Free Sewing Machine- ಉಚಿತ ಹೋಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್

ಕೇಂದ್ರ ಸರಕಾರದ ಪಿ.ಎಂ ವಿಶ್ವಕರ್ಮ(PM-Vishwakarma) ಯೋಜನೆಯಡಿ ಅರ್ಹ ಫಲಾನುಭವಿಗಳು ಉಚಿತ ಹೋಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Free Sewing Machine- ಉಚಿತ ಹೋಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್
PM-Vishwakarma application-2024

ಕೇಂದ್ರ ಸರಕಾರದ ಪಿ.ಎಂ ವಿಶ್ವಕರ್ಮ(PM-Vishwakarma) ಯೋಜನೆಯಡಿ ಅರ್ಹ ಫಲಾನುಭವಿಗಳು ಉಚಿತ ಹೋಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಪಿ.ಎಂ ವಿಶ್ವಕರ್ಮ(PM-Vishwakarma) ಯೋಜನೆಯಡಿ ಗ್ರಾಮೀಣ ಮತ್ತು ನಗರ ಭಾಗದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿರುವ ಕೌಶಲ್ಯ ತರಬೇತಿ ಕೇಂದ್ರಗಳ ಮೂಲಕ ತರಬೇತಿ ನೀಡುವುದರ ಜೊತೆಗೆ ರೂ 15,000 ಬೆಲೆಯ ಟೂಲ್ ಕಿಟ್/ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತದೆ.

ಈ ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅಗತ್ಯ ದಾಖಲಾತಿಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

Free Sewing Machine application-2024: ಟೂಲ್ ಕಿಟ್/ಹೊಲಿಗೆ ಯಂತ್ರ ವಿತರಣೆ  ವಿಧಾನ ಹೇಗಿರುತ್ತದೆ:

ಮೊದಲಿಗೆ ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಬಳಿಕ ನಿಮ್ಮ ಅರ್ಜಿ ಪರಿಶೀಲನೆಕೊಂಡು ಅಂತಿಮವಾಗಿ ಅನುಮೋದನೆ ಅದ ಬಳಿಕ,

ಅರ್ಹ ಫಲಾನುಭವಿಗಳಿಗೆ ಟೂಲ್ ಕಿಟ್/ಹೊಲಿಗೆ ಯಂತ್ರ  ಖರೀದಿ ಮಾಡಲು ಈ ಯೋಜನೆಯಡಿ ರೂ 15,000 ಮೌಲ್ಯದ ಇ-ವೋಚರ್ಸ್ ಅಥವಾ ಇ-ರುಪಿ ನೀಡಲಾಗುತ್ತದೆ. ಬ್ಯಾಂಕ್ ಮೂಲಕ ಈ ರೀತಿಯ ಪ್ರೋತ್ಸಾಗಧನದ ವೋಚರ್ಸ್ ಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತದೆ.

PM-Vishwakarma yojana training-ತರಬೇತಿ:

ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ರೂ 15,000 ಮೌಲ್ಯದ ಟೂಲ್ ಕಿಟ್ ನೀಡುವುದರ ಜೊತೆಗೆ ಸಂಬಂಧಪಟ್ಟ ಇಲಾಖೆಯಿಂದ 5 ರಿಂದ 15 ದಿನದವರೆಗೆ ಉಚಿತ ಕೌಶಲ್ಯ ತರಬೇತಿಯನ್ನು ಸಹ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:

  • ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು.
  • ಅರ್ಜಿದಾರರ ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿದಾರ ಕಳೆದ 5 ವರ್ಷಗಳಲ್ಲಿ ಕೇಂದ್ರ ಸರಕಾರದ ಮತ್ತು ರಾಜ್ಯ ಸರಕಾರದ ಯಾಉದೇ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಪಡೆದಿರಬಾರದು.
  • ಸರಕಾರಿ ಇಲಾಖೆಯಲ್ಲಿ ಉದ್ಯೋಗ ಮಾಡುವವರು ಅವರ ಕುಟುಂಬದವರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

Required Documents for PM-Vishwakarma yojana- ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
2) ರೇಷನ್ ಕಾರ್ಡ ಪ್ರತಿ.
3) ಬ್ಯಾಂಕ್ ಪಾಸ್ ಬುಕ್ ಪ್ರತಿ.
4) ಸ್ವ-ಉದ್ಯೋಗ ಪ್ರಮಾಣ ಪತ್ರ(ನಿಮ್ಮ ಗ್ರಾಮ ಪಂಚಾಯತಿಯಿಂದ ಪಡೆಯಬೇಕು).
5) ಅರ್ಜಿದಾರರ ಮೊಬೈಲ್ ಸಂಖ್ಯೆ.

PM-Vishwakarma yojana application link-ಎಲ್ಲಿ ಅರ್ಜಿ ಸಲ್ಲಿಸಬೇಕು?

ವಿಧಾನ-1: ಗ್ರಾಮ ಒನ್ ಅಥವಾ ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ/ಗ್ರಾಮ ಪಂಚಾಯತಿನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ/ಗ್ರಾಮ ಪಂಚಾಯತಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ವಿಧಾನ-2: ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬಹುದು.

Step-1: PM-Vishwakarma yojana application  ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಭೇಟಿ ಮಾಡಬೇಕು ಬಳಿಕ ನಿಮ್ಮ ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ ವಿವರ ದಾಖಲಿಸಿ ವೇರಿಪಿಕೇಶ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: ration card- ಇಂದು ಮತ್ತು ನಾಳೆ ಈ ಜಿಲ್ಲೆಗಳಲ್ಲಿ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Step-2: ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಇಲ್ಲಿ ವಿಭಾಗವಾರು ಈ ಯೋಜನೆಯ ವಿವರ ತೋರಿಸುತ್ತದೆ ನಿಮಗೆ ಅಗತ್ಯ ವಿರುವುದನ್ನು ಕ್ಲಿಕ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ.

PM-Vishwakarma yojana helpline: ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ: Click here
ಯೋಜನೆಯ ಅಧಿಕೃತ ವೆಬ್ಸೈಟ್ ಲಿಂಕ್: Click here
ಅರ್ಜಿ ಸಲ್ಲಿಸಲು ಲಿಂಕ್: Apply Now
ಸಹಾಯವಾಣಿಗಳು: 8904754707

ಇದನ್ನೂ ಓದಿ: ಈ ಜಿಲ್ಲೆಗಳಲ್ಲಿ ಮೊದಲ ಕಂತಿನ ಬರ ಪರಿಹಾರ ರೈತರ ಖಾತೆಗೆ ಬಿಡುಗಡೆ!