SSLC Result 2024- ಅಧಿಕೃತ ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಮತ್ತು ವೆಬ್ಸೈಟ್ ಲಿಂಕ್ ಬಿಡುಗಡೆ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 (SSLC Result)ರ ಅಧಿಕೃತ ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಮತ್ತು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ.

SSLC Result 2024- ಅಧಿಕೃತ ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಮತ್ತು ವೆಬ್ಸೈಟ್ ಲಿಂಕ್ ಬಿಡುಗಡೆ!
SSLC Result date-2024

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 (SSLC Result)ರ ಅಧಿಕೃತ ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಮತ್ತು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ.

ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮಾರ್ಚ 25ರಿಂದ ಏಪ್ರಿಲ್ 6 ರವರೆಗೆ ನಡೆದಿದ್ದು ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಒಟ್ಟು 2,750 ಪರೀಕ್ಷಾ(sslc result) ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.

ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಣೆ ದಿನಾಂಕ ಮತ್ತು ಫಲಿತಾಂಶ ನೋಡುವುದರ ಕುರಿತು ಈ ಕೆಳಗಿನಂತೆ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: Parihara bank details-ಬರ ಪರಿಹಾರ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

SSLC Result date-2024: 09 ಮೇ 2024ರ ಬೆಳಗ್ಗೆ 10.30 ಗಂಟೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟವಾಗಲಿದೆ:

ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. 

ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಧಿಕೃತ ಪ್ರಕಟಣೆ ಪ್ರತಿ:

ಇದನ್ನೂ ಓದಿ: Village administrative officer-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

SSLC Result-2024 link: ಮೊಬೈಲ್ ನಲ್ಲಿ SSLC ಫಲಿತಾಂಶವನ್ನು ನೋಡುವ ವಿಧಾನ:

ವಿದ್ಯಾರ್ಥಿಗಳು ನಾಳೆ ಬೆಳಗ್ಗೆ 10-30 ರ ನಂತರ Karnataka Examination Results-2024ನ ಜಾಲತಾಣವನ್ನು ಭೇಟಿ ಮಾಡಿ ಈ ಕೆಳಗಿನ ತಿಳಿಸಿರುವ ಹಂತಗಳನ್ನು ಅನುಸರಿಸಿ ಮನೆಯಲೇ ಕುಳಿತು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನೋಡಬಹುದು.

Step-1: ಮೊದಲು ಈ ಲಿಂಕ್ SSLC Result check ಮೇಲೆ ಕ್ಲಿಕ್ ಮಾಡಿ Karnataka Examination Results ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ಇದಾದ ಬಳಿಕ ಮುಖಪುಟದಲ್ಲಿ ತೋರಿಸುವ "ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ 2024" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Step-3: ನಂತರದ ಪೇಜ್ ನಲ್ಲಿ ನಿಮ್ಮ ರೋಲ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ಹಾಕಿದರೆ ನಿಮ್ಮ SSLC ಫಲಿತಾಂಶ ಗೋಚರಿಸುತ್ತದೆ. ಇದನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: Milk incentive-2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!