವು ಅರ್ಹರಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.

ಇದೇ ರೀತಿ ಉದ್ಯೋಗ ಮಾಹಿತಿಗಳ ಅಪ್ಡೇಟ್ಸ್ ಗಳನ್ನು ದಿನ ಪ್ರತಿ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿರಿ ಹಾಗೂ ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಹಿತೈಷಿಗಳಿಗೂ ಈ ಮಾಹಿತಿಯನ್ನು ಶೇರ್ ಮಾಡಿ.

ಇದನ್ನೂ ಓದಿ: Railway Recruitment-2024: ಆಗ್ನೇಯ ಮಧ್ಯ ರೈಲ್ವೆಯಲ್ಲಿ 999+ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!

RPF Recruitment  details- ನೇಮಕಾತಿ ವಿವರ:
 
ಇಲಾಖೆ ಹೆಸರು : ರೈಲ್ವೆ ರಕ್ಷಣಾ ಪಡೆ (RPF)
ಒಟ್ಟು ಹುದ್ದೆಗಳು : 4660 ಹುದ್ದೆಗಳು 
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ ಲೈನ್ ಮೂಲಕ

RPF Recruitment 2024- ಖಾಲಿ ಹುದ್ದೆಗಳ ವಿವರ:

ಸಬ್ ಇನ್ಸ್ಪೆಕ್ಟರ್ (Sub Inspector): 452 ಹುದ್ದೆಗಳು
ಕಾನ್ ಸ್ಟೇಬಲ್ (Constable) : 4208 ಹುದ್ದೆಗಳು 

ಇದನ್ನೂ ಓದಿ: Crop insurance amount-2024: ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ. 

Education Qualification- ಶೈಕ್ಷಣಿಕ ಅರ್ಹತೆ: 

ರೈಲ್ವೆ ರಕ್ಷಣಾ ಪಡೆ ನೇಮಕಾತಿ ಅಧಿಸೂಚನೆ ಪ್ರಕಟಣೆಯಲ್ಲಿ ತಿಳಿಸಿರುವಂತೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ಶಿಕ್ಷಣ ಅರ್ಹತೆ ನಿಗದಿಪಡಿಸಲಾಗಿದೆ. 

Monthly Salary:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವೂ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಇರುತ್ತದೆ.
• ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ - ರೂ.35,400/-
• ಕಾನ್ಸ್ಟೇಬಲ್ ಹುದ್ದೆಗಳಿಗೆ - ರೂ.21,700/-

ಇದನ್ನೂ ಓದಿ: Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ

Age limit- ವಯೋಮಿತಿ ಮಾನದಂಡ: 

ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಅನ್ವಯವಾಗುತ್ತದೆ. 

Application fee- ಅರ್ಜಿ ಶುಲ್ಕ: 

SC/ST/ಮಾಜಿ ಸೈನಿಕ/ ಮಹಿಳಾ / ಅಲ್ಪಸಂಖ್ಯಾತರು ಹಾಗೂ EWS ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವು - ರೂ.250/-

ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು - ರೂ.500/-

ಇದನ್ನೂ ಓದಿ: High Court Recruitment- ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪದವೀಧರರಿಗೆ ಉದ್ಯೋಗವಕಾಶ! 

Selection method- ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ: 

RPF Recruitment 2024 - ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಿ ನಂತರ ದೈಹಿಕ ಪರೀಕ್ಷೆಯನ್ನು ನಡೆಸಿ ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮುಖಾಂತರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 15 ಏಪ್ರಿಲ್ 2024
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 14 ಮೇ 2024

Application link- ಅರ್ಜಿ ಸಲ್ಲಿಕೆಗೆ ಪ್ರಮುಖ ಹಾಗೂ ಅವಶ್ಯಕ ಲಿಂಕ್ ಗಳು:

ಅರ್ಜಿ ಸಲ್ಲಿಸುವ ಲಿಂಕ್: Click here

ಅಧಿಕೃತ ನೋಟಿಫಿಕೇಶನ್ : Download Now