SSC Jobs Notification-2024: SSC 933 ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಣೆ

ಸಿಬ್ಬಂದಿ ನೇಮಕಾತಿ ಆಯೋಗವು(SSC Jobs Notification) ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 933 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

SSC Jobs Notification-2024: SSC 933 ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಣೆ
SSC Jobs Notification-2024

ಸಿಬ್ಬಂದಿ ನೇಮಕಾತಿ ಆಯೋಗವು(SSC Jobs Notification) ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 933 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

SSC Junior Engineer Recruitment - ಕೇಂದ್ರ ಸಿಬ್ಬಂದಿ ಆಯೋಗವು ಬಿಡುಗಡೆ ಮಾಡಿದ ನೋಟಿಫಿಕೇಶನ್ ಪ್ರಕಾರ, ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು 18 ಏಪ್ರಿಲ್ ಕೊನೆಯ ದಿನಾಂಕವಾಗಿದ್ದು, ಈ ಕೂಡಲೇ ಈ ನೇಮಕಾತಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.

ಇದನ್ನೂ ಓದಿ: KPSC WR Dept. Jobs Notification- ಜಲಸಂಪನ್ಮೂಲ ಇಲಾಖೆ ನೇಮಕಾತಿ 313 ಹುದ್ದೆಗಳಿಗೆ ಅರ್ಜಿ ಆಹ್ವಾನ!

Vacancy Details - ಇಲಾಖಾವರು ನೇಮಕಾತಿ ಹುದ್ದೆಗಳ ವಿವರ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ ಒಟ್ಟು ವಿವಿಧ 9 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. 

• ಬಾರ್ಡರ್ ರೋಡ್ ಆರ್ಗಾನೈಸೇಷನ್ - 475 
• ಬ್ರಹ್ಮಪುತ್ರ ರೋಡ್ - 02
• ಸೆಂಟ್ರಲ್ ವಾಟರ್ ಕಮಿಷನ್ - 32
• ಕೇಂದ್ರ ಲೋಕೊಪಯೋಗಿ ಇಲಾಖೆ - 217
• ಸೆಂಟ್ರಲ್ ವಾಟರ್ ಪವರ್ ರಿಸರ್ಚ್ ಸ್ಟೇಷನ್ - 02
• ರಕ್ಷಣಾ ಇಲಾಖೆ - 03
• ಫರಕ್ಕಾ ಬ್ಯಾರೇಜ್ ಪ್ರಾಜೆಕ್ಟ್ - 04
• ಮಿಲಿಟರಿ ಇಂಜಿನಿಯರ್ ಸರ್ವಿಸ್ - ಪ್ರಕಟಿಸಿಲ್ಲ 
• ನ್ಯಾಷನಕ್ ಟೆಕ್ನಿಕಲ್ ರಿಸರ್ಚ್ ಆರ್ಗಾನೈಸೇಷನ್ - 06

ಇದನ್ನೂ ಓದಿ: Loan interest- ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ!

Educational Qualification:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ 18.04.2024 ರ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ವಿಭಾಗದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ. 

Salary- ಮಾಸಿಕ ವೇತನ ಶ್ರೇಣಿ: 

ಮೂಲ ವೇತನ ರೂ. 35,400 ರಿಂದ - 1,12,400 ರೂಪಾಯಿ

Junior Engineers selection process:

ಮೊದಲು ಕಂಪ್ಯೂಟರ್ ಬೇಸಡ್ ಆಯ್ಕೆ ಪರೀಕ್ಷೆಯನ್ನು ನಡೆಸಿ, ನಂತರದಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಂಡು ದಾಖಲೆಗಳ ಪರಿಶೀಲನೆ ಮುಖಾಂತರ ನೇಮಕಾತಿ ಮಾಡಿಕೊಳ್ಳಲಾಗುವುದು. 

ಇದನ್ನೂ ಓದಿ: Free computer training- 45 ದಿನದ ಉಚಿತ ಕಂಪ್ಯೂಟರ್ ಡಿ.ಟಿ.ಪಿ ಕಲಿಕೆ ತರಬೇತಿಗೆ ಅರ್ಜಿ ಆಹ್ವಾನ!

Application fee- ಅರ್ಜಿ ಶುಲ್ಕ: 

• Gen, OBC ಹಾಗೂ EWS ಅಭ್ಯರ್ಥಿಗಳಿಗೆ - ರೂ. 100/-
• SC / ST ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಮತ್ತು ಎಲ್ಲ ವರ್ಗದ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯತಿ ನೀಡಲಾಗಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಪ್ರಕ್ರಿಯೆಯು 28 ಮಾರ್ಚ್ 2024 ರಿಂದ ಆರಂಭವಾಗಲಿದೆ ಮತ್ತು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು 18 ಏಪ್ರಿಲ್ 2024 ಕೊನೆ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 

ಇದನ್ನೂ ಓದಿ: Lok sabha election-2024: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಪರಿಶೀಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ.

ಅರ್ಜಿ ಸಲ್ಲಿಸಲು ಲಿಂಕ್: Apply Now
ಸಹಾಯವಾಣಿ : 080-25502520